LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪಡಿತರಕ್ಕೆ ʼಜಾತಿ ಪ್ರಮಾಣ ಪತ್ರʼ ಲಿಂಕ್‌ ಮಾಡುವುದು ಕಾನೂನು ಬಾಹಿರ: ಮಾಹಿತಿ ಪಡೆಯುವಂತೆ ಅಧಿಕಾರಿಗಳಿಗೆ ಪ್ರಲ್ಹಾದ್ ಜೋಶಿ ನಿರ್ದೇಶನ

ನವದೆಹಲಿ: ಕರ್ನಾಟಕ ಸರ್ಕಾರ ಪಡಿತರಕ್ಕೆ ʼಜಾತಿ ಪ್ರಮಾಣ ಪತ್ರʼ ಲಿಂಕ್‌ ಮಾಡುವುದು ಕಾನೂನು ಬಾಹಿರವಾದ ಕ್ರಮವಾಗಿದ್ದು, ಈ ಬಗ್ಗೆ ಮಾಹಿತಿ ಪಡೆಯುವಂತೆ ಅಧಿಕಾರಿಗಳಿಗೆ ನಿರ್ದೇಶಿಸಿದ್ದಾಗಿ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.

ಆಹಾರ ಭದ್ರತೆ ಒದಗಿಸುವಲ್ಲಿ ಯಾವುದೇ ʼಜಾತಿʼ ಲಿಂಕ್ ಮಾಡಲು ಸಾಧ್ಯವಿಲ್ಲ ಎಂದಿರುವ ಸಚಿವರು, ಕರ್ನಾಟಕ ಸರ್ಕಾರ ಪಡಿತರಕ್ಕೆ ʼಜಾತಿ ಪ್ರಮಾಣ ಪತ್ರʼವನ್ನು ಕಡ್ಡಾಯಗೊಳಿಸಿರುವ ಬಗ್ಗೆ ಸರ್ಕಾರದಿಂದ ಸ್ಪಷ್ಟನೆ ಕೇಳಿದ್ದಾರೆ.

ಕೇಂದ್ರ ಸರ್ಕಾರದ ʼಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆʼ (PMGKAY)ಯಡಿ ಪಡಿತರ ಪಡೆಯುವ ಫಲಾನುಭವಿಗಳಿಂದ ರಾಜ್ಯದಲ್ಲಿ ಜಾತಿ ಪ್ರಮಾಣ ಪತ್ರ ಕೇಳಲಾಗುತ್ತಿದೆ ಎಂಬ ವರದಿ ಹಿನ್ನೆಲೆಯಲ್ಲಿ ಪ್ರಲ್ಹಾದ ಜೋಶಿ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕೇಂದ್ರ ಸರ್ಕಾರ ದೇಶದ ಪ್ರತಿಯೊಬ್ಬರಿಗೂ ಆಹಾರ ಭದ್ರತೆ ಒದಗಿಸುವಲ್ಲಿ ಬದ್ಧತೆ ತೋರಿದೆ. ಯಾವುದೇ ಜಾತಿ, ಜನಾಂಗವೆಂದೆಣಿಸುತ್ತಿಲ್ಲ. ಆದರೆ ಕರ್ನಾಟಕದಲ್ಲಿ ಮಾತ್ರ ಪಡಿತರ ಪಡೆಯಲು ರಾಜ್ಯ ಸರ್ಕಾರ ಜಾತಿ ಪ್ರಮಾಣ ಪತ್ರವನ್ನು ಕಡ್ಡಾಯಗೊಳಿಸಿರುವುದು ನಿಜಕ್ಕೂ ದುರಂತವೇ ಸರಿ ಎಂದು ಸರ್ಕಾರದ ಕ್ರಮವನ್ನು ಖಂಡಿಸಿದ್ದಾರೆ.

ಸಲ್ಲದ ನೀತಿ-ನಿಯಮ ಹೇರುವುದರ ಉದ್ದೇಶವೇನು:?
ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಅರ್ಹ ಫಲಾನುಭವಿಗಳಿಗೆ ಅವರ ಆರ್ಥಿಕ ಸ್ಥಿತಿ ಮತ್ತು ಅರ್ಹತೆ ಆಧಾರದ ಮೇಲೆ ಯಾವುದೇ ತಾರತಮ್ಯವಿಲ್ಲದೆ ಆಹಾರ ಧಾನ್ಯ ಒದಗಿಸಲಾಗುತ್ತಿದೆ. ಆದರೆ, ರಾಜ್ಯದಲ್ಲಿ ಆಧಾರ್, ಬಯೋಮೆಟ್ರಿಕ್ ದೃಢೀಕರಣ ವ್ಯವಸ್ಥೆಗಳ ಯಶಸ್ವಿ ಏಕೀಕರಣದ ಹೊರತಾಗಿಯೂ ʼಜಾತಿ ಪ್ರಮಾಣ ಪತ್ರʼ ಕಡ್ಡಾಯಗೊಳಿಸುವುದರ ಹಿಂದಿನ ಉದ್ದೇಶವೇನು? ಎಂದು ಪ್ರಶ್ನಿಸಿದ್ದಾರೆ.

ದೇಶದ ಯಾವುದೇ ಭಾಗದಲ್ಲಿ ಅರ್ಹ ಫಲಾನುಭವಿಗಳಿಗೆ ಸಬ್ಸಿಡಿ ಆಹಾರ ಧಾನ್ಯ ಸುಲಭವಾಗಿ ಲಭ್ಯವಾಗುವಂತೆ ಕೇಂದ್ರ ಸರ್ಕಾರ ಈಗಾಗಲೇ ʼಒಂದು ರಾಷ್ಟ್ರ, ಒಂದು ಪಡಿತರ ಚೀಟಿ’ ಉಪಕ್ರಮವನ್ನು ಪರಿಚಯಿಸಿದೆ. ಹೀಗಿರುವಾಗ ಸ್ಥಳೀಯವಾಗಿ ಸಲ್ಲದ ನೀತಿ ನಿಯಮ ಹೇರುವುದು ʼಕಡುಬಡವರು ಪಡಿತರ ಪಡೆಯುವ ಆಶಯಕ್ಕೆ ವಿರುದ್ಧವಾಗಿದೆʼ ಎಂದು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಆಹಾರಧಾನ್ಯಕ್ಕೆ ಆಡಳಿತಾತ್ಮಕ ಕ್ರಮ ಅಡ್ಡಿಯಾಗಬಾರದು:
ದೇಶವಾಸಿಗಳಿಗೆ, ಅರ್ಹ ಫಲಾನುಭವಿಗಳಿಗೆ ಯಾವುದೇ ಅಡೆತಡೆ ಇಲ್ಲದಂತೆ ಆಹಾರ ಭದ್ರತೆ ಪ್ರಯೋಜನ ಕಲ್ಪಿಸುವುದು ಎಲ್ಲಾ ಸರ್ಕಾರಗಳ ಪ್ರಥಮ ಆದ್ಯತೆಯಾಗಿರಬೇಕು ಎಂದಿರುವ ಸಚಿವ ಜೋಶಿ, ಸಮಾಜದ ಬಡ ಮತ್ತು ಅರ್ಹ ವರ್ಗಗಳಿಗೆ ಆಹಾರ ಧಾನ್ಯ ತಲುಪುವಲ್ಲಿ ಯಾವುದೇ ಆಡಳಿತಾತ್ಮಕ ಕ್ರಮಗಳು ಅಡ್ಡಿಯಾಗಬಾರದು ಎಂದು ರಾಜ್ಯ ಸರ್ಕಾರಕ್ಕೆ ಸೂಚ್ಯವಾಗಿ ಚಾಟಿ ಬೀಸಿದ್ದಾರೆ.

ಕರ್ನಾಟಕದಲ್ಲಿ ಪಡಿತರ ಯೋಜನೆಗೆ ಜಾತಿ ಲಿಂಕ್‌ ಮಾಡುತ್ತಿರುವ ಬಗ್ಗೆ ಸಂಪೂರ್ಣ ವಿವರ ಪಡೆಯಲು ಮತ್ತು ಸಂಬಂಧಪಟ್ಟ ಅಧಿಕಾರಿಗಳಿಂದ ವಿವರಣೆ ಪಡೆಯಲು ಕಚೇರಿ ಉನ್ನತ ಅಧಿಕಾರಿಗಳಿಗೆ ನಿರ್ದೇಶಿಸಿದ್ದೇನೆ. ಪಿಡಿಎಸ್‌ನಲ್ಲಿ ಜಾತಿ ಪ್ರಮಾಣಪತ್ರ ಪಡೆಯುವುದು ಕಾನೂನುಬಾಹಿರ. ಮತ್ತಿದು ಸ್ಥಾಪಿತ ಮಾರ್ಗಸೂಚಿಗಳು ಮತ್ತು ಎಸ್‌ಒಪಿಗಳಿಗೆ ವಿರುದ್ಧವಾಗಿದೆ ಎಂದು ಸಚಿವ ಪ್ರಲ್ಹಾದ ಜೋಶಿ ಆಕ್ಷೇಪಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
GOOD NEWS : 'KSRTC' ಯಿಂದ ದಸರಾ ಸಂಭ್ರಮಕ್ಕೆ ಸ್ಪೆಷಲ್ ಗಿಫ್ಟ್: 3,000ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಸಂಚಾರ!ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