LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜೈಲಿನಲ್ಲಿ ಕೈದಿಗಳೊಂದಿಗೆ ನಟ ದರ್ಶನ್ ಯೋಗ ಮಾಡಿದ ಫೋಟೋ ವೈರಲ್

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಜೈಲಿನ ಕೈದಿಗಳ ಜೊತೆ ಸೇರಿ ಯೋಗ ಮಾಡುತ್ತಿರುವ ಫೋಟೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ.

 ಇಂದು (ಜೂನ್ 21) ‘ಅಂತಾರಾಷ್ಟ್ರೀಯ ಯೋಗ ದಿನಾಚರಣೆ’ ಪ್ರಯುಕ್ತ ಜೈಲು ಅಧಿಕಾರಿಗಳು ಕೈದಿಗಳ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಉತ್ತೇಜಿಸುವ ಉದ್ದೇಶದಿಂದ ಯೋಗ ಕಾರ್ಯಕ್ರಮವನ್ನು ಆಯೋಜಿಸಿದ್ದರು.

ಈ ಸಂದರ್ಭದಲ್ಲಿ ನಟ ದರ್ಶನ್ ಹಾಗೂ ಹಲವು ಕೈದಿಗಳು ಭಾಗವಹಿಸಿ ವಿವಿಧ ಆಸನಗಳನ್ನು ಅಭ್ಯಾಸ ಮಾಡಿದ್ದಾರೆ. ಜೈಲಿನ ಕಾರಿಡಾರ್ ನಲ್ಲಿ ದರ್ಶನ್ ಅವರು ಸಹ-ಕೈದಿಗಳೊಂದಿಗೆ ಯೋಗ ನಿರತರಾಗಿರುವ ಚಿತ್ರಗಳು ಹೊರಬೀಳುತ್ತಿದ್ದಂತೆ ಸೋಷಿಯಲ್ ಮೀಡಿಯಾದಲ್ಲಿ ವ್ಯಾಪಕವಾಗಿ ಹರಿದಾಡುತ್ತಿವೆ. 

ಮೂಲಗಳ ಪ್ರಕಾರ, ಆರಂಭದಲ್ಲಿ ನಟ ದರ್ಶನ್ ಅವರು ತಮಗಿರುವ ತೀವ್ರ ಬೆನ್ನುನೋವಿನ ಕಾರಣದಿಂದಾಗಿ ಯೋಗ ಮಾಡಲು ನಿರಾಕರಿಸಿದ್ದರು ಎನ್ನಲಾಗಿದೆ. ಆದರೆ, ಅಲ್ಲಿಗೆ ಭೇಟಿ ನೀಡಿದ್ದ ಕಾರಾಗೃಹ ಇಲಾಖೆಯ ಹಿರಿಯ ಅಧಿಕಾರಿಗಳು “ಯೋಗ ಮಾಡುವುದರಿಂದ ಬೆನ್ನುನೋವು ನಿಯಂತ್ರಣಕ್ಕೆ ಬರುತ್ತದೆ ಮತ್ತು ಆರೋಗ್ಯ ಸುಧಾರಿಸುತ್ತದೆ” ಎಂದು ಮನವರಿಕೆ ಮಾಡಿಕೊಟ್ಟ ನಂತರ ದರ್ಶನ್ ಅವರು ಇತರ ಕೈದಿಗಳೊಂದಿಗೆ ಯೋಗಾಭ್ಯಾಸದಲ್ಲಿ ಪಾಲ್ಗೊಂಡಿದ್ದಾರೆ. 

ಜೈಲುವಾಸ ಅನುಭವಿಸುತ್ತಿರುವ ದರ್ಶನ್ ಇತ್ತೀಚಿನ ಸ್ಥಿತಿಯನ್ನು ನೋಡಲು ಕಾಯುತ್ತಿದ್ದ ಅವರ ಅಭಿಮಾನಿಗಳು ಯೋಗ ದಿನಾಚರಣೆಯ ಫೋಟೋ ಕಂಡು ಸಂಭ್ರಮಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?