LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸುವ ಸ್ಕೌಟ್ ಕಾರ್ಯಕ್ರಮದ ಅವಧಿ ವಿಸ್ತರಿಸುವಂತೆ ಡಿಕೆಶಿ ಸಲಹೆ

ಬೆಂಗಳೂರು: “ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸುವ ಸ್ಕೌಟ್ ಕಾರ್ಯಕ್ರಮವನ್ನು 3 ವರ್ಷಗಳಿಗೆ ಸೀಮಿತಗೊಳಿಸದೇ, ಇದನ್ನು ಹೆಚ್ಚಿನ ಅವಧಿಗೆ ವಿಸ್ತರಿಸಿ” ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ಸಲಹೆ ನೀಡಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕರ್ನಾಟಕ ಸರ್ಕಾರದ ಉನ್ನತ ಶಿಕ್ಷಣ ಇಲಾಖೆ ಮತ್ತು ಬ್ರಿಟಿಷ್ ಕೌನ್ಸಿಲ್ ಸಹಯೋಗದೊಂದಿಗೆ ಅತ್ಯುತ್ತಮ ಪ್ರತಿಭಾವಂತ ಪದವಿಪೂರ್ವ ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳಲಾದ SCOUT-2.0 ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸೋಮವಾರ ಚಾಲನೆ ನೀಡಿ ಮಾತನಾಡಿದರು.

“ರಾಜ್ಯದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಭೇಟಿ ಮಾಡಿರುವುದಕ್ಕೆ ಸಂತೋಷವಾಗಿದೆ. ಕರ್ನಾಟಕ ಎಂದರೆ ಬೆಂಗಳೂರು ಮಾತ್ರವಲ್ಲ. ಚಾಮರಾಜನಗರದಿಂದ ಬೀದರ್ ವರೆಗೆ ಎಲ್ಲಾ ಗ್ರಾಮೀಣ ಪ್ರದೇಶದವರೆಗೆ ಎಲ್ಲಾ ಭಾಗದ ವಿದ್ಯಾರ್ಥಿಗಳು ಇದ್ದಾರೆ. ಎಲ್ಲಾ ವಿವಿಗಳು ಈ ಜವಾಬ್ದಾರಿ ವಹಿಸಿಕೊಂಡಿರುವುದು ಸಂತೋಷದ ವಿಚಾರ. ಬ್ರಿಟೀಷರು ಇಲ್ಲಿ ಆಳ್ವಿಕೆ ಮಾಡಿದ್ದರೂ ಅವರೊಂದಿಗೆ ಈ ಸಹಯೋಗ ಹಳೆಯದಾಗಿದೆ” ಎಂದರು.

“ಜ್ಞಾನಗಳು, ಆಲೋಚನೆಗಳ ವಿನಿಮಯ ಮುಂದುವರಿಸುತ್ತಿದ್ದೇವೆ. ಈ ಕಾರ್ಯಕ್ರಮದ ಮೂಲಕ ಕರ್ನಾಟಕ ಸರ್ಕಾರದ ಜೊತೆಗೆ ಕೈಜೋಡಿಸಿರುವ ಬ್ರಿಟೀಷ್ ಕೌನ್ಸಿಲ್ ಗೆ ಧನ್ಯವಾದ ತಿಳಿಸುತ್ತೇನೆ. ನಾನು ಆಯ್ಕೆಯಲ್ಲಿ ಶಿಕ್ಷಣತಜ್ಞ. ಶಿಕ್ಷಣ ಎಲ್ಲರಿಗೂ ಅತಿ ಮುಖ್ಯವಾದುದು. ಈ ವಿದ್ಯಾರ್ಥಿಗಳು ನಮ್ಮ ರಾಯಭಾರಿಗಳು. ನಾಯಕರುಗಳನ್ನು ತಯಾರು ಮಾಡುವವನೇ ನಿಜವಾದ ನಾಯಕ. ಇಲ್ಲಿರುವ ವಿದ್ಯಾರ್ಥಿಗಳು ನಾಯಕರುಗಳೇ. ನೀವೆಲ್ಲರೂ ಸರಿಯಾದ ಹಾದಿಯಲ್ಲಿದ್ದೀರಿ. ನೀವು ಕರ್ನಾಟಕದ ಪ್ರತಿನಿಧಿಯಾಗಿದ್ದು, ನಿಮ್ಮ ಭವಿಷ್ಯ ಬದಲಿಸಿಕೊಳ್ಳಲು ಇದು ಉತ್ತಮ ಅವಕಾಶವಾಗಿದೆ” ಎಂದರು.

ಕರ್ನಾಟಕ ಹಾಗೂ ಬೆಂಗಳೂರು ಪ್ರತಿಭಾನ್ವಿತರ ಕೇಂದ್ರ

“ಕರ್ನಾಟಕ ಹಾಗೂ ಬೆಂಗಳೂರು ಪ್ರತಿಭಾನ್ವಿತರ ಕೇಂದ್ರ. ಇಡೀ ವಿಶ್ವ ನಮ್ಮ ಕಡೆ ನೋಡುತ್ತಿದೆ. ಕರ್ನಾಟಕದ ಮೂಲಕ ಭಾರತವನ್ನು ನೋಡಲಾಗುತ್ತಿದೆ. ನೀವು ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಎಂದು ಆತ್ಮವಿಶ್ವಾಸ ಕಳೆದುಕೊಳ್ಳಬಾರದು. ನಮ್ಮ ಕಾಲದಲ್ಲಿ ನಾವು ಕಷ್ಟಪಟ್ಟು ಓದಬೇಕಿತ್ತು. ಈಗ ಎಲ್ಲಾ ಮಾಹಿತಿ ನಿಮ್ಮ ಬೆರಳತುದಿಯಲ್ಲಿವೆ. ಈಗ ಶಿಕ್ಷಕರು ವಿದ್ಯಾರ್ಥಿಗಳಿಂದಲೇ ಪಾಠ ಮಾಡಿಸುವ ಮಟ್ಟಿಗೆ ಕಾಲ ಬದಲಾವಣೆಯಾಗಿದೆ. ಪ್ರತಿಯೊಬ್ಬರು ಸಮರ್ಥರು, ನೀವೆಲ್ಲರೂ ಜಾಗತಿಕ ಮಟ್ಟದಲ್ಲಿ ಸ್ಪರ್ಧೆ ಮಾಡುತ್ತಿದ್ದೀರಿ. ಈ ಸ್ಕೌಟ್ ಕಾರ್ಯಕ್ರಮದಲ್ಲಿ ನಿಮ್ಮ ಆಲೋಚನೆ ದೂರದೃಷ್ಟಿಯಾಗಿರಬೇಕು. ನಿಮ್ಮ ಮೇಲೆ ಸಾಕಷ್ಟು ನಿರೀಕ್ಷೆಗಳಿವೆ” ಎಂದು ತಿಳಿಸಿದರು.

“ನಮ್ಮ ಸರ್ಕಾರ ಹಾಗೂ ವಿವಿಗಳು ಈ ಕಾರ್ಯಕ್ರಮ ವಿಸ್ತರಣೆ ಮಾಡಲು ಸಿದ್ಧವಿದೆ. ನಮ್ಮ ವಿದ್ಯಾರ್ಥಿಗಳಿಗೆ ಅವಕಾಶ ಸಿಗಬೇಕು. ಇಲ್ಲಿಂದ ಬ್ರಿಟನ್ ಗೆ ಹೋಗಿ ಅಲ್ಲೇ ನೆಲೆಸಬೇಡಿ, ಅಲ್ಲಿ ವ್ಯಾಸಂಗ ಮಾಡಿ ಭಾರತಕ್ಕೆ ಮರಳಿ, ಇಲ್ಲಿ ಕೆಲಸ ಮಾಡಿ. ಇಲ್ಲಿಗೆ ಬಂದು ನೀವು ನಿಮ್ಮ ಕ್ಷೇತ್ರದಲ್ಲಿ ಬೆಳೆಯಿರಿ. ವಿವಿಗಳ ಉಪಕುಲಪತಿಗಳು ಇನ್ನಷ್ಟು ಪ್ರತಿಭಾವಂತ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಬೇಕು. ವಿದ್ಯಾರ್ಥಿಗಳ ಪ್ರತಿಭೆಗೆ ಅನುಗುಣವಾಗಿ ಅವರನ್ನು ಗುರುತಿಸಿ, ಅವರಿಗೆ ಅವಕಾಶ ಕಲ್ಪಿಸಬೇಕು. ಕಳೆದ ವರ್ಷ ಗ್ರಾಮೀಣ ಭಾಗದ ಮಕ್ಕಳು ಉತ್ತಮ ಸಾಧನೆ ಮಾಡಿದ್ದನ್ನು ನೋಡಿದ್ದೇವೆ” ಎಂದು ಹೇಳಿದರು.

ಉದ್ಯೋಗಿಗಳಾಗುವುದಕ್ಕಿಂತ ಉದ್ಯೋಗದಾತರಾಗುವುದು ನಿಮ್ಮ ಗುರಿಯಾಗಲಿ

“ಇದು ಕೇವಲ ಪದವಿ ಪಡೆಯುವ ಕಾರ್ಯಕ್ರಮವಲ್ಲ. ಯುವ ವಿರ್ದಾರ್ಥಿಗಳಿಗೆ ಪ್ರೋತ್ಸಾಹ ನೀಡಿ ಅವರ ಕ್ಷೇತ್ರಗಳಲ್ಲಿ ಅವರನ್ನು ನಾಯಕರನ್ನಾಗಿ ಬೆಳೆಸುವುದಾಗಿದೆ. ಈ ಅವಕಾಶ ಕೆಲವರಿಗೆ ಮಾತ್ರ ಸಿಗುತ್ತದೆ. ನೀವು ಕನಸು ಕಾಣಬೇಕು, ಆ ಕನಸು ನನಸಾಗಿಸಿಕೊಳ್ಳಲು ಹಂಬಲಿಸಬೇಕು. ಅದಕ್ಕಾಗಿ ಬದ್ಧರಾಗಿರಬೇಕು, ಶಿಸ್ತಿನ ಪರಿಶ್ರಮ ಹಾಕಬೇಕು. ನೀವು ನಿಮ್ಮ ಜೀವನದಲ್ಲಿ ಯಾವುದೇ ಹಂತಕ್ಕೆ ಹೋದರೂ ನಿಮ್ಮ ಮೂಲವನ್ನು ಮಾತ್ರ ಮರೆಯಬಾರದು. ನೀವು ನಿಮ್ಮ ಮೂಲವನ್ನು ಮರೆತರೆ ಯಶಸ್ಸು ಸಾಧಿಸಲು ಸಾಧ್ಯವಿಲ್ಲ. ಉದ್ಯೋಗಿಗಳಾಗುವುದಕ್ಕಿಂತ ಉದ್ಯೋಗದಾತರಾಗುವುದು ನಿಮ್ಮ ಗುರಿಯಾಗಲಿ” ಎಂದು ಸಲಹೆ ನೀಡಿದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಇನ್ಮೇಲೆ ಡೆಡ್ ಬಾಡಿ ಮೇಲೆ ಬಿಲ್ ವಸೂಲಿ ಬಂದ್ : ಮೃತದೇಹ ಹಸ್ತಾಂತರಕ್ಕೆ ಶೀಘ್ರ ಹೊಸ ಪಾಲಿಸಿ!ಬೆಂಗಳೂರಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯ ಬರ್ಬರ ಹತ್ಯೆ!BREAKING : ಖಾಸಗಿ ಆಸ್ಪತ್ರೆಗಳ ಕಳ್ಳಾಟಕ್ಕೆ ಬ್ರೇಕ್ : ಇನ್ಮುಂದೆ ರಶೀದಿಯಲ್ಲಿ ಔಷಧಗಳ ಬೆಲೆ ನಮೂದು ಕಡ್ಡಾಯ!🌺🌼🔱 ನವರಾತ್ರಿ ಮೊದಲನೇ ದಿನ – ಶ್ರೀ ಶೈಲಪುತ್ರಿ ದೇವಿ ಆರಾಧನೆ 🔱🌼🌺BIG NEWS : ಹಬ್ಬದ ಸಂದರ್ಭದಲ್ಲೆ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ : ರಾಜ್ಯದಲ್ಲಿ ಗಗನಕ್ಕೇರಿದ ಅಕ್ಕಿ, ತೊಗರಿಬೇಳೆ ಬೆಲೆ!GOOD NEWS : 'KSRTC' ಯಿಂದ ದಸರಾ ಸಂಭ್ರಮಕ್ಕೆ ಸ್ಪೆಷಲ್ ಗಿಫ್ಟ್: 3,000ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಸಂಚಾರ!ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!