LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮೇಕೆದಾಟು ಯೋಜನೆ ವಿರುದ್ಧ ತಿರುಗಿಬಿದ್ದ ಟಿವಿಕೆಗೆ ಕೊಟ್ಟಿರುವ ಬೆಂಬಲವನ್ನು ಕಾಂಗ್ರೆಸ್ ಹಿಂಪಡೆಯಲಿ; ಆರ್ ಅಶೋಕ್ ಸವಾಲು

ಬೆಂಗಳೂರು: ತಮಿಳುನಾಡಲ್ಲಿ ಟಿವಿಕೆ ಪಕ್ಷದ ಸರ್ಕಾರ ಮೇಕೆದಾಟು ಯೋಜನೆಗೆ ವಿರುದ್ಧವಾಗಿ ನಿರ್ಣಯ ಕೈಗೊಂಡಿದೆ. ಈಗ ಕಾಂಗ್ರೆಸ್‌ ತನ್ನ ಬೆಂಬಲವನ್ನು ಹಿಂಪಡೆಯಲಿ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಸವಾಲು ಹಾಕಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಿಳುನಾಡಲ್ಲಿ ಡಿಎಂಕೆ ಬೆನ್ನಿಗೆ ಚೂರಿ ಹಾಕಿದ ಕಾಂಗ್ರೆಸ್‌, ಟಿವಿಕೆ ಜೊತೆ ಸೇರಿಕೊಂಡಿದೆ. ಅದೇ ಟಿವಿಕೆ ಪಕ್ಷ ಈಗ ಮೇಕೆದಾಟು ಯೋಜನೆ ಜಾರಿಯಾಗಲು ಬಿಡುವುದಿಲ್ಲ ಎಂದು ನಿರ್ಣಯ ಕೈಗೊಂಡಿದೆ. ಕಾಂಗ್ರೆಸ್‌ ಪಕ್ಷಕ್ಕೆ ಧೈರ್ಯವಿದ್ದರೆ ಟಿವಿಕೆಗೆ ನೀಡಿದ ಬೆಂಬಲವನ್ನು ವಾಪಸ್‌ ಪಡೆಯಬೇಕು. ಇಲ್ಲವಾದರೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಡಬಲ್‌ ಸ್ಟಾಂಡರ್ಡ್‌ ಹಾಗೂ ಎರಡು ನಾಲಿಗೆ ಎಂದು ಒಪ್ಪಿಕೊಳ್ಳಬೇಕು. ಕಾಂಗ್ರೆಸ್‌ ಸರ್ಕಾರ ಇರುವವರೆಗೂ ಮೇಕೆದಾಟು ಯೋಜನೆ ಜಾರಿಯಾಗಲು ಸಾಧ್ಯವಿಲ್ಲ. ಇವರು ಪಾದಯಾತ್ರೆ ಮಾಡಿದ್ದು ಕೇವಲ ಮತಕ್ಕಾಗಿ ಎಂದು ಟೀಕೆ ಮಾಡಿದರು.

ಕಾಂಗ್ರೆಸ್‌ ಸರ್ಕಾರ ರೇಷನ್‌ ಕಾರ್ಡ್‌ಗಳಿಗೆ ಕತ್ತರಿ ಹಾಕಿ ಗ್ಯಾರಂಟಿ ಫಲಾನುಭವಿಗಳನ್ನು ಕಡಿಮೆ ಮಾಡುತ್ತಿದೆ. ಉಚಿತ ವಿದ್ಯುತ್‌ ಪಡೆಯುವ ಯೋಜನೆಯಲ್ಲೂ ಬೋಗಸ್‌ ಇದೆ ಎನ್ನುತ್ತಿದ್ದಾರೆ. ಸುಮಾರು 20 ಲಕ್ಷ ಫಲಾನುಭವಿಗಳನ್ನು ಕಡಿಮೆ ಮಾಡಲು ಕುತಂತ್ರ ಮಾಡಲಾಗಿದೆ. 1.20 ಲಕ್ಷ ಕೋಟಿ ಸಾಲವಿದ್ದು, ಅದಕ್ಕೆ ಬಡ್ಡಿ ಕಟ್ಟಲು ಕೂಡ ಆಗುತ್ತಿಲ್ಲ. ನೌಕರರಿಗೆ ಸಂಬಳ ಕೂಡ ನೀಡುತ್ತಿಲ್ಲ. ನಾಲ್ಕು ತಿಂಗಳಿಂದ ಅನೇಕ ಪಿಂಚಣಿಗಳನ್ನು ನೀಡಿಲ್ಲ. ಪಿಂಚಣಿ ನೀಡಿಲ್ಲವೆಂದರೆ ಸರ್ಕಾರ ಪಾಪರ್‌ ಆಗಿದೆ ಎಂದೇ ಅರ್ಥ ಎಂದರು.

ಮಳೆ ಕಡಿಮೆಯಾಗಿರುವುದರಿಂದ ಬರ ಶುರುವಾಗಲಿದೆ. ಮುಂದೆ ಹಸುಗಳಿಗೆ ಮೇವು ಇರುವುದಿಲ್ಲ. ಇಂತಹ ಸಮಯದಲ್ಲಿ ಮೇವು ನೀಡುವ ಬಿಡದಿಯಲ್ಲಿ ಲೇಔಟ್‌ ಮಾಡಲು ಮುಂದಾಗಿದ್ದಾರೆ. ರಾಜ್ಯದಲ್ಲಿ ಆಹಾರ ಧಾನ್ಯಗಳ ಕೊರತೆಗೆ ಏನು ಯೋಜನೆ ರೂಪಿಸುತ್ತಿದ್ದಾರೆ ಎಂದು ತಿಳಿದಿಲ್ಲ. ಸಿದ್ದರಾಮಯ್ಯನವರಿಗೆ ಆಡಳಿತದ ಬಗ್ಗೆ ಗೊತ್ತಿತ್ತು. ಆದರೆ ಸಿಎಂ ಡಿ.ಕೆ.ಶಿವಕುಮಾರ್‌ಗೆ ರಾಜಕೀಯ ಗೊತ್ತಿದೆಯೇ ಹೊರತು ಆಡಳಿತದ ಬಗ್ಗೆ ಏನೂ ಗೊತ್ತಿಲ್ಲ ಎಂದರು.

ಅಡ್ಡ ಮತದಾನ

ಅಡ್ಡ ಮತದಾನ ಮಾಡಿರುವುದರ ಬಗ್ಗೆ ಹಲವು ಮಾಹಿತಿ ಬಂದಿದೆ. ಈ ಬಗ್ಗೆ ಸಮಿತಿ ರಚಿಸಿದ್ದು, ಸತ್ಯ ಹೊರಬರಲಿದೆ. ಪಕ್ಷಕ್ಕೆ ಚೂರಿ ಹಾಕಿದ ಖದೀಮರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಅಡ್ಡ ಮತದಾನ ಮಾಡಿದ್ದು ಯಾರೆಂದು ತಿಳಿಯಲು ಸ್ವಲ್ಪ ಸಮಯ ಬೇಕಾಗುತ್ತದೆ. ಕೆಲವರು ಹಣ ಪಡೆದು ಮತ ಚಲಾಯಿಸಿದ್ದಾರೆ. ಕೋಟ್ಯಂತರ ಹಣ ಹಾಗೂ ಅನುದಾನದ ವಿಚಾರ ಹೊರಬರಲಿದೆ. ಮತದಾನದ ಸಮಯದಲ್ಲಿ ಯಾರು ಎಲ್ಲಿದ್ದರು, ಯಾರು ಯಾರೊಂದಿಗೆ ಮಾತಾಡಿದ್ದರು ಎಂಬ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಈ ವಿಚಾರವನ್ನು ಕೇಂದ್ರದ ನಾಯಕರ ಗಮನಕ್ಕೂ ತರಲಾಗಿದೆ. ಮುಂದಿನ ವಾರ ಬಂದು ಭೇಟಿ ಮಾಡುವಂತೆ ಕೇಂದ್ರದ ನಾಯಕರು ಸೂಚಿಸಿದ್ದಾರೆ. ಆ ಸಮಯದಲ್ಲಿ ವರದಿ ನೀಡುತ್ತೇವೆ. ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರೊಂದಿಗೆ ಚರ್ಚೆ ಮಾಡಿದ್ದು, ಅವರಿಗೂ ಇದರಿಂದ ಬೇಸರವಾಗಿದೆ. ಇದಕ್ಕೆ ಸರಿಯಾದ ಉತ್ತರ ನೀಡುತ್ತೇವೆ. ಇದು ಬಿಜೆಪಿ ಅಥವಾ ಜೆಡಿಎಸ್‌ನಿಂದ ಆಗಿದೆ ಎಂದು ಹೇಳಲ್ಲ. ಮೋಸ ಮಾಡಿರುವವರು ಯಾರು ಎಂದು ಕಂಡುಹಿಡಿಯುತ್ತೇವೆ. ಅಡ್ಡ ಮತದಾನ ಮಾಡಿರುವವರು ಮತ್ತೆ ಶಾಸಕರಾಗದಂತೆ ನೋಡಿಕೊಳ್ಳುತ್ತೇವೆ ಎಂದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?