LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯದ ಜನತೆಗೆ ಗುಡ್ ನ್ಯೂಸ್: ವಸತಿ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕಕ್ಕೆ ಒಸಿ ವಿನಾಯಿತಿ ನೀಡಿ ಆದೇಶ

ಬೆಂಗಳೂರು: ರಾಜ್ಯದಲ್ಲಿ ವಸತಿ ಕಟ್ಟಡಗಳ ವಿದ್ಯುತ್ ಸಂಪರ್ಕಕ್ಕೆ ಒಸಿ ವಿನಾಯಿತಿ ನೀಡಲಾಗಿದ್ದು, ಮೇ 31ರೊಳಗೆ ಪೂರ್ಣವಾದ ವಸತಿ ಕಟ್ಟಡಗಳಿಗೆ ಒಸಿ ಇಲ್ಲದೆ ಅರ್ಜಿ ಸಲ್ಲಿಸಲು ಇಂದಿನಿಂದ 15 ದಿನ ಕಾಲಾವಕಾಶ ನೀಡಲಾಗಿದೆ. ಇಂಧನ ಇಲಾಖೆಯ ದೀನ ಕಾರ್ಯದರ್ಶಿ ಶಾಂತರಾಮ ಅವರು ಆದೇಶ ಹೊರಡಿಸಿದ್ದಾರೆ

ಮೇ 31ರೊಳಗೆ ಪೂರ್ಣಗೊಂಡ ವಸತಿ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕಕ್ಕೆ ಒಸಿ ವಿನಾಯಿತಿ ನೀಡಿದ್ದು, ಒಸಿ ಇಲ್ಲದೆ ಅರ್ಜಿ ಸಲ್ಲಿಸಲು ಇಂದಿನಿಂದ 15 ದಿನಗಳ ಕಾಲ ಕಾಲಾವಕಾಶ ನೀಡಲಾಗುವುದು. ಇಂಧನ ಇಲಾಖೆಯ ಅಧೀನ ಕಾರ್ಯದರ್ಶಿ ಶಾಂತರಾಮ ಈ ಕುರಿತಾಗಿ ಆದೇಶ ಹೊರಡಿಸಿದ್ದಾರೆ.

 ಜೂನ್ 20ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತಾಗಿ ತೀರ್ಮಾನ ಮಾಡಲಾಗಿತ್ತು. ಅನುಷ್ಠಾನಕ್ಕೆ ಆದೇಶ ಹೊರಡಿಸುವಂತೆ ಸಂಪುಟ ಸಭೆ ಸೂಚನೆ ನೀಡಿತ್ತು.

ಸಚಿವ ಸಂಪುಟ ಸಭೆಯಲ್ಲಿ ಇಂಧನ ಇಲಾಖೆಗೆ ಈ ಕುರಿತಾಗಿ ಸೂಚನೆ ನೀಡಿದ್ದ ಹಿನ್ನೆಲೆಯಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ, ಮಹಾನಗರ ಪಾಲಿಕೆಗಳ ವ್ಯಾಪ್ತಿ ಮತ್ತು ನಗರ ಸ್ಥಳೀಯ ಸಂಸ್ಥೆ ಹಾಗೂ ಗ್ರಾಮ ಪಂಚಾಯಿತಿ ವ್ಯಾಪ್ತಿಗಳಿಗೆ ಆದೇಶ ಅನ್ವಯ ಆಗಲಿದೆ.

2400 ಚ.ಅ. ವರೆಗಿನ ಅಳತೆಯ ನಿವೇಶನಗಳ ವಸತಿ ಕಟ್ಟಡಗಳಿಗೆ ಇಂಧನ ಇಲಾಖೆ ಒಸಿ ವಿನಾಯಿತಿ ನೀಡಿದೆ. ಜೊತೆಗೆ ಜಿಪ್ಲಸ್ 3 ಅಥವಾ ಸ್ಟಿಲ್ಟ್ ಪಾರ್ಕಿಂಗ್ ಪ್ಲಸ್ 4 ಮಹಡಿಗಳ ವಸತಿ ಕಟ್ಟಡಗಳಿಗೆ ನಿಯಮ ಅನ್ವಯವಾಗಲಿದೆ. ಗ್ರಾಮೀಣ ಭಾಗದ ರೈತರ ಮನೆಗಳು, ತೋಟದ ಮನೆ, ಕೃಷಿ ಉಪಕರಣದ ಮನೆಗಳು, ದನದ ಕೊಟ್ಟಿಗೆಗಳಿಗೆ ವಿನಾಯಿತಿ ನೀಡಲಾಗಿದ್ದು, 15 ದಿನದೊಳಗೆ ಕಟ್ಟಡ ಮಾಲೀಕರು ಕಟ್ಟಡದ ಜೊತೆಗಿನ ಫೋಟೋ, ಜಿಪಿಎಸ್ ದಾಖಲೆಯನ್ನು ಅರ್ಜಿ ಜೊತೆಗೆ ಸಲ್ಲಿಸಬೇಕಿದೆ.

ವಿದ್ಯುತ್ ಸರಬರಾಜು ಕಂಪನಿಗಳು ಅನುಸರಿಸಬೇಕಿರುವ ಮಾರ್ಗಸೂಚಿಗಳನ್ನು ಪ್ರತ್ಯೇಕವಾಗಿ ಹೊರಡಿಸಲು ತೀರ್ಮಾನಿಸಲಾಗಿದೆ. ಈ ನಿರ್ಧಾರದಿಂದ ನಗರ ಮತ್ತು ಗ್ರಾಮೀಣ ಭಾಗದಲ್ಲಿನ ಕಟ್ಟಡಗಳಿಗೆ ಶಾಶ್ವತ ವಿದ್ಯುತ್ ಸಂಪರ್ಕ ಪಡೆಯುವ ಪ್ರಕ್ರಿಯೆ ಸುಗಮವಾಗಲಿದೆ ಎನ್ನಲಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?