LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹಿಂದೂ ರಾಷ್ಟ್ರ ಮಾಡಲು ನಮ್ಮ ಕಾರ್ಯಕರ್ತರು ಬಿಡಬಾರದು: ಸಿದ್ಧರಾಮಯ್ಯ

ಬೆಂಗಳೂರು: ಹಿಂದೂ ರಾಷ್ಟ್ರ ಮಾಡಲು ನಮ್ಮ ಕಾರ್ಯಕರ್ತರು ಬಿಡಬಾರದು ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ.

ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ.ಹರಿಪ್ರಸಾದ್ ಅವರ ಪದಗ್ರಹಣ ಸಮಾರಂಭದಲ್ಲಿ ಅಭಿನಂದನೆ ಸಲ್ಲಿಸಿ ಅವರು ಮಾತನಾಡಿದರು.

ಕೆಪಿಸಿಸಿ ಅಧ್ಯಕ್ಷರಾಗಿ ಜವಾಬ್ದಾರಿ ವಹಿಸಿಕೊಂಡಿರುವ ಬಿ.ಕೆ. ಹರಿಪ್ರಸಾದ್‌ ಅವರಿಗೆ ಅಭಿನಂದನೆಗಳು. ಇಲ್ಲಿಯವರೆಗೆ ಅಧ್ಯಕ್ಷರಾಗಿ ಕೆಲಸ ಮಾಡಿದ ಡಿ.ಕೆ. ಶಿವಕುಮಾರ್‌ ಅವರಿಗೆ ಧನ್ಯವಾದವನ್ನು ತಿಳಿಸುತ್ತೇನೆ. ನಾನು ಈ ರಾಜ್ಯದ ವಿರೋಧ ಪಕ್ಷದ ನಾಯಕನಾಗಿ ಮತ್ತು ರಾಜ್ಯದ ಮುಖ್ಯಮಂತ್ರಿಯಾಗಿ ಹಾಗೂ ಡಿ.ಕೆ ಶಿವಕುಮಾರ್‌ ಅವರು ಈ ರಾಜ್ಯದ ಉಪಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷರಾಗಿ ಈ ರಾಜ್ಯವನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸಿದ್ದೇವೆ. ಪ್ರಣಾಳಿಕೆಯಲ್ಲಿ ಕೊಟ್ಟಿರುವಂತಹ ಭರವಸೆಗಳನ್ನು ಈಡೇರಿಸುವಂತ ಪ್ರಾಮಾಣಿಕ ಕೆಲಸವನ್ನು ಮಾಡಿದ್ದೇವೆ ಎಂದರು.

ಕಾಂಗ್ರೆಸ್ ಪಕ್ಷ ಮತ್ತು ಸ್ಥಳೀಯ ನಾಯಕರಾದ ನಾವೆಲ್ಲಾ ತೀರ್ಮಾನ ಮಾಡಿದ್ದಂತಹ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ. ಕಳೆದ ಮೂರು ವರ್ಷಗಳಿಂದ 1 ಲಕ್ಷದ 40 ಸಾವಿರಕ್ಕೂ ಹೆಚ್ಚೂ ಕೋಟಿ ರೂಪಾಯಿಗಳನ್ನು ಗ್ಯಾರಂಟಿ ಯೋಜನೆಗಳಿಗೆ ಖರ್ಚು ಮಾಡಿದ್ದೇವೆ. ವಿರೋಧ ಪಕ್ಷದವರು ಮಾಡಿದ ಟೀಕೆಗಳು ಸೋತಿವೆ, ನಮ್ಮ ಗ್ಯಾರಂಟಿ ಯೋಜನೆಗಳು ಗೆದ್ದಿವೆ ಎಂದರು.

