LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಂಕಷ್ಟದಲ್ಲಿರುವ ಮಹಿಳೆಯರಿಗೆ ಆಸರೆಯಾದ ‘ಸಖಿ ಒನ್ ಸ್ಟಾಪ್ ಸೆಂಟರ್’

ಮಹಿಳೆಯರ ಸುರಕ್ಷತೆ, ಗೌರವ ಮತ್ತು ಸಬಲೀಕರಣವನ್ನು ಉತ್ತೇಜಿಸುವ ಉದ್ದೇಶದಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ‘ಸಖಿ ಒನ್ ಸ್ಟಾಪ್ ಸೆಂಟರ್’ ಸಂಕಷ್ಟದಲ್ಲಿರುವ ಮಹಿಳೆಯರಿಗೆ ಸಮಗ್ರ ಬೆಂಬಲ ಮತ್ತು ರಕ್ಷಣಾ ಸೇವೆಗಳನ್ನು ಒದಗಿಸುವ ಮೂಲಕ ಪ್ರಮುಖ ಆಸರೆಯಾಗಿದೆ.

ಮಹಿಳೆಯರು ಯಾವುದೇ ರೀತಿಯ ದೈಹಿಕ, ಮಾನಸಿಕ, ಭಾವನಾತ್ಮಕ ಹಾಗೂ ಲೈಂಗಿಕ ಹಿಂಸೆಗೆ ಒಳಗಾದ ಸಂದರ್ಭದಲ್ಲಿ ತಕ್ಷಣದ ನೆರವು ಪಡೆಯಲು ಸಖಿ ಕೇಂದ್ರವು ಪ್ರಮುಖ ವೇದಿಕೆಯಾಗಿದೆ. ‘ನೊಂದ ಮಹಿಳೆ, ಹಲವು ಸಮಸ್ಯೆ, ಒಂದು ಸೂರು, ಹಲವು ಸೇವೆ’ ಎಂಬ ಧ್ಯೇಯದೊಂದಿಗೆ ಈ ಕೇಂದ್ರವು ಕಾರ್ಯನಿರ್ವಹಿಸುತ್ತಿದೆ.

*ಒಂದೇ ಸೂರಿನಡಿ ವಿವಿಧ ಸೇವೆಗಳು:*

ಸಖಿ ಕೇಂದ್ರದಲ್ಲಿ ಸಂಕಷ್ಟಕ್ಕೆ ಒಳಗಾದ ಮಹಿಳೆಯರಿಗೆ ಒಂದೇ ಸ್ಥಳದಲ್ಲಿ ಅಗತ್ಯವಿರುವ ಎಲ್ಲಾ ನೆರವುಗಳನ್ನು ಉಚಿತವಾಗಿ ನೀಡಲಾಗುತ್ತಿದೆ. ಅದರಲ್ಲಿ ಉಚಿತ ಆಪ್ತಸಮಾಲೋಚನೆ ಮತ್ತು ಕಾನೂನು ಸಲಹೆ, ತುರ್ತು ವೈದ್ಯಕೀಯ ನೆರವು ಮತ್ತು ಪೊಲೀಸ್ ಇಲಾಖೆಯೊಂದಿಗೆ ಸಮನ್ವಯ, ತಾತ್ಕಾಲಿಕ ಆಶ್ರಯ ಹಾಗೂ ನ್ಯಾಯಾಲಯದ ಪ್ರಕ್ರಿಯೆಗಳಿಗೆ ಸೂಕ್ತ ಮಾರ್ಗದರ್ಶನ ಪ್ರಮುಖವಾಗಿವೆ.

ಮಹಿಳೆಯರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ, ಅವರ ಆತ್ಮಸ್ಥೆöÊರ್ಯವನ್ನು ಹೆಚ್ಚಿಸಿ ಸಮಾಜದ ಮುಖ್ಯವಾಹಿನಿಗೆ ಮರಳಲು ಅಗತ್ಯ ಸಹಕಾರವನ್ನು ಕೇಂದ್ರವು ನೀಡುತ್ತಾ ಬಂದಿದೆ.

