ಬೆಂಗಳೂರು: ದಿನಾಂಕ 21.06.2026 ನೀಟ್ ಪರೀಕ್ಷೆ ಇರುವ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವುದನ್ನು ಆದ್ಯತೆಯಾಗಿ ಪರಿಗಣಿಸಲಾಗಿದೆ.
ಸುಗಮ ಸಂಚಾರದ ಸಹಾಯಕ್ಕಾಗಿ ಟ್ರಾಫಿಕ್ ಕಂಟ್ರೋಲ್ ರೂಮ್ ದೂರವಾಣಿ ಸಂಖ್ಯೆ 22943131, 22943030 ಸಂಪರ್ಕಿಸಬಹುದಾಗಿದೆ.
ಇದೇ ದಿನ ಬೆಂಗಳೂರು ನಗರದ ವಿವಿಧ ಭಾಗಗಳಲ್ಲಿ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮ, ಮ್ಯಾರಥಾನ್ ಕಾರ್ಯಕ್ರಮ ಹಾಗೂ ರಾಜಕೀಯ ಪಕ್ಷದ ಪ್ರಮುಖ ಕಾರ್ಯಕ್ರಮಗಳು ಆಯೋಜನೆಗೊಂಡಿರುತ್ತವೆ.
ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರ ಸಂಚಾರದ ಹಿತದೃಷ್ಟಿಯಿಂದ ಮಾರ್ಪಾಡುಗಳನ್ನು ಮಾಡಲಾಗಿದೆ.
ನೀಟ್ ಪರೀಕ್ಷಾರ್ಥಿಗಳು ಸಂಚಾರ ವಿಭಾಗದಿಂದ ಪ್ರಕಟಿಸಲಾಗಿರುವ ಸಂಚಾರ ಸಲಹೆಗಳ ಬಗ್ಗೆ ಗಮನಹರಿಸಿ ತಮ್ಮ ಪರೀಕ್ಷಾ ಕೇಂದ್ರಗಳಿಗೆ ನಿಗದಿತ ಸಮಯಕ್ಕಿಂತ ಮುಂಚಿತವಾಗಿ ತಲುಪುವಂತೆ ತಮ್ಮ ಪ್ರಯಾಣವನ್ನು ಯೋಜಿಸಿಕೊಳ್ಳಬೇಕು.
ಸಂಚಾರದ ವಿಷಯದಲ್ಲಿ ಯಾವುದೇ ತೊಂದರೆ ಎದುರಾದಲ್ಲಿ ಟ್ರಾಫಿಕ್ ಕಂಟ್ರೋಲ್ ರೂಮ್ ಸಂಪರ್ಕಿಸಿ ಸಹಾಯ ಪಡೆದುಕೊಳ್ಳಬೇಕು. ನೀಟ್ ಪರೀಕ್ಷೆ ಬರೆಯುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೂ ಶುಭ ಹಾರೈಕೆಗಳು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