ನನ್ನ ಪ್ರಯತ್ನಗಳಿಗೆ ಡಿ.ಕೆ ಶಿವಕುಮಾರ್‌ ಅವರು ಕೂಡ ಅಧ್ಯಕ್ಷರಾಗಿ ಹೆಗಲಿಗೆ ಹೆಗಲುಕೊಟ್ಟು ದುಡಿದಿದ್ದಾರೆ. ನಾವು ಅನೇಕ ಹೋರಾಟಗಳನ್ನು ಮಾಡಿ ಪಕ್ಷ ಸಂಘಟನೆ ಮಾಡಿ 2023ರಲ್ಲಿ 136 ಸ್ಥಾನವನ್ನು ಗೆದ್ದಿದ್ದೆವು. ಇದು ಬರೀ ನಮ್ಮಿಬ್ಬರ ಗೆಲುವಲ್ಲ, ಬದಲಿಗೆ ನಿಮ್ಮೆಲ್ಲರ ಪ್ರಯತ್ನದಿಂದ, ಇಲ್ಲಿ ಆಸೀನರಾಗಿರುವ ನಾಯಕರುಗಳು, ಕಾರ್ಯಕರ್ತ ಬಂಧುಗಳಿಂದ ನಾವು ಅಧಿಕಾರಕ್ಕೆ ಬರಲು ಸಾಧ್ಯವಾಯಿತು. ಇವತ್ತು ಹರಿಪ್ರಸಾದ್‌ ಅವರನ್ನು ಅಧ್ಯಕ್ಷರಾಗಿ ನೇಮಕ ಮಾಡಿರುವ ಸೋನಿಯಾ ಗಾಂಧಿಯ, ಮಲ್ಲಿಕಾರ್ಜುನ ಖರ್ಗೆ, ರಾಹುಲ್‌ ಗಾಂಧಿ, ಪ್ರಿಯಾಂಕ ಗಾಂಧಿ, ವೇಣುಗೋಪಾಲ್‌, ರಣ್‌ದೀಪ್‌ ಸಿಂಗ್‌ ಸುರ್ಜೇವಾಲ ಅವರಿಗೆ ಧನ್ಯವಾದಗಳು ಎಂದು ತಿಳಿಸಿದ್ದಾರೆ.

ಹರಿಪ್ರಸಾದ್‌ ಅವರು ಸಾಮಾನ್ಯ ಕುಟುಂಬದಿಂದ ಬಂದಿರುವವರು. ಸಾಮಾನ್ಯ ಕಾರ್ಯಕರ್ತರಾಗಿ 1972 ಇಸವಿಯಲ್ಲಿ ಕಾಂಗ್ರೆಸ್ ನಲ್ಲಿ‌ ಹೋರಾಟ ಆರಂಭಿಸಿ, ಇಲ್ಲಿಯವರೆಗೆ ಸುಮಾರು 5 ದಶಕಗಳ ಕಾಲ ಪಕ್ಷದ ಕಾರ್ಯಕರ್ತನಾಗಿ ನಿಷ್ಠೆಯಿಂದ ಸೇವೆ ಮಾಡಿದ್ದಾರೆ. ಅವರು ವಿದ್ಯಾರ್ಥಿ ನಾಯಕನಾಗಿ, ಯುವ ಕಾಂಗ್ರೆಸ್‌ನ ನಾಯಕನಾಗಿ ಅನೇಕ ರಾಜ್ಯಗಳ ಉಸ್ತುವಾರಿಯನ್ನು ವಹಿಸಿಕೊಂಡು, ಸೇವಾದಳದ ಅಧ್ಯಕ್ಷನಾಗಿ ಸೇವೆ ಮಾಡಿದ್ದಾರೆ. ಅಂತವರು ಇಂದು ಬಹಳ ಮಹತ್ವದ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದಾರೆ. ಅವರ ನಿಷ್ಠೆ, ಸೈದ್ಧಾಂತಿಕ ಬದ್ಧತೆ, ಕಾಂಗ್ರೆಸ್‌ ಕಾರ್ಯಕರ್ತನಾಗಿ ಅನೇಕ ಸ್ಥಾನಗಳಲ್ಲಿ ಕೆಲಸ ಮಾಡಿದ ಪರಿಣಾಮವಾಗಿ ಇವತ್ತು ಇಷ್ಟೊಂದು ಎತ್ತರಕ್ಕೆ ಬೆಳೆಯಲು ಸಾಧ್ಯವಾಗಿದೆ. ಅವರಿಗೆ ನಾನು ಮತ್ತೊಮ್ಮೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.

