LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಟ್ಯಾಂಕ್ ನಿರ್ಮಾಣ ಕಾಮಗಾರಿ ವೇಳೆ ಲಿಫ್ಟ್ ಬಕೆಟ್ ಬಿದ್ದು ಇಬ್ಬರು ಕಾರ್ಮಿಕರು ಸಾವು

ಬಳ್ಳಾರಿ ಜಿಲ್ಲೆಯ ಕುರುಗೋಡುನ ಕುಡಿತಿನಿ ಪಟ್ಟಣ ಸಮೀಪ ಓವರ್ ಹೆಡ್ ಟ್ಯಾಂಕ್ ಕಾಮಗಾರಿಯ ವೇಳೆ ಕಾಂಕ್ರೀಟ್ ಲಿಫ್ಟ್ ಬಕೆಟ್ ಬಿದ್ದು ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ.

ಕುರುಗೋಡು ತಾಲೂಕಿನ ತಿಮ್ಮಲಾಪುರ ಗ್ರಾಮದ ಹೆಚ್. ಹುಲಿಯಪ್ಪ(27), ಗೆಣಿಕೆಹಾಳ ಗ್ರಾಮದ ಎ.ಕೆ. ನೀಲಪ್ಪ(35) ಮೃತಪಟ್ಟವರು.

ಕುಡಿತಿನಿಯ HLC ಕಾಲೋನಿಯ ಸಮೀಪ ಹೊಸದಾಗಿ ಓವರ್ ಟ್ಯಾಂಕ್ ನಿರ್ಮಾಣ ಮಾಡುತ್ತಿದ್ದು, ಕಾಮಗಾರಿಯ ಮರಳು, ಸಿಮೆಂಟ್ ಇತರೆ ನಿರ್ಮಾಣ ಸಾಮಗ್ರಿಗಳನ್ನು ಲಿಫ್ಟ್ ಮೂಲಕ ಮೇಲೆ ಸಾಗಿಸುತ್ತಿದ್ದರು. ಕಾಂಕ್ರೀಟ್ ಲಿಫ್ಟ್ ಬಕೆಟ್ ವೈರ್ ತುಂಡಾಗಿ 60 ಅಡಿ ಎತ್ತರದಿಂದ ಹುಲಿಯಪ್ಪ, ನೀಲಪ್ಪ ಕೆಳಗೆ ಬಿದ್ದಿದ್ದಾರೆ.

ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನು ಕೂಡಲೇ ಬಳ್ಳಾರಿಯ ಟ್ರಾಮಾ ಕೇರ್ ಸೆಂಟರ್ ಗೆ ಕರೆದೊಯ್ಯಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಬ್ಬರೂ ಮೃತಪಟ್ಟಿದ್ದಾರೆ. ಗುತ್ತಿಗೆದಾರ ಬಸವರಾಜ್ ಮತ್ತು ಸೂಪರ್ ವೈಸರ್ ಖಾದರ್ ಬಾಷಾ ಅವರು ಕಾರ್ಮಿಕರಿಗೆ ಮುಂಜಾಗ್ರತೆ ಕ್ರಮವಾಗಿ ಸುರಕ್ಷತಾ ಸಾಧನ ನೀಡದೆ ನಿರ್ಲಕ್ಷ್ಯದಿಂದ ಕೆಲಸ ಮಾಡಿಸಿಕೊಂಡಿದ್ದು, ಇದರಿಂದಾಗಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದು, ಗುತ್ತಿಗೆದಾರ ಮತ್ತು ಸೂಪರ್ ವೈಸರ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕುಡಿತಿನಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಕುಡಿತಿನಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಇನ್ಮೇಲೆ ಡೆಡ್ ಬಾಡಿ ಮೇಲೆ ಬಿಲ್ ವಸೂಲಿ ಬಂದ್ : ಮೃತದೇಹ ಹಸ್ತಾಂತರಕ್ಕೆ ಶೀಘ್ರ ಹೊಸ ಪಾಲಿಸಿ!ಬೆಂಗಳೂರಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯ ಬರ್ಬರ ಹತ್ಯೆ!BREAKING : ಖಾಸಗಿ ಆಸ್ಪತ್ರೆಗಳ ಕಳ್ಳಾಟಕ್ಕೆ ಬ್ರೇಕ್ : ಇನ್ಮುಂದೆ ರಶೀದಿಯಲ್ಲಿ ಔಷಧಗಳ ಬೆಲೆ ನಮೂದು ಕಡ್ಡಾಯ!🌺🌼🔱 ನವರಾತ್ರಿ ಮೊದಲನೇ ದಿನ – ಶ್ರೀ ಶೈಲಪುತ್ರಿ ದೇವಿ ಆರಾಧನೆ 🔱🌼🌺BIG NEWS : ಹಬ್ಬದ ಸಂದರ್ಭದಲ್ಲೆ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ : ರಾಜ್ಯದಲ್ಲಿ ಗಗನಕ್ಕೇರಿದ ಅಕ್ಕಿ, ತೊಗರಿಬೇಳೆ ಬೆಲೆ!GOOD NEWS : 'KSRTC' ಯಿಂದ ದಸರಾ ಸಂಭ್ರಮಕ್ಕೆ ಸ್ಪೆಷಲ್ ಗಿಫ್ಟ್: 3,000ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಸಂಚಾರ!ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!