LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪರಿಷತ್ ಚುನಾವಣೆಯಲ್ಲಿ ಅಡ್ಡಮತದಾನ: ರಾಜ್ಯ ಬಿಜೆಪಿ ನಾಯಕರಿಗೆ ಹೈಕಮಾಂಡ್ ಬುಲಾವ್; ನಾಯಕತ್ವದ ಬಗ್ಗೆ ಅಸಮಾಧಾನ

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಕೆಲ ಬಿಜೆಪಿ ಶಾಸಕರು ಅಡ್ಡಮತದಾನ ಮಾಡಿರುವ ಹಿನ್ನೆಲೆಯಲ್ಲಿ ಹೈಕಮಾಂಡ್ ನಾಯಕರು ಗರಂ ಆಗಿದ್ದು, ರಾಜ್ಯ ಬಿಜೆಪಿ ನಾಯಕರಿಗೆ ಬುಲಾವ್ ನೀಡಿದ್ದಾರೆ.

ಪರಿಷತ್ ಚುನಾವಣೆಯಲ್ಲಿ ಒಗ್ಗಟ್ಟು ಪ್ರದರ್ಶಿಸಬೇಕಿದ್ದ ವಿಪಕ್ಷಗಳ ಶಾಸಕರು ಬಿಜೆಪಿ-ಜೆಡಿಎಸ್ ಮೈತ್ರಿಗೆ ಕೈಕೊಟ್ಟಿದ್ದಾರೆ. ಬಿಜೆಪಿ, ಜೆಡಿಎಸ್ ಶಾಸಕರು ಪಕ್ಷಕ್ಕೆ ಕೈಕೊಟ್ಟಿದ್ದು, 11 ಶಾಸಕರು ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತ ಹಾಕಿದ್ದಾರೆ. ಇದು, ದೋಸ್ತಿಗಳಿಗೆ ಮುಖಭಂಗವಾಗುವಂತೆ ಮಾಡಿದೆ. ಇದರ ಬೆನ್ನಲ್ಲೇ ಬಿಜೆಪಿ ನಾಯಕರಿಗೆ ಹೈಕಮಾಂಡ್ ಬುಲಾವ್ ನೀಡಿದೆ.

ಶಾಸಕರ ಅಡ್ಡಮತದಾನವನ್ನು ಬಿಜೆಪಿ ಹೈಕಮಾಂಡ್ ಗಂಭೀರವಾಗಿ ಪರಿಗಣಿಸಿದ್ದು, ರಾಜ್ಯ ನಾಯಕರಿಗೆ ದೆಹಲಿಗೆ ಬರುವಂತೆ ಕರೆ ನೀಡಿದೆ. ಅಡ್ಡಮತದಾನದಿಂದ ನಾಯಕತ್ವದ ಮೇಲೆ ಅಸಮಾಧಾನಗೊಂಡಿರುವ ಹೈಕಮಾಂಡ್ ಈ ಬಗ್ಗೆ ಚರ್ಚಿಸಲು ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಪಕ್ಷ ನಾಯಕ ಆರ್ ಅಶೋಕ್ ಹಾಗೂ ರಾಜ್ಯ ಬಿಜೆಪಿ ಉಸ್ತುವಾರಿ ರಾಧಾಮೋಹನ್ ದಾಸ್ ಅವರಿಗೆ ದೆಹಲಿಗೆ ಬರುವಂತೆ ತಿಳಿಸಿದೆ.

ಕಾಂಗ್ರೆಸ್ ಬೆಂಬಲಿಸಿದವರಿಗೆ ಮುಂದಿನ ಚುನಾವಣೆಗೆ ಟಿಕೆಟ್, ಬಿಜೆಪಿ-ಜೆಡಿಎಸ್ ಶಾಸಕರ ಅಭಿವೃದ್ಧಿಗೆ ಅನುದಾನದ ಭರವಸೆ ಕೊಟ್ಟಿರೋ ಮಾತು ರಾಜಕೀಯ ಪಡಸಾಲೆಯಲ್ಲಿ ಹರಿದಾಡ್ತಿದೆ. ಕೇಸರಿ-ದಳ ಶಾಸಕರಿಗೆ ಸಕಲ ರೀತಿಯಲ್ಲಿ ಸಹಾಯ ಹಸ್ತ ಭರವಸೆ ಕಾರಣಕ್ಕೆ ಕ್ರಾಸ್ ವೋಟಿಂಗ್ ಆಗಿರೋದಾಗಿ ತಿಳಿದುಬಂದಿದೆ.

ವಿಧಾನ ಪರಿಷತ್ ಕದನದಲ್ಲಿ ಕಾಂಗ್ರೆಸ್ ಗೆದ್ದು ಬೀಗಿದೆ. ರಾಜ್ಯ ಕಾಂಗ್ರೆಸ್​ನೊಳಗೆ ಆತಂರಿಕ ಕಲಹ, ಅಧಿಕಾರಕ್ಕೆ ಕಿತ್ತಾಟ ಎಂದು ಸದಾಕಾಲ ವಾಗ್ದಾಳಿ ನಡೆಸುತ್ತಿದ್ದ ವಿಪಕ್ಷಗಳಲ್ಲೇ ಇದೀಗ ದೊಡ್ಡ ಬಿರುಕು ಇರೋದು ಬಯಲಾಗಿದೆ. ಮೈತ್ರಿಯೊಳಗಿನ ಅಸಮಾಧಾನ, ಗೊಂದಲದ ಬಗ್ಗೆ ಹೊಸ ಚರ್ಚೆ ಆರಂಭವಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?