2014ರಲ್ಲಿ ದೇಶದಲ್ಲಿ ಬಿಜೆಪಿ ಪಕ್ಷ ಅಧಿಕಾರಕ್ಕೆ ಬಂದಮೇಲೆ ಈ ದೇಶದ ಬಹುತ್ವವನ್ನು ಹಾಳುಮಾಡುವಂತಹ ಪ್ರಯತ್ನವನ್ನು ಮಾಡಿದ್ದಾರೆ. ಭಾರತ ದೇಶ ಅನೇಕ ಜಾತಿ-ಧರ್ಮ, ಸಂಸ್ಕೃತಿಯಿಂದ ಕೂಡಿದೆ. ಈ ದೇಶದಲ್ಲಿ ನಾವು ಬಹುತ್ವವನ್ನು ಕಾಪಾಡುವಂತದ್ದು, ಗೌರವವನ್ನು ಕೊಡುವಂತಹದ್ದು ಅತ್ಯಂತ ಅವಶ್ಯವಾಗಿದೆ. ಭಾರತೀಯ ಜನತಾ ಪಕ್ಷದವರು ಧರ್ಮದ ಹೆಸರಿನಲ್ಲಿ, ಜಾತಿಯ ಹೆಸರಿನಲ್ಲಿ ಹಾಗೂ ಸಂಸ್ಕೃತಿಯ ಹೆಸರಿನಲ್ಲಿ ದೇಶವನ್ನು ವಿಭಜಿಸುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

ಹರಿಪ್ರಸಾದ್‌ ಅವರಿಗೂ ನಮ್ಮ ಕಾರ್ಯಕರ್ತರಿಗೂ ಇದೊಂದು ಸವಾಲು. ಇಂದು ದೇಶದ ಅನೇಕರಿಗೆ ಕಾಂಗ್ರೆಸ್‌ನ ಇತಿಹಾಸ ಗೊತ್ತಿಲ್ಲದೆ ಇರುವಂತಹದ್ದು, ಸ್ವಾತಂತ್ರ್ಯ ಹೋರಾಟದಲ್ಲಿ ನಮ್ಮ ಪಾತ್ರ ಏನು ಎಂಬುದು ಅರಿವಿಲ್ಲದಂತದ್ದು, ಸಂವಿಧಾನದ ಮೂಲ ಉದ್ದೇಶಗಳೇನೆಂದು ತಿಳಿದಿಲ್ಲದಿರುವುದು. ಇವುಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು. ಬಿ.ಕೆ ಹರಿಪ್ರಸಾದ್‌ ಅವರ ಜೊತೆ ನಮ್ಮೆಲ್ಲಾ ಕಾರ್ಯಕರ್ತರು ನಿಲ್ಲಬೇಕೆಂದು ಮನವಿ ಮಾಡುತ್ತಿದ್ದೇನೆ. ನಮ್ಮ ಸಿದ್ಧಾಂತ, ಸಂವಿಧಾನದ ಮೂಲ ಆಶಯಗಳನ್ನು ಜಾರಿ ಮಾಡುವಂತಹ ಪ್ರಯತ್ನವನ್ನು ಮಾಡಬೇಕು. ಅಷ್ಟೆ ಅಲ್ಲದೇ ಇನ್ನೊಂದು ಹೆಜ್ಜೆ ಮುಂದಡಿಯಿಟ್ಟು ಜಿಲ್ಲಾ ಮಟ್ಟದಲ್ಲಿ, ತಾಲ್ಲೂಕು ಮಟ್ಟದಲ್ಲಿ, ಬೂತ್‌ ಮಟ್ಟದಲ್ಲಿ ಶಿಬಿರಗಳನ್ನು ಮಾಡುವಂತಹ ಪ್ರಯತ್ನಗಳನ್ನು ಮಾಡಬೇಕು ಎಂದು ತಿಳಿಸಿದ್ದಾರೆ.

ನಾವು ಅಧಿಕಾರಕ್ಕೆ ಬಂದ ನಂತರ ಸಂವಿಧಾನದ ಮೂಲ ಉದ್ದೇಶವನ್ನು ಈಡೇರಿಸುವಂತಹ ಪ್ರಯತ್ನಗಳನ್ನು ಮಾಡುತ್ತಿದ್ದೇವೆ. ಅದಕ್ಕಾಗಿ ನಾನು ಮುಖ್ಯಮಂತ್ರಿಯಾಗಿರುವಾಗ ಮಾನ್ಯ ಮಹದೇವಪ್ಪನವರು ಸಮಾಜ ಕಲ್ಯಾಣ ಮಂತ್ರಿಯಾಗಿ ವಿದ್ಯಾರ್ಥಿಗಳು ನಿತ್ಯ ಸಂವಿಧಾನದ ಪೀಠಿಕೆಯನ್ನು ಓದುವಂತಹ ಕೆಲಸವನ್ನು ಮಾಡಿದ್ದೇವೆ. ಇದರ ಉದ್ದೇಶ ಸಂವಿಧಾನ ಎಲ್ಲರಿಗೂ ತಿಳಿಯಬೇಕು ಎನ್ನುವುದಾಗಿದೆ ಎಂದರು.

ನಮ್ಮ ಸಮಾಜದಲ್ಲಿರುವ ಬಹುತ್ವವನ್ನು ಕಾಪಾಡುವ ಅಗತ್ಯವಿದೆ. ಹರಿಪ್ರಸಾದ್‌ ಅವರು ಆರ್‌ಎಸ್‌ಎಸ್‌ನ ವಿರುದ್ಧವಾಗಿ, ಬಿಜೆಪಿಯ ವಿರುದ್ಧವಾಗಿ ಹೋರಾಟವನ್ನು ನಿರಂತರವಾಗಿ ಮಾಡುತ್ತಾರೆ ಎಂಬ ಸಂಪೂರ್ಣ ವಿಶ್ವಾಸ ನನಗಿದೆ. ಆ ಛಲ ನಮ್ಮೆಲ್ಲಾ ಕಾರ್ಯಕರ್ತರಲ್ಲಿ ಬರಬೇಕು. ಹೀಗೆ ಪ್ರಯತ್ನ ಮಾಡಿದಾಗ ಮಾತ್ರ ನಾವು ಈ ದೇಶವನ್ನು ಉಳಿಸಲು, ಸಂವಿಧಾನವನ್ನು ಉಳಿಸಲು ಸಾಧ್ಯ. ಇಲ್ಲದೇ ಹೋದರೆ ಬಿಜೆಪಿಗರು ಸಾಮಾಜಿಕ ಜಾಲತಾಣದ ಮೂಲಕ ಸುಳ್ಳುಗಳನ್ನು ಹರಡಿ ಜನರನ್ನು ದಾರಿ ತಪ್ಪಿಸುವಂತಹ ಕೆಲಸವನ್ನು ಮಾಡುತ್ತಾರೆ ಎಂದರು.

`ಬಿಜೆಪಿಯವರು ಒಂದು ಧರ್ಮ – ಒಂದು ರಾಷ್ಟ್ರ – ಒಂದು ಚುನಾವಣೆ ಎಂಬ ಮಾತುಗಳನ್ನು ಹೇಳುತ್ತಾರೆ. ಬಿಜೆಪಿಯವರು ಸರ್ವಾಧಿಕಾರದ ಮೇಲೆ ನಂಬಿಕೆ ಇಟ್ಟುಕೊಂಡಿದ್ದಾರೆ. ಯಾಕಂದರೆ ಆರ್‌ಎಸ್‌ಎಸ್‌ನ ಸಂಸ್ಥಾಪಕ ಹೆಗ್ಡೆವಾರ್‌ ಅವರು ತಮ್ಮ ಸ್ನೇಹಿತರನ್ನು ವಿದೇಶಕ್ಕೆ ಕಳುಹಿಸಿ ಇಟಲಿಯ ಮುಸಲೋನಿ, ಜರ್ಮನಿಯ ಹಿಟ್ಲರ್‌ ಅವರ ಆಡಳಿತನ್ನು ಈ ದೇಶದಲ್ಲಿ ಹುಟ್ಟುಹಾಕಲು ಪ್ರಯತ್ನವನ್ನು ಮಾಡಿದ್ದರು. ಬಿಜೆಪಿಯವರಿಗಾಗಲಿ, ಆರ್‌ಎಸ್‌ಎಸ್‌ನವರಿಗಾಗಲಿ ನಮ್ಮ ಸಂವಿಧಾನದ ಬಗ್ಗೆ ನಂಬಿಕೆಯಿಲ್ಲ. ಈ ದೇಶದಲ್ಲಿ ಸಂವಿಧಾನದ ವಿರೋಧಿಗಳು ಯಾರಾದರೂ ಇದ್ದರೆ ಅದು ಆರ್‌ಎಸ್‌ಎಸ್‌ ಮತ್ತು ಬಿಜೆಪಿಯವರು ಎಂಬುದನ್ನು ನಾವು ಮರೆಯಲು ಸಾಧ್ಯವಿಲ್ಲ. ಅದಕ್ಕಾಗಿ ಹಿಂದೂರಾಷ್ಟ್ರ ಮಾಡಲು ಮುಂದಾಗಿದ್ದಾರೆ. ಅದನ್ನು ಮಾಡಲು ನಮ್ಮ ಕಾರ್ಯಕರ್ತರು ಬಿಡಬಾರದು. ನಾವು ಯಾವಾಗಲೂ ಬಹುತ್ವದ ಪರವಾಗಿ ಇರುವಂತವರು. ಬಹುತ್ವವನ್ನು ರೂಪಿಸುವಂತಹ ಕೆಲಸವನ್ನು ಹಾಗೂ ಅದನ್ನು ಮುಂದುವರಿಸಿಕೊಂಡು ಹೋಗುವಂತಹ ಕೆಲಸ ನಮ್ಮದಾಗಿದೆ ಎಂದು ಹೇಳಿದರು.

ಹರಿಪ್ರಸಾದ್‌ ಅವರನ್ನು ಅಧ್ಯಕ್ಷರಾಗಿ ಚುನಾವಣೆಗೋಸ್ಕರ ಮಾಡಿರುವಂತದಲ್ಲ. 2028-29 ಚುನಾವಣೆಯಲ್ಲ, ಅದಕ್ಕಿಂತಲೂ ಮಿಗಿಲಾಗಿ ನಮ್ಮ ಪಕ್ಷದ ಸಿದ್ಧಾಂತ ಎಲ್ಲರಿಗೂ ತಿಳಿಯಬೇಕು. ಅನೇಕ ಜನರು ಜಾತ್ಯಾತೀತ ತತ್ವದ ಮೇಲೆ ನಂಬಿಕೆ ಇಲ್ಲದವರು ಇದ್ದಾರೆ. ಇದನ್ನು ಗಟ್ಟಿಗೊಳಿಸುವಂತಹ, ಪಕ್ಷದ ಸಿದ್ಧಾಂತವನ್ನು ಗಟ್ಟಿಗೊಳಿಸುವಂತಹ ಕೆಲಸವನ್ನು ಮಾಡಬೇಕು. ಈ ಕೆಲಸ ಹರಿಪ್ರಸಾದ್‌ ಅವರು ಮಾಡುತ್ತಾರೆ ಎನ್ನುವ ನಂಬಿಕೆ, ವಿಶ್ವಾಸ ನನಗಿದೆ ಎಂದರು.

ಹರಿಪ್ರಸಾದ್ ಅವರ ಹೋರಾಟವನ್ನು ನಾನು ನೋಡಿದ್ದೇನೆ. ಅವರು ಎಂದಿಗೂ ಕೋಮುವಾದಿಗಳ ಜೊತೆ ರಾಜಿಯಾಗದ ವ್ಯಕ್ತಿ ಎನ್ನುವುದನ್ನು ನಾನು ಅರ್ಥಮಾಡಿಕೊಂಡಿದ್ದೇನೆ. ಆದ್ದರಿಂದ ಇವತ್ತು ಸಮಾಜದಲ್ಲಿ ತತ್ವಾದರ್ಶಗಳ ಪುನರ್‌ನಿರ್ಮಾಣ ಆಗಬೇಕು. ಮತ್ತು ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ ಈ ದೇಶದಲ್ಲಿ, ಸಮಾಜದಲ್ಲಿ ಪ್ರಾರಂಭವಾಗಿ ನಾವು ದೇಶವನ್ನು ಮುಂದಕ್ಕೆಕೊಂಡೊಯ್ಯವ ಕೆಲಸವನ್ನು ಮಾಡಬೇಕು. ಅದಕ್ಕೆ ನಮ್ಮೆಲ್ಲಾ ಕಾರ್ಯಕರ್ತರು ಕೂಡ ನಮ್ಮ ಸಿದ್ಧಾಂತವನ್ನು ಗಟ್ಟಿಗೊಳಿಸುವ ಕೆಲಸವನ್ನು ಮಾಡಬೇಕು ಎಂದು ಸಿದ್ಧರಾಮಯ್ಯ ತಿಳಿಸಿದ್ದಾರೆ.

2028ರಲ್ಲಿ ಮತ್ತೊಮ್ಮೆ ನಾವೇ ಅಧಿಕಾರಕ್ಕೆ ಬರುತ್ತೇವೆ. ನಮ್ಮ ಗ್ಯಾರಂಟಿ ಯೋಜನೆಗಳು ಜನರನ್ನು ತಲುಪಿದೆ. ಇದರಿಂದ ಜನರಲ್ಲಿ ಖುಷಿಯಿದೆ. ಕರ್ನಾಟಕದಲ್ಲಿ 5 ಉಪಚುನಾವಣೆಗಳು ನಡೆದಿದೆ. 5 ಉಪಚುನಾವಣೆಗಳಲ್ಲಿ ನಾವು ಗೆಲುವು ಸಾಧಿಸಿರಬೇಕಾದರೆ, ಜನರ ಪ್ರೀತಿ, ವಿಶ್ವಾಸವನ್ನು ಉಳಿಸಿಕೊಂಡಿದ್ದೇವೆ ಎಂದು ಅರ್ಥ.

ನೀವೆಲ್ಲರೂ ಕೂಡ ಹರಿಪ್ರಸಾದ್‌ ಅವರ ನಾಯಕತ್ವದಲ್ಲಿ ಪಕ್ಷವನ್ನು ಗಟ್ಟಿಗೊಳಿಸುವ ಕೆಲಸವನ್ನು ಮಾಡಿ, 2028 ಹಾಗೂ 2029ರಲ್ಲೂ ಮತ್ತೊಮ್ಮೆ ನಮ್ಮ ಪಕ್ಷವನ್ನು ಅಧಿಕಾರಕ್ಕೆ ತನ್ನಿ. 2029ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ರಾಹುಲ್‌ ಗಾಂಧಿ ಅವರನ್ನು ಪ್ರಧಾನ ಮಂತ್ರಿಯನ್ನಾಗಿ ಮಾಡುವ ಸಂಕಲ್ಪವನ್ನು ನೀವೆಲ್ಲರೂ ಮಾಡಬೇಕು. ಹರಿಪ್ರಸಾದ್‌ ಅವರ ನಾಯಕತ್ವದಲ್ಲಿ ಪಕ್ಷ ಸಧೃಡವಾಗಲಿ, ಬಲವಾಗಿ ಬೆಳೆಯಲಿ ಎಂದು ಆಶಿಸುತ್ತಾ, ನನ್ನ ಸಹಕಾರವನ್ನು ಸಂಪೂರ್ಣವಾಗಿ ಅವರ ಜೊತೆ ಧಾರೆ ಎರೆಯುತ್ತೇನೆ ಎಂಬ ಭರವಸೆ ನೀಡುತ್ತಿದ್ದೇನೆ ಎಂದು ಅವರು ಹೇಳಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
BREAKING: ಟ್ರ್ಯಾಕ್ಟರ್ ಡಿಕ್ಕಿ: ಬೈಕ್ ನಲ್ಲಿ ತೆರಳುತ್ತಿದ್ದ ಮೂವರು ಸ್ಥಳದಲ್ಲೇ ದುರ್ಮರಣರಾಜ್ಯಾದ್ಯಂತ ಸ್ಮಾರ್ಟ್, ತಂತ್ರಜ್ಞಾನ ಆಧಾರಿತ ಪೊಲೀಸ್ ವ್ಯವಸ್ಥೆ: ಗೃಹ ಇಲಾಖೆಗೆ 100 ದಿನಗಳ ಕಾರ್ಯಯೋಜನೆಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆ ನಾಳೆ ನಡೆಯಬೇಕಿದ್ದ ಮಹಾರಾಷ್ಟ್ರ ಟಿಇಟಿ ಪರೀಕ್ಷೆ ರದ್ದು: ಮೂವರು ಅರೆಸ್ಟ್ಮಾಲಿವುಡ್‌ಗೆ ಯಾರು ಬೇಕಾದರೂ ಬನ್ನಿ, ಆದರೆ ಏನನ್ನೂ ಬದಲಿಸುವ ಪ್ರಯತ್ನ ಮಾಡಬೇಡಿ, ಇಲ್ಲಿಂದ ಕಲಿತುಕೊಂಡು ಹೋಗಿ ಅಷ್ಟೇ: ಪೃಥ್ವಿರಾಜ್ ಸುಕುಮಾರನ್ ಖಡಕ್ ಹೇಳಿಕೆ; ವಿಡಿಯೊBREAKING: ದುಷ್ಕರ್ಮಿಗಳಿಂದ ದಾಳಿಗೊಳಗಾಗಿದ್ದ ರೌಡಿಶೀಟರ್ ಸಾವುBREAKING NEWS: RSS ವಿರುದ್ಧ ಅವಹೇಳನಕಾರಿ ಹೇಳಿಕೆ: ಪ್ರಿಯಾಂಕ್ ಖರ್ಗೆ, ನಲಪಾಡ್ ಗೆ ಸಮನ್ಸ್ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ ಪ್ರಕರಣ ಹೇಡಿತನದ ಕೃತ್ಯ: ಬಿ.ಕೆ.ಹರಿಪ್ರಸಾದ್BIG NEWS: ಅಯೋಧ್ಯೆ ರಾಮಮಂದಿರ ದೇಣಿಗೆ ಕಳ್ಳತನ ಕೇಸ್: ಚಂಪತ್ ರಾಯ್ ರಾಜೀನಾಮೆ ದೃಢಪಡಿಸಿದ ಟ್ರಸ್ಟ್, ಜು. 11ರಂದು ಪ್ರಮುಖರ ಸಭೆBREAKING NEWS: ರಾಷ್ಟ್ರ ರಾಜಧಾನಿ ದೆಹಲಿ, ಕಣಿವೆ ರಾಜ್ಯ ಜಮ್ಮು –ಕಾಶ್ಮೀರದಲ್ಲಿ ಪ್ರಬಲ ಭೂಕಂಪ: ಆಫ್ಘಾನಿಸ್ತಾನದಲ್ಲೂ ನಡುಗಿದ ಭೂಮಿFIFA ವಿಶ್ವಕಪ್: ಕೊಲಂಬಿಯಾ ಪಂದ್ಯಕ್ಕೂ ಮುನ್ನ ವಿಶೇಷ ಚಿನ್ನದ ಬಣ್ಣದ ಬೂಟುಗಳಲ್ಲಿ ತರಬೇತಿ ಪಡೆದ ಕ್ರಿಸ್ಟಿಯಾನೊ ರೊನಾಲ್ಡೊ