LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನನ್ನಿಂದ ತೊಂದರೆಯಾಗಿದ್ದರೆ ವಿಷಾದಿಸುತ್ತೇನೆ; ಆದರೆ ಪರೀಕ್ಷಾ ಅಕ್ರಮ, ಗೊಂದಲಕ್ಕೆ ಬೇಸತ್ತು ವಿದ್ಯಾರ್ಥಿಗಳ ಆತ್ಮಹತ್ಯೆಗೆ ಪ್ರಧಾನಿ ಮೋದಿ, ಪ್ರಧಾನ್ ಒಮ್ಮೆಯಾದರೂ ಕ್ಷಮೆ ಕೇಳಿದರಾ? ಎಂದ ಬಿ.ಕೆ.ಹರಿಪ್ರಸಾದ್

ಬೆಂಗಳೂರು: ನಮ್ಮ ಪದಗ್ರಹಣ ಕಾರ್ಯಕ್ರಮದಿಂದಾಗಿ ನೀಟ್ ಪರೀಕ್ಷೆಯ ವಿದ್ಯಾರ್ಥಿಗಳಿಗೆ ಏನಾದರೂ ತೊಂದರೆಯಾಗಿದ್ದರೆ ನಾನು ವೈಯಕ್ತಿಕವಾಗಿ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್‌ ತಿಳಿಸಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷರ ಪದಗ್ರಹಣದ ಸಮಾವೇಶದಿಂದಾಗಿ ನೀಟ್ ಪರೀಕ್ಷೆಯ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ ಎಂದು ಆರೋಪಿಸುತ್ತಿರುವ ಬಿಜೆಪಿ ನಾಯಕರು, ಸಂಸದ ತೇಜಸ್ವಿ ಸೂರ್ಯ ಹೇಳಿಕೆಗಳಿಗೆ ಪ್ರತಿಕ್ರಿಯಿಸಿದ ಬಿ.ಕೆ.ಹರಿಪ್ರಸಾದ್, ಬಿಜೆಪಿಯವರು ಸರಣಿ ತಪ್ಪು ಮಾಹಿತಿ ನೀಡುವ ಸುಳ್ಳಿನ ಫ್ಯಾಕ್ಟರಿ ಇಟ್ಟುಕೊಂಡಿದ್ದಾರೆ. ತಮ್ಮದೇ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಕಾಂಗ್ರೆಸ್ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಭಾನುವಾರ ಬೆಂಗಳೂರಿನಲ್ಲಿ ನಡೆದ ಸಂಕಲ್ಪ ಸಮಾವೇಶದ ವೇಳೆ ನಗರದಲ್ಲಿ ಟ್ರಾಫಿಕ್ ಜಾಮ್ ಆಗಿದ್ದು ನಿಜ, ಇದರಿಂದ ಸಾರ್ವಜನಿಕರಿಗೆ ಸಣ್ಣಪುಟ್ಟ ತೊಂದರೆಗಳಾಗಿವೆ. ನಮ್ಮ ಕಾರ್ಯಕ್ರಮದಿಂದಾಗಿ ನೀಟ್ ಪರೀಕ್ಷೆಯ ವಿದ್ಯಾರ್ಥಿಗಳಿಗೆ ಏನಾದರೂ ತೊಂದರೆಯಾಗಿದ್ದರೆ ನಾನು ವೈಯಕ್ತಿಕವಾಗಿ ವಿಷಾದ ವ್ಯಕ್ತಪಡಿಸುತ್ತೇನೆ. ಆದರೆ, ಬೆಂಗಳೂರು ದಕ್ಷಿಣದ ಸಂಸದ ತೇಜಸ್ವಿ ಸೂರ್ಯ ತಪ್ಪು ಸಂದೇಶ ಹರಡುತ್ತಿದ್ದಾರೆ. ನೀಟ್ ಪರೀಕ್ಷೆ ಆರಂಭವಾಗಿದ್ದು ಮಧ್ಯಾಹ್ನ 2 ಗಂಟೆಗೆ. ಆದರೆ ನಮ್ಮ ಸಮಾವೇಶಕ್ಕೆ ಬಂದಿದ್ದ ಎಲ್ಲ ಬಸ್‌ಗಳು ಬೆಳಿಗ್ಗೆ 10 ಗಂಟೆಯ ಒಳಗೇ ಅರಮನೆ ಮೈದಾನದ ಆವರಣ ಪ್ರವೇಶಿಸಿದ್ದವು. ಹೀಗಿದ್ದರೂ ಕಾಂಗ್ರೆಸ್‌ನಿಂದಲೇ ಪರೀಕ್ಷೆ ಮಿಸ್ ಆಗಿದೆ ಎಂದು ಸುಳ್ಳು ಹಬ್ಬಿಸಲಾಗುತ್ತಿರುವುದು ಎಷ್ಟು ಸರಿ? ಎಂದು ಪ್ರಶ್ನಿಸಿದರು.

ಕೇವಲ ಬೆಂಗಳೂರು ಮಾತ್ರವಲ್ಲದೆ ಮಂಗಳೂರು, ಯಾದಗಿರಿ, ಮೈಸೂರಿನಲ್ಲೂ ಸಹ ಅಸಂಖ್ಯಾತ ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾಗಿದ್ದಾರೆ, ಹಲವರಿಗೆ ಪರೀಕ್ಷೆ ಮಿಸ್ ಆಗಿದೆ. ಹಾಗಾದರೆ ಅಲ್ಲಿ ಯಾವ ಕಾಂಗ್ರೆಸ್ ಕಾರ್ಯಕ್ರಮ ಇತ್ತು? ಅಲ್ಲಿ ಟ್ರಾಫಿಕ್ ಜಾಮ್ ಮಾಡಲು ಯಾರು ಹೋಗಿದ್ದರು? ದೇಶಾದ್ಯಂತ ನೀಟ್ ಪರೀಕ್ಷಾ ವ್ಯವಸ್ಥೆಯಲ್ಲಿ ಆಗಿರುವ ಭೀಕರ ಲೋಪಗಳು ಮತ್ತು ಗೊಂದಲಗಳಿಂದಾಗಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಾಗದೆ ವಂಚಿತರಾಗಿದ್ದಾರೆ. ಇದನ್ನು ಮುಚ್ಚಿಹಾಕಲು ಬಿಜೆಪಿಯವರು ಈಗ ರಾಜಕೀಯ ಮಾಡುತ್ತಾ ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಪ್ರಧಾನಿ ನರೇಂದ್ರ ಮೋದಿ ಅವರು ನಕಲಿ ಪದವಿ ಪ್ರಮಾಣಪತ್ರ ಇಟ್ಟುಕೊಂಡಿರುವ ಮನುಷ್ಯ. ಅವರು ಜೀವನದಲ್ಲಿ ಯಾವುದೇ ಕಠಿಣ ಪರೀಕ್ಷೆಗಳನ್ನು ಎದುರಿಸಿದವರಲ್ಲ. ದೇಶದ ವಿದ್ಯಾರ್ಥಿಗಳ ಜೊತೆ ‘ಪರೀಕ್ಷಾ ಪೇ ಚರ್ಚಾ’ ಅಂತ ದೊಡ್ಡ ದೊಡ್ಡ ಮಾತುಗಳನ್ನಾಡುವ ಪ್ರಧಾನಿ, ಇಷ್ಟು ದೊಡ್ಡ ಮಟ್ಟದಲ್ಲಿ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದರೂ ಈವರೆಗೆ ಬಾಯಿ ಬಿಟ್ಟಿಲ್ಲ. ಇಂತಹವರಿಂದಾಗಲಿ ಅಥವಾ ಕುಮಾರಸ್ವಾಮಿಯವರಿಂದಾಗಲಿ ನಾವು ಆಡಳಿತ ಕಲಿಯಬೇಕಿಲ್ಲ. ಮೊದಲು ಇವರೆಲ್ಲ ಪೇಪರ್ ಲೀಕ್ ಹಗರಣಕ್ಕೆ ದೇಶದ ಜನರಿಗೆ ಉತ್ತರ ಕೊಡಲಿ, ಆಮೇಲೆ ಕಾಂಗ್ರೆಸ್ ಕಡೆ ಬೆರಳು ಮಾಡಲಿ ಎಂದು ಹರಿಹಾಯ್ದರು.

ನೀಟ್ ಪರೀಕ್ಷೆಯು ಪದೇ ಪದೇ ಮುಂದೂಡಲ್ಪಟ್ಟು ಇಡೀ ದೇಶದ ವಿದ್ಯಾರ್ಥಿಗಳ ಭವಿಷ್ಯ ಕತ್ತಲಿಗೆ ನೂಕಲ್ಪಟ್ಟಿದೆ. ಪರೀಕ್ಷಾ ಅಕ್ರಮ ಹಾಗೂ ಗೊಂದಲಗಳಿಂದ ಬೇಸತ್ತು ಹಲವು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರೂ ಪ್ರಧಾನಿ ಮೋದಿಯವರಾಗಲಿ ಅಥವಾ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಆಗಲಿ ಒಂದೇ ಒಂದು ಬಾರಿಯಾದರೂ ಕ್ಷಮೆ ಕೇಳಿದರಾ? ವಿಷಾದ ವ್ಯಕ್ತಪಡಿಸಿದ್ದಾರಾಅ? ಅಥವಾ ನೊಂದ ಪೋಷಕರಿಗೆ, ವಿದ್ಯಾರ್ಥಿಗಳಿಗೆ ಒಂದು ಸಾಂತ್ವನದ ಮಾತುಗಳನ್ನಾದರೂ ಆದಿದ್ದಾರಾ? ಎಂದು ಪ್ರಶ್ನಿಸಿದರು.

ಇದೇ ವೇಳೆ ನೀಟ್ ಪರೀಕ್ಷಾ ಗೊಂದಲಗಳಿಂದ ರಾಜ್ಯದಲ್ಲಿ ತೊಂದರೆಗೊಳಗಾದ ವಿದ್ಯಾರ್ಥಿಗಳ ಸಂಕಷ್ಟ ಕೇಳಲು ನಮ್ಮ ಪಕ್ಷದಿಂದ ಒಂದು ವಿಶೇಷ ‘ಸಹಾಯ ಹಸ್ತ ತಂಡ’ ರಚನೆ ಮಾಡುತ್ತಿದ್ದೇವೆ. ನಮ್ಮ ತಂಡವು ಸಂಕಷ್ಟದಲ್ಲಿರುವ ವಿದ್ಯಾರ್ಥಿಗಳನ್ನು ಖುದ್ದಾಗಿ ಸಂಪರ್ಕಿಸಿ, ಅವರಿಗೆ ಬೇಕಾದ ಕಾನೂನು ನೆರವು, ಸೂಕ್ತ ಸಲಹೆ ಹಾಗೂ ಎಲ್ಲ ರೀತಿಯ ಸಹಕಾರ ನೀಡಲು ಬದ್ಧವಾಗಿದೆ ಎಂದು ಹರಿಪ್ರಸಾದ್‌ ತಿಳಿಸಿದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?