ಬೆಂಗಳೂರು: ಬಸ್ ಪಾಸ್ ಶುಲ್ಕ ವಾಪಸಾತಿಗಾಗಿ ವಿದ್ಯಾರ್ಥಿಗಳು ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಹಣ ಪಾವತಿಸಿ ಬಸ್ ಪಾಸ್ ಪಡೆದುಕೊಂಡ ವಿದ್ಯಾರ್ಥಿಗಳು ಪಾಸ್ ಗಾಗಿ ನೀಡಿದ ಹಣವನ್ನು ಮರುಪಾವತಿ ಪಡೆದುಕೊಳ್ಳಲು ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಕೆಎಸ್ಆರ್ಟಿಸಿ ಪ್ರಕಟಣೆ ತಿಳಿಸಿದೆ.
ಸೇವಾ ಸಿಂಧು ಪೋರ್ಟಲ್ ಐಡಿಯಲ್ಲಿ ಮೊಬೈಲ್ ಸಂಖ್ಯೆ ನಮೂದಿಸಬೇಕು. ಆಧಾರ್ ಆಧಾರಿತ ಇ-ಕೆವೈಸಿ ಪೂರ್ಣಗೊಳಿಸಬೇಕು. ವಿದ್ಯಾರ್ಥಿಗಳು ತಮ್ಮ ಅಥವಾ ಪೋಷಕರ ಬ್ಯಾಂಕ್ ಖಾತೆಯ ವಿವರಗಳನ್ನು ನಮೂದಿಸಬೇಕು. ಅರ್ಜಿ ಸಲ್ಲಿಸಿದ ಏಳು ದಿನಗಳ ಒಳಗೆ ಬಸ್ ಪಾಸ್ ಶುಲ್ಕದ ಮೊತ್ತ ಖಾತೆಗೆ ಮರುಪಾವತಿಸಲಾಗುವುದು ಎಂದು ಹೇಳಲಾಗಿದೆ.
sevasindhuservices.karnataka.gov.in/buspassservices/ ಸೇವಾ ಸಿಂಧು ಪೋರ್ಟಲ್ ನಲ್ಲಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.