‘ಕೆಜಿಎಫ್’ ಬಳಿಕ ನಟ ರಾಕಿಂಗ್ ಸ್ಟಾರ್ ಅಭಿನಯದ ಬಿಗ್ ಬಜೆಟ್ ಸಿನಿಮಾ ‘ಟಾಕ್ಸಿಕ್’ ಬಿಡುಗಡೆಗೆ ಮುಹೂರ್ತ ನಿಗದಿಯಾಗಿದೆ. ಆಗಸ್ಟ್ 26ರಂದು ಬುಧವಾರ ‘ಟಾಕ್ಸಿಕ್’ ಬಿಡುಗಡೆ ಮಾಡುವುದಾಗಿ ಚಿತ್ರ ತಂಡ ಘೋಷಣೆ ಮಾಡಿದೆ.
ವರಮಹಾಲಕ್ಷ್ಮಿ ಹಬ್ಬಕ್ಕೆ ಎರಡು ದಿನ ಮೊದಲು ಚಿತ್ರ ತೆರೆಗೆ ಬರಲಿದೆ. ಸುಮಾರು 600 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ‘ಟಾಕ್ಸಿಕ್’ ಟೀಸರ್ ಹಲ್ಚಲ್ ಸೃಷ್ಟಿಸಿದೆ. ಓಣಂ, ಈದ್ ಮತ್ತು ವರಮಹಾಲಕ್ಷ್ಮಿ ಹಬ್ಬದ ಹಿನ್ನೆಲೆಯಲ್ಲಿ ಆಗಸ್ಟ್ 26ರಂದು ಸಿನಿಮಾ ಬಿಡುಗಡೆಯಾಗಲಿದೆ.
ಈ ಹಿಂದೆ ಅನೇಕ ಬಾರಿ ವಿವಿಧ ಕಾರಣಗಳಿಂದ ಬಿಡುಗಡೆ ದಿನಾಂಕವನ್ನು ಮುಂದುವರಲಾಗಿತ್ತು. ಇದೀಗ ಅಂತಿಮವಾಗಿ ಬಿಡುಗಡೆಗೆ ಮತ್ತೊಮ್ಮೆ ದಿನಾಂಕ ನಿಗದಿಯಾಗಿದೆ.
ಚಿತ್ರದಲ್ಲಿ ರಾಕಿಂಗ್ ಸ್ಟಾರ್ ಯಶ್ ದ್ವಿಪಾತ್ರದಲ್ಲಿ ಅಭಿನಯಿಸಿದ್ದಾರೆ. ಕಿಯಾರಾ ಅಡ್ವಾಣಿ, ನಯನತಾರಾ, ತಾರಾ ಸುತಾರಿಯಾ, ರುಕ್ಮಿಣಿ ವಸಂತ್, ಹ್ಯುಮಾ ಖುರೇಶಿ ಮುಖ್ಯ ಪಾತ್ರದಲ್ಲಿರುವ ಚಿತ್ರವನ್ನು ಗೀತು ಮೋಹನ್ ದಾಸ್ ನಿರ್ದೇಶಿಸಿದ್ದಾರೆ. ಕೆವಿಎನ್ ಸಂಸ್ಥೆ ಮತ್ತು ಯಶ್ ಅವರ ಮಾನ್ ಸ್ಟಾರ್ ಮೈಂಡ್ ಕ್ರಿಯೇಷನ್ಸ್ ಸಿನಿಮಾ ನಿರ್ಮಾಣ ಮಾಡಿವೆ.