*ಇಲಾಖೆಗಳ ಸಮನ್ವಯದೊಂದಿಗೆ ರಕ್ಷಣೆ:*

ಕೌಟುಂಬಿಕ ಹಿಂಸೆ, ವರದಕ್ಷಿಣೆ ಕಿರುಕುಳ, ಲೈಂಗಿಕ ದೌರ್ಜನ್ಯ, ಬಾಲ್ಯ ವಿವಾಹ, ಮಾನವ ಕಳ್ಳಸಾಗಣೆ ಹಾಗೂ ಇತರೆ ಮಹಿಳಾ ಮತ್ತು ಮಕ್ಕಳ ಹಕ್ಕುಗಳಿಗೆ ಸಂಬAಧಿಸಿದ ಪ್ರಕರಣಗಳಲ್ಲಿ ಕೇಂದ್ರವು ನಿರಂತರವಾಗಿ ಕಾರ್ಯನಿರ್ವಹಿಸುತ್ತಿದೆ. ಪೊಲೀಸ್ ಅಧಿಕಾರಿಗಳು, ಆರೋಗ್ಯ ಇಲಾಖೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸಹಯೋಗದೊಂದಿಗೆ ಸಂತ್ರಸ್ತರಿಗೆ ಸೂಕ್ತ ರಕ್ಷಣೆ ಮತ್ತು ನ್ಯಾಯ ದೊರಕಿಸಿಕೊಡಲಾಗುತ್ತಿದೆ.

*ವ್ಯಾಪಕ ಜಾಗೃತಿ ಕಾರ್ಯಕ್ರಮಗಳು

ಕೇವಲ ನೆರವು ನೀಡುವುದಷ್ಟೇ ಅಲ್ಲದೆ, ಸಾರ್ವಜನಿಕ ಸ್ಥಳಗಳು, ಗ್ರಾಮ ಪಂಚಾಯಿತಿಗಳು, ಶಾಲೆ-ಕಾಲೇಜುಗಳು ಹಾಗೂ ಕೈಗಾರಿಕಾ ಸಂಸ್ಥೆಗಳಲ್ಲಿ ಮಹಿಳಾ ಸುರಕ್ಷತೆ, ಲಿಂಗ ಸಮಾನತೆ, ಸೈಬರ್ ಸುರಕ್ಷತೆ, ಬಾಲ್ಯ ವಿವಾಹ ತಡೆ, ಪೋಕ್ಸೋ ಕಾಯ್ದೆ ಮತ್ತು ಮಹಿಳಾ ಸಬಲೀಕರಣದ ಕುರಿತು ನಿರಂತರವಾಗಿ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ.

ಸಖಿ ಕೇಂದ್ರವು ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 3,667 ಫಲಾನುಭವಿಗಳಿಗೆ ಯಶಸ್ವಿಯಾಗಿ ಸೇವೆಗಳನ್ನು ಒದಗಿಸಿದೆ.

*ಒದಗಿಸಲಾದ ಸೇವೆಗಳು ಮತ್ತು ಫಲಾನುಭವಿಗಳ ಸಂಖ್ಯೆ:*

ಮಾನಸಿಕ-ಸಾಮಾಜಿಕ ಆಪ್ತಸಮಾಲೋಚನೆ: 998

ಕಾನೂನು ಸಮಾಲೋಚನೆ: 952

ಪೊಲೀಸ್ ಸಹಾಯ: 730

ವೈದ್ಯಕೀಯ ನೆರವು: 704

ತಾತ್ಕಾಲಿಕ ಆಶ್ರಯ ಸೌಲಭ್ಯ: 259

ಯಾವುದೇ ಮಹಿಳೆ ಹಿಂಸೆ, ಕಿರುಕುಳ ಅಥವಾ ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸುತ್ತಿದ್ದರೆ, ಅದನ್ನು ಸಹಿಸಿಕೊಳ್ಳದೆ ಧೈರ್ಯದಿಂದ ಮುಂದೆ ಬಂದು ಸಖಿ ಕೇಂದ್ರದ ನೆರವು ಪಡೆಯಬಹುದು. ಇಲ್ಲಿ ನೀಡಲಾಗುವ ಎಲ್ಲಾ ಸೇವೆಗಳು ಸಂಪೂರ್ಣ ಉಚಿತವಾಗಿದ್ದು, ಸಂತ್ರಸ್ತರ ಗೌಪ್ಯತೆಯನ್ನು ಕಟ್ಟುನಿಟ್ಟಾಗಿ ಕಾಪಾಡಲಾಗುತ್ತದೆ.

*ಸಂಪರ್ಕಿಸಬೇಕಾದ ವಿಳಾಸ:*

ಸಖಿ ಒನ್ ಸ್ಟಾಪ್ ಸೆಂಟರ್, ಶಾಂತಿಧಾಮ ಆವರಣ, ಕಂಟೊನ್ಮೆಂಟ್, ಬಳ್ಳಾರಿ. ಮಾಹಿತಿಗಾಗಿ ಉಚಿತ ಮಹಿಳಾ ಸಹಾಯವಾಣಿ ಸಂಖ್ಯೆ 181 ಗೆ ಕರೆ ಮಾಡಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಮಕೃಷ್ಣ ನಾಯಕ.ಎಂ ಅವರು ತಿಳಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
ಇತಿಹಾಸ ಸೃಷ್ಟಿಸಿದ ಐರ್ಲೆಂಡ್: ಭಾರತಕ್ಕೆ ಟಿ20 ಸರಣಿ ಸೋಲಿನ ಶಾಕ್BREAKING: ಬೆಂಗಳೂರಲ್ಲಿ ಬೆಚ್ಚಿಬೀಳಿಸುವ ಘಟನೆ: ಮದುವೆ ನಿರಾಕರಿಸಿದ್ದಕ್ಕೆ ಕುತ್ತಿಗೆಗೆ ಚಾಕುವಿನಿಂದ ಇರಿದು ಪ್ರಿಯಕರನಿಂದಲೇ ಪ್ರೇಯಸಿ ಕೊಲೆರಾಜ್ಯದಲ್ಲಿ ಜು. 2 ರವರೆಗೆ ಮಳೆ ಮುನ್ಸೂಚನೆ: ಮಲೆನಾಡು, ಕರಾವಳಿಗೆ ಆರೆಂಜ್ ಅಲರ್ಟ್ರಾಜ್ಯದಲ್ಲಿ ನಾಳೆಯಿಂದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಆರಂಭ2028ಕ್ಕೆ ಕರ್ನಾಟಕದಲ್ಲಿ, 2029ಕ್ಕೆ ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ನಿಶ್ಚಿತ: ಸಿಎಂ ಡಿ.ಕೆ.ಶಿವಕುಮಾರ್ ವಿಶ್ವಾಸಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ ವಿಪಕ್ಷದವರ ಹತಾಶೆಯ ಪರಮಾವಧಿ: ಸಿಎಂ ಡಿ.ಕೆ. ಶಿವಕುಮಾರ್BREAKING: ರಾಸ್ ತನುರಾ ಬಳಿ ಸೌದಿ ಅರೇಬಿಯಾದ ಇಂಧನ ದೈತ್ಯ ‘ಸೌದಿ ಅರಾಮ್ಕೊ’ ಹೆಲಿಕಾಪ್ಟರ್ ಪತನ: 14 ಮಂದಿ ಸಾವುBREAKING NEWS: ಫ್ರಾನ್ಸ್ ನಲ್ಲಿ ನಾಗರಿಕ ವಿಮಾನ ಪತನ: 11 ಜನ ಸಾವು‘ಮಿಷನ್ ಇಂದ್ರಧನುಷ್’ ಯೋಜನೆಯಡಿ 7 ಪ್ರಮುಖ ರೋಗಗಳ ವಿರುದ್ಧದ ಲಸಿಕೆಗಳನ್ನು ಕಾಲಕಾಲಕ್ಕೆ ಮಕ್ಕಳಿಗೆ ಹಾಕಿಸಿನನ್ನ ಹೋರಾಟ ಡಿ.ಕೆ.ಶಿವಕುಮಾರ್​ ವಿರುದ್ಧ ಅಲ್ಲ; ರೈತರ ನಡುವೆ ಬಂದು