LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜೆಡಿಎಸ್ ಮಾಜಿ ಶಾಸಕ ಸಿಐಡಿ ವಶಕ್ಕೆ

ಹಾಸನ: ಬಗರ್ ಹುಕುಂ ಜಮೀನನ್ನು ಅಕ್ರಮವಾಗಿ ಮಂಜೂರಾತಿ ಮಾಡಿದ ಆರೋಪದಲ್ಲಿ ಹಾಸನ ಜಿಲ್ಲೆ ಬೇಲೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್‌ ಮಾಜಿ ಶಾಸಕ ಕೆ.ಎಸ್. ಲಿಂಗೇಶ್ ಅವರನ್ನು ಸಿಐಡಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಬೇಲೂರು ಬಗರ್ ಹುಕ್ಕುಂ ಸಮಿತಿ ಅಧ್ಯಕ್ಷರಾಗಿದ್ದ ವೇಳೆ 2016 ರಿಂದ 2022ರ ನಡುವೆ ಬರೋಬ್ಬರಿ 2,750 ಎಕರೆ ಸರ್ಕಾರಿ ಜಮೀನುಗಳನ್ನು ನಿಯಮಬಾಹಿರವಾಗಿ ಮಂಜೂರು ಮಾಡಲಾಗಿದೆ ಎಂದು ಕೋಲಾರದ ಸಾಮಾಜಿಕ ಕಾರ್ಯಕರ್ತ ರಮೇಶ್‌ ಕುಮಾರ್ ದಾಖಲಿಸಿದ್ದ ದೂರಿನ ಮೇರೆಗೆ ಸಿಐಡಿ ಅಧಿಕಾರಿಗಳು, ಹಳೇಬೀಡಿನ ಅವರ ನಿವಾಸದಲ್ಲೇ ಸಿಐಡಿ ಅಧಿಕಾರಿಗಳು ಲಿಂಗೇಶ್ ಅವರನ್ನು ವಶಕ್ಕೆ ಪಡೆದಿದ್ದಾರೆ.

ಜೆಡಿಎಸ್ ನಿಂದ 2018ರಲ್ಲಿ ಗೆದ್ದು ಶಾಸಕರಾಗಿದ್ದ ಕೆ.ಎಸ್.ಲಿಂಗೇಶ್, ಬಗರ್ ಹುಕುಂ ಕಮಿಟಿಯ ಅಧ್ಯಕ್ಷರಾಗಿದ್ದರು. ಬರೋಬ್ಬರಿ 2,750 ಎಕರೆ ಸರ್ಕಾರಿ ಜಮೀನುಗಳನ್ನು ನಿಯಮಬಾಹಿರವಾಗಿ ಮಂಜೂರು ಮಾಡಲಾಗಿದೆ ಎಂದು ಕೋಲಾರದ ಸಾಮಾಜಿಕ ಕಾರ್ಯಕರ್ತ ರಮೇಶ್‌ ಕುಮಾರ್ ಎಂಬುವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಬೇಲೂರು ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿತ್ತು. ಬಳಿಕ ಈ ಪ್ರಕರಣವನ್ನು ಸಿಐಡಿಗೆ ಹಸ್ತಾಂತಿರಿಸಲಾಗಿತ್ತು.

ದೂರಿನಲ್ಲಿ ಸುಮಾರು 2750 ಎಕರೆ ಸರ್ಕಾರಿ ಜಮೀನನನ್ನು ನಕಲಿ ದಾಖಲೆಗಳ ಆಧಾರದ ಮೇಲೆ 1430 ಬೋಗಸ್ ಫಲಾನುಭವಿಗಳಿಗೆ ಮಂಜೂರು ಮಾಡಲಾಗಿದೆ ಎಂದು ಆರೋಪಿಸಲಾಗಿತ್ತು. ಈ ಸಂಬಂಧ ಮಾಜಿ ಶಾಸಕ ಲಿಂಗೇಶ್ ಸೇರಿದಂತೆ ಇತರರ ವಿರುದ್ಧ ವಿವಿಧ ಸೆಕ್ಷನ್​​ಗಳಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ನಂತರದ ಬಂಧನ ಭೀತಿ ಎದುರಾಗುತ್ತಿದ್ದಂತೆಯೇ ಲಿಂಗೇಶ್ ಹಾಗೂ ಇತರರು ಅವರು ತಮ್ಮ ವಿರುದ್ಧ ಪ್ರಕರಣ ರದ್ದತಿ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್​ ವಜಾ ಮಾಡಿತ್ತು. ಇದರ ಬೆನ್ನಲ್ಲೇ ಇದೀಗ ಸಿಐಡಿ ಪೊಲೀಸರು ಲಿಂಗೇಶ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
ಕಲ್ಯಾಣ ಕರ್ನಾಟಕ ಜನತೆಗೆ ಗುಡ್ ನ್ಯೂಸ್: KKRTC ಗೆ 400 ಹೊಸ ಬಸ್ ಮಂಜೂರುಮನೆಗಳ್ಳತನ ಪ್ರಕರಣದಲ್ಲಿ ಇಬ್ಬರು ಅಪ್ರಾಪ್ತರು ವಶಕ್ಕೆ: ಲಕ್ಷಾಂತರ ರೂ. ಮೌಲ್ಯದ ಆಭರಣ ವಶಬಾಂಗ್ಲಾದೇಶದ ನೂತನ ಅಧ್ಯಕ್ಷರಾಗಿ BNP ಅಭ್ಯರ್ಥಿ ಮಿರ್ಜಾ ಫಖ್ರುಲ್ ಇಸ್ಲಾಂ ಅಲಂಗೀರ್ ಆಯ್ಕೆBREAKING: ಲಡಾಖ್ ನಲ್ಲಿ ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್ ಪೀಠ ಸ್ಥಾಪನೆಗೆ ಕೇಂದ್ರ ನಿರ್ಧಾರ: ಅಮಿತ್ ಶಾ ಘೋಷಣೆಅನುಮತಿ ಇಲ್ಲದೆ ಸಚಿವ ಕೃಷ್ಣ ಬೈರೇಗೌಡರ ಪೋಸ್ಟರ್ ಅಂಟಿಸಿದ್ದ ವ್ಯಕ್ತಿ ವಿರುದ್ಧ ಕೇಸ್ ದಾಖಲುಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿKPME ಉಲ್ಲಂಘನೆ: ಖಾಸಗಿ ವೈದ್ಯಕೀಯ ಸಂಸ್ಥೆಗಳಿಗೆ ದಂಡ, ಪರವಾನಗಿ ರದ್ದುಮೋದಿ ದೇವರಿಗೆ ಪೂಜೆ: ಭಕ್ತರಿಂದ ‘ಜೈ ಜೈ ಮೋದಿ, ಹರ್ ಹರ್ ಮೋದಿ’ ಘೋಷಣೆ; ದೆಹಲಿ ಪ್ರೆಸ್ ಕ್ಲಬ್‌ನಲ್ಲಿ ‘ಮೋದಿ ಚಾಲೀಸಾ’ ಕಾರ್ಯಕ್ರಮ!ತಪ್ಪಾಯ್ತು ಕ್ಷಮಿಸಿಬಿಡಿ: ರಸ್ತೆ ಮುಚ್ಚಿದ್ದಕ್ಕೆ ಭಾರತೀಯ ಸೇನೆಗೆ ‘ನಾನು GenZ’ ಎಚ್ಚರಿಕೆ ನೀಡಿದ್ದ ಯುವತಿಯಿಂದ ಕ್ಷಮೆಯಾಚನೆಲೋಕಸಭಾ ಕ್ಷೇತ್ರ ಹೆಚ್ಚಳ ಮಾಡಬಾರದು; 1971ರ ಜನಸಂಖ್ಯೆ ಆಧಾರವನ್ನು ಗೌರವಿಸಬೇಕು ಸಿಎಂ ಡಿ.ಕೆ.ಶಿವಕುಮಾರ್ ಮನವಿ