LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಡಿಕ್ಕಿ ರಭಸಕ್ಕೆ ಹೊತ್ತಿ ಉರಿದ ಎರಡು ಲಾರಿಗಳು

ಬೆಳಗಾವಿ: ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ಲಾರಿಗಳ ನಡುವೆ ಭೀಕರ ಅಪಘಾತ ಸಂಭವಿಸಿ ಎರಡೂ ಲಾರಿಗಳು ಹೊತ್ತಿ ಉರಿದ ಘಟನೆ ನಡೆದಿದೆ.

ಲಾರಿಗೆ ಹಾಲಿನ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಹೆದ್ದಾರಿಯಲ್ಲೇ ಎರಡೂ ಲಾರಿಗಳು ಹೊತ್ತಿ ಉರಿದಿವೆ. ಬೆಳಗಾವಿ ಜಿಲ್ಲೆಯ ಎಂ.ಕೆ ಹುಬ್ಬಳ್ಳಿ ಪಟ್ಟಣದ ಬಳಿ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ.

ಗೋವಿನ ಜೋಳದ ಮೂಟೆ ಹೊತ್ತು ಸಾಗುತ್ತಿದ್ದ ಲಾರಿಗೆ ಹಾಲಿನ ಟ್ಯಾಂಕರ್ ಡಿಕ್ಕಿ ಹೊಡೆದಿದೆ. ಅಪಘಾತದ ಪರಿಣಾಮ ಎರಡೂ ಲಾರಿಗಳಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ. ಘಟನೆಯಲ್ಲಿ ಅದೃಷ್ಟವಶಾತ್ ಲಾರಿ ಚಾಲಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಘಟನೆಯಿಂದಾಗಿ ಕೆಲಹೊತ್ತು ರಾಷ್ಟ್ರೀಯ ಹೆದ್ದಾರಿ ಮೇಲೆ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿ ಬೆಂಕಿ ನಂದಿಸಲು ಹರಸಾಹಸಪಟ್ಟಿದ್ದಾರೆ. ಕಿತ್ತೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಇನ್ಮೇಲೆ ಡೆಡ್ ಬಾಡಿ ಮೇಲೆ ಬಿಲ್ ವಸೂಲಿ ಬಂದ್ : ಮೃತದೇಹ ಹಸ್ತಾಂತರಕ್ಕೆ ಶೀಘ್ರ ಹೊಸ ಪಾಲಿಸಿ!ಬೆಂಗಳೂರಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯ ಬರ್ಬರ ಹತ್ಯೆ!BREAKING : ಖಾಸಗಿ ಆಸ್ಪತ್ರೆಗಳ ಕಳ್ಳಾಟಕ್ಕೆ ಬ್ರೇಕ್ : ಇನ್ಮುಂದೆ ರಶೀದಿಯಲ್ಲಿ ಔಷಧಗಳ ಬೆಲೆ ನಮೂದು ಕಡ್ಡಾಯ!🌺🌼🔱 ನವರಾತ್ರಿ ಮೊದಲನೇ ದಿನ – ಶ್ರೀ ಶೈಲಪುತ್ರಿ ದೇವಿ ಆರಾಧನೆ 🔱🌼🌺BIG NEWS : ಹಬ್ಬದ ಸಂದರ್ಭದಲ್ಲೆ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ : ರಾಜ್ಯದಲ್ಲಿ ಗಗನಕ್ಕೇರಿದ ಅಕ್ಕಿ, ತೊಗರಿಬೇಳೆ ಬೆಲೆ!GOOD NEWS : 'KSRTC' ಯಿಂದ ದಸರಾ ಸಂಭ್ರಮಕ್ಕೆ ಸ್ಪೆಷಲ್ ಗಿಫ್ಟ್: 3,000ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಸಂಚಾರ!ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!