LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅಡ್ಡಮತದಾನ ವಿಚಾರ: ಏಕಾಂಗಿಯಾಗಿ ಧರ್ಮಸ್ಥಳಕ್ಕೆ ತೆರಳಲು ಮುಂದಾದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

ಬೆಂಗಳೂರು: ವಿಧಾನ ಪರಿಷತ್ ಚುನವಣೆಯಲ್ಲಿ ಬಿಜೆಪಿ ಶಾಸಕರಿಂದ ಅಡ್ಡಮತದಾನ ಬೆನ್ನಲ್ಲೇ ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ, ಶಾಸಕರು ಆಣೆ-ಪ್ರಮಾಣ ಮಾಡುವಂತೆ ಹೇಳಿಕೆ ನೀಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಇದೀಗ ಏಕಾಂಗಿಯಾಗಿ ಧರ್ಮಸ್ಥಳಕ್ಕೆ ತೆರಳಲು ಸಜ್ಜಾಗಿದ್ದಾರೆ.

ವಿಧಾನಪರಿಷತ್ ಚುನಾವಣೆಯಲ್ಲಿ ನಡೆದಿದೆ ಎನ್ನಲಾದ ಅಡ್ಡಮತದಾನದ ಸತ್ಯಾಸತ್ಯತೆ ತಿಳಿಯಲು ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಸಿ, ಶಾಸಕರಿಂದ ಆಣೆ-ಪ್ರಮಾಣ ಮಾಡಿಸಲು ಮೊದಲು ಯೋಜಿಸಲಾಗಿತ್ತು. ಧರ್ಮಸ್ಥಳದಲ್ಲಿ ಆಣೆ-ಪ್ರಮಾಣ ಮಾಡಬೇಕು ಎಂದು ವಿಜಯೇಂದ್ರ ಹೇಳಿದ್ದರು. ಆದರೆ, ಪವಿತ್ರ ಕ್ಷೇತ್ರವಾದ ಧರ್ಮಸ್ಥಳದಲ್ಲಿ ಇಂತಹ ರಾಜಕೀಯ ಸಭೆ ಹಾಗೂ ಆಣೆ-ಪ್ರಮಾಣದ ರಾಜಕಾರಣ ಮಾಡುವುದಕ್ಕೆ ಪಕ್ಷದ ಹಿರಿಯ ನಾಯಕರಿಂದಲೇ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಇದರಿಂದಾಗಿ ಧರ್ಮಸ್ಥಳದಲ್ಲಿ ಶಾಸಕಾಂಪ್ಗ ಪಕ್ಷದ ಸಭೆ ಹಾಗೂ ಆಣೆ-ಪ್ರಮಾಣ ನಿರ್ಧಾರವನ್ನು ಕೈಬಿಡಲಾಗಿತ್ತು.

ಧರ್ಮಸ್ಥಳದಲ್ಲಿ ಶಾಸಕಾಂಗ ಪಕ್ಷದ ಸಭೆ ಗೊಂದಲಗಳಿಂದಾಗಿ ಈ ಬೆಳವಣಿಗೆಗಳ ಬಗ್ಗೆ ವಿಜಯೇಂದ್ರ ಅವರನ್ನೇ ಪಕ್ಷದ ಕೆಲ ನಾಯಕರು ದೂಷಿಸಲು ಆರಂಭಿಸಿದ್ದರು ಎನ್ನಲಾಗಿದೆ. ಇದರಿಂದ ಬೇಸರಗೊಂಡಿರುವ ವಿಜಯೇಂದ್ರ ಏಕಾಂಗಿಯಾಗಿ ಧರ್ಮಸ್ಥಳಕ್ಕೆ ತೆರಳಲು ನಿರ್ಧರಿಸಿದ್ದಾರೆ.

ದೆಹಲಿ ಪ್ರವಾಸದಲ್ಲಿರುವ ವಿಜಯೇಂದ್ರ ಇಂದು ರಾತ್ರಿ ನೇರವಾಗಿ ಮಂಗಳೂರಿಗೆ ಬರಲಿದ್ದು, ಅಲ್ಲಿಂದ ಧರ್ಮಸ್ಥಳಕ್ಕೆ ತೆರಳಲಿದ್ದಾರೆ. ನಾಳೆ ಬೆಳಗ್ಗೆ 7 ರಿಂದ 8 ಗಂಟೆಯ ಅವಧಿಯಲ್ಲಿ ಅವರು ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆಯಲಿದ್ದಾರೆ ಎಂದು ತಿಳಿದುಬಂದಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?