LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಗೃಹಲಕ್ಷ್ಮಿ , ಗೃಹಜ್ಯೋತಿ ದುರ್ಬಳಕೆ ತಡೆಗೆ ಸಿಎಂ ಡಿ.ಕೆ ಶಿವಕುಮಾರ್ ಎಚ್ಚರಿಕೆ ; ತಾಂತ್ರಿಕ ಸಮಸ್ಯೆ ಪರಿಹಾರಕ್ಕೆ ಗಡುವು

ರಾಜ್ಯದ ಗ್ಯಾರಂಟಿ ಯೋಜನೆಗಳ ದುರ್ಬಳಕೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮುಂದಾಗಿದೆ. ವಿಧಾನಸೌಧದಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಅರ್ಹ ಫಲಾನುಭವಿಗಳಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳುವ ಜೊತೆಗೆ ಅನರ್ಹರು ಹಾಗೂ ನಕಲಿ ಫಲಾನುಭವಿಗಳನ್ನು ಗುರುತಿಸಿ ಯೋಜನೆಗಳಿಂದ ಹೊರಗಿಡುವಂತೆ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು. ಮೃತರ ಖಾತೆಗಳಿಗೆ ಹಣ ಜಮೆಯಾಗುವುದು, ಒಂದೇ ಖಾತೆಗೆ ಹಲವು ಫಲಾನುಭವಿಗಳ ನೋಂದಣಿ ಹಾಗೂ ಹೊರರಾಜ್ಯದ ಖಾತೆಗಳಿಗೆ ಹಣ ವರ್ಗಾವಣೆಯಾಗುತ್ತಿರುವ ಬಗ್ಗೆ ಸಿಎಂ ಡಿಕೆಶಿ ಆತಂಕ ವ್ಯಕ್ತಪಡಿಸಿದರು.

ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಪರಿಶೀಲನಾ ಸಭೆಯಲ್ಲಿ ಅರ್ಹ ಫಲಾನುಭವಿಗಳ ಹಿತಕಾಯುವ ಜೊತೆಗೆ ಅನರ್ಹರನ್ನು ಯೋಜನೆಯಿಂದ ಹೊರಗಿಡುವ ಸಂಬಂಧ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೆಲವು ಸೂಚನೆಗಳನ್ನು ನೀಡಿದರು. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ ದುರ್ಬಳಕೆಯನ್ನು ತಡೆಗಟ್ಟುವ ಜೊತೆಗೆ ಅರ್ಹ ಫಲಾನುಭವಿಗಳ ಹಿತವನ್ನು ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮುಂದಾಗಿದೆ. ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹಲವು ಮಹತ್ವದ ಸೂಚನೆಗಳನ್ನು ಅಧಿಕಾರಿಗಳಿಗೆ ನೀಡಿದರು.

ಯೋಜನೆಗಳ ದುರ್ಬಳಕೆಗೆ ಮಾತ್ರ ಕಡಿವಾಣ ಹಾಕಬೇಕು, ಆದರೆ ಒಬ್ಬರೂ ಅರ್ಹ ಫಲಾನುಭವಿಗೆ ತೊಂದರೆಯಾಗಬಾರದು ಎಂದು ಅವರು ಸ್ಪಷ್ಟಪಡಿಸಿದರು. ಬ್ಯಾಂಕ್ ಸಾಲದ ಖಾತೆಗಳಿಗೆ ಗೃಹಲಕ್ಷ್ಮಿ ಹಣ ಜಮೆಯಾಗುತ್ತಿರುವ ಕಾರಣ ಅನೇಕ ಫಲಾನುಭವಿಗಳು ಖಾತೆ ಬದಲಾವಣೆ ಮಾಡಿಕೊಂಡಿದ್ದಾರೆ. ಇಂತಹವರಿಗೆ ಯಾವುದೇ ಸಮಸ್ಯೆಯಾಗದಂತೆ ಕ್ರಮ ವಹಿಸುವಂತೆ ಸೂಚಿಸಿದರು.

ಮೃತಪಟ್ಟ ಫಲಾನುಭವಿಗಳ ಖಾತೆಗಳಿಗೆ ಗೃಹಲಕ್ಷ್ಮಿ ಹಣ ಜಮೆಯಾಗುತ್ತಿರುವುದು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಈ ರೀತಿಯ ಅವ್ಯವಹಾರಗಳಿಗೆ ತಕ್ಷಣ ತಡೆ ಹಾಕುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಗೃಹಲಕ್ಷ್ಮಿ ಹಣ ಖಾತೆಗೆ ಜಮೆಯಾದ ಕೂಡಲೇ ಫಲಾನುಭವಿಗಳ ಮೊಬೈಲ್‌ಗೆ ವಾಯ್ಸ್ ಮೆಸೇಜ್ ಮೂಲಕ ಮಾಹಿತಿ ನೀಡುವ ವ್ಯವಸ್ಥೆ ಜಾರಿಗೊಳಿಸುವಂತೆಯೂ ತಿಳಿಸಿದರು.

ಅಕೌಂಟೆಂಟ್ ಜನರಲ್ (ಎಜಿ) ವರದಿಯಲ್ಲಿ ಬಹಿರಂಗಗೊಂಡಿರುವ ಅಂಶಗಳ ಬಗ್ಗೆ ಗಂಭೀರ ಕಳವಳ ವ್ಯಕ್ತಪಡಿಸಿದ ಅವರು, ಒಂದೇ ಬ್ಯಾಂಕ್ ಖಾತೆಯಲ್ಲಿ ಹಲವು ಫಲಾನುಭವಿಗಳು ಗೃಹಲಕ್ಷ್ಮಿ ಹಣ ಪಡೆಯುತ್ತಿರುವುದು ಹಾಗೂ ಒಬ್ಬರೇ ಹಲವು ಖಾತೆಗಳನ್ನು ನೋಂದಾಯಿಸಿಕೊಂಡಿರುವುದು ಕಂಡುಬಂದಿದೆ. ಈ ಮೂಲಕ ಸುಮಾರು ₹60 ಕೋಟಿ ಹಣ ದುರ್ಬಳಕೆಯಾಗಿರುವ ಸಾಧ್ಯತೆಗಳ ಬಗ್ಗೆ ವರದಿ ಉಲ್ಲೇಖಿಸಿರುವುದರಿಂದ ಕೂಡಲೇ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ರಾಜ್ಯದ ಯೋಜನೆಗಳ ಲಾಭ ರಾಜ್ಯದ ಜನರಿಗೆ ಮಾತ್ರ ಸಿಗಬೇಕು. ಇತರೆ ರಾಜ್ಯಗಳ ಖಾತೆಗಳಿಗೆ ಹಣ ವರ್ಗಾವಣೆಯಾಗುತ್ತಿರುವ ಪ್ರಕರಣಗಳನ್ನು ಪತ್ತೆಹಚ್ಚಿ ತಡೆಗಟ್ಟಬೇಕು ಎಂದು ಹೇಳಿದರು. ಹೊರರಾಜ್ಯಗಳಿಂದ ಬಂದು ನೆಲೆಸಿರುವವರು ಗೃಹಜ್ಯೋತಿ ಸೇರಿದಂತೆ ಇತರ ಯೋಜನೆಗಳ ಲಾಭ ಪಡೆಯುತ್ತಿರುವ ಬಗ್ಗೆ ಮಾಹಿತಿ ಸಂಗ್ರಹಿಸಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.ಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಸಾಧನೆಗಳನ್ನೂ ಪ್ರಸ್ತಾಪಿಸಲಾಯಿತು. ಶಕ್ತಿ ಯೋಜನೆಯಡಿ ಮೇ ಅಂತ್ಯದವರೆಗೆ ಮಹಿಳೆಯರು 763 ಕೋಟಿ ಬಾರಿ ಉಚಿತ ಪ್ರಯಾಣ ಮಾಡಿದ್ದು, ಇದರ ಟಿಕೆಟ್ ಮೌಲ್ಯ ₹20,047.69 ಕೋಟಿಗೆ ತಲುಪಿದೆ. 2026-27ನೇ ಸಾಲಿನಲ್ಲಿ 10 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಿಸುವ ಗುರಿ ಹೊಂದಲಾಗಿದೆ.

ಗೃಹಜ್ಯೋತಿ ಯೋಜನೆಯಡಿ 1.65 ಕೋಟಿ ಫಲಾನುಭವಿಗಳು ಲಾಭ ಪಡೆದಿದ್ದು, ಅನ್ನಭಾಗ್ಯ ಯೋಜನೆಯಡಿ ₹11,561 ಕೋಟಿ ಮೊತ್ತವನ್ನು ಡಿಬಿಟಿ ಮೂಲಕ ಫಲಾನುಭವಿಗಳ ಖಾತೆಗಳಿಗೆ ವರ್ಗಾಯಿಸಲಾಗಿದೆ. 2025ರ ಫೆಬ್ರವರಿಯಿಂದ ರಾಜ್ಯದ 4.44 ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ಪ್ರತಿ ತಿಂಗಳು ಹೆಚ್ಚುವರಿ 5 ಕೆಜಿ ಅಕ್ಕಿ ವಿತರಿಸಲಾಗುತ್ತಿದೆ ಎಂದು ಮಾಹಿತಿ ನೀಡಲಾಯಿತು.

ಇದೇ ವೇಳೆ ಕಾಳಸಂತೆಯಲ್ಲಿ ಅನ್ನಭಾಗ್ಯ ಅಕ್ಕಿಯ ಅಕ್ರಮ ಮಾರಾಟವನ್ನು ಕಟ್ಟುನಿಟ್ಟಾಗಿ ತಡೆಗಟ್ಟುವಂತೆ ಸೂಚಿಸಿದ ಮುಖ್ಯಮಂತ್ರಿ, ಗ್ಯಾರಂಟಿ ಯೋಜನೆಗಳು ಜನರ ಬದುಕಿಗೆ ಆಸರೆಯಾಗಬೇಕು. ಆದರೆ ಅವುಗಳ ದುರ್ಬಳಕೆಯನ್ನು ತಡೆಯುವುದು ಸರ್ಕಾರದ ಜವಾಬ್ದಾರಿ ಎಂಬುದನ್ನು ಅಧಿಕಾರಿಗಳು ಮರೆಯಬಾರದು ಎಂದು ಎಚ್ಚರಿಕೆ ನೀಡಿದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಹಬ್ಬದ ಸಂದರ್ಭದಲ್ಲೆ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ : ರಾಜ್ಯದಲ್ಲಿ ಗಗನಕ್ಕೇರಿದ ಅಕ್ಕಿ, ತೊಗರಿಬೇಳೆ ಬೆಲೆ!GOOD NEWS : 'KSRTC' ಯಿಂದ ದಸರಾ ಸಂಭ್ರಮಕ್ಕೆ ಸ್ಪೆಷಲ್ ಗಿಫ್ಟ್: 3,000ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಸಂಚಾರ!ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!