LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅಡ್ಡ ಮತದಾನ: ರಾಜ್ಯ ಬಿಜೆಪಿ ನಾಯಕರಿಗೆ ಹೈಕಮಾಂಡ್ ಮಹತ್ವದ ಸೂಚನೆ

ನವದೆಹಲಿ: ವಿಧಾನ ಪರಿಷತ್​ ಚುನಾವಣೆಯಲ್ಲಿ ಬಿಜೆಪಿ ಶಾಸಕರಿಂದ ಅಡ್ಡಮತದಾನ ವಿಚಾರಕ್ಕೆ ಸಂಬಂಧಿಸಿದಂತೆ ಹೈಕಮಾಂಡ್ ಬುಲಾವ್ ಮೇರೆಗೆ ರಾಅಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ವಿಪಕ್ಷ ನಾಯಕ ಆರ್​. ಅಶೋಕ್ ದೆಹಲಿಗೆ ತೆರಳಿದ್ದು, ಹೈಕಮಾಂಡ್ ನಾಯಕರು ರಾಅಜ್ಯದ ನಾಅಯಕರಿಗೆ ಮಹತ್ವದ ಸೂಚನೆ ನೀಡಿದ್ದಾರೆ.

ದೆಹಲಿಗೆ ಕರೆಸಿಕೊಂಡಿದ್ದ ವರಿಷ್ಠರು ಅಡ್ಡಮತದಾನ ​ ಸಂಬಂಧ ಜೂನ್ 25ರ ಒಳಗೆ ತುರ್ತಾಗಿ ಸಂಪೂರ್ಣ ವರದಿ ನೀಡಲು ಸಿ.ಟಿ.ರವಿ ನೇತೃತ್ವದ ಸತ್ಯಸೋಧನಾ ಸಮಿತಿಗೆ ಸೂಚಿಸಿದೆ. ಈ ಸಂಬಂಧ ಅಶೋಕ್​​ ಮತ್ತು ವಿಜಯೇಂದ್ರ ಅವರಿಗೆ ಸ್ಪಷ್ಟ ಮಾಹಿತಿಯನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ರವಾನಿಸಿದ್ದಾರೆ ಎಂದು ತಿಳಿದುಬಂದಿದೆ.

ಪ್ರಕರಣವನ್ನು ಬಿಜೆಪಿ ಹೈಕಮಾಂಡ್‌ ಗಂಭೀರವಾಗಿ ಪರಿಗಣಿಸಿದ್ದು, ವರದಿಯಲ್ಲಿ ಅಡ್ಡಮತದಾನ ಮಾಡಿದ ಶಾಸಕರ ಹೆಸರು ಸಮೇತ ಮಾಹಿತಿ ನೀಡುವ ಜೊತೆಗೆ ಕ್ರಾಸ್​​ ವೋಟಿಂಗ್​​ ಮಾಡಿದ ಕಾರಣವನ್ನೂ ವಿವರವಾಗಿ ನೀಡುವಂತೆ ನಿತಿನ್​​ ನಬಿನ್​​ ರಾಜ್ಯ ಘಟಕಕ್ಕೆ ಸೂಚಿಸಿದ್ದಾರೆ. ಸಮಿತಿ ನೀಡುವ ವರದಿ ಆಧರಿಸಿ ತುರ್ತು ಕ್ರಮ ಕೈಗೊಳ್ಳಲು ನಿರ್ಧರಿಸಿದೆ.

ಸಾಂದರ್ಭಿಕ ಸಾಕ್ಷಿ ಮತ್ತು ಹೇಳಿಕೆ ಪರಾಮರ್ಶಿಸಿ ಸಿ.ಟಿ.ರವಿ ನೇತೃತ್ವದ ಸಮಿತಿ ಪ್ರಾಥಮಿಕ ವರದಿ ಸಿದ್ಧಪಡಿಸಲಿದ್ದು, ದೆಹಲಿಯಿಂದ ಸೂಚನೆ ಬಂದರೆ ಇಂದೇ ಪ್ರಾಥಮಿಕ ಮಾಹಿತಿ ರವಾನೆ ಸಾಧ್ಯತೆ ಇದೆ. ಇಲ್ಲದಿದ್ದರೆ ಬಿ.ವೈ. ವಿಜಯೇಂದ್ರ ದೆಹಲಿಯಿಂದ ಹಿಂತಿರುಗಿದ ಬಳಿಕ ವರದಿ ಸಲ್ಲಿಕೆ ನಡೆಯಲಿದೆ. ಆದರೆ ಅಡ್ಡ ಮತದಾನ ಮಾಡಿದವರ ಹೆಸರು ಉಲ್ಲೇಖಿಸುವುದು ಕಷ್ಟಸಾಧ್ಯದ ವಿಚಾರವಾಗಿದ್ದು, ಬಹುತೇಕ ಎಲ್ಲಾ ಶಾಸಕರನ್ನು ದೂರವಾಣಿ ಮೂಲಕ ಅದಾಗಲೇ ಸಮಿತಿ ಸಂಪರ್ಕಿಸಿದೆ. ಜೂನ್ 25ರೊಳಗೆ ವರದಿ ಸಲ್ಲಿಸುವಂತೆ ಸಮಿತಿಗೆ ಜೂನ್ 19ರಂದೇ ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಆದೇಶಿಸಿದ್ದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?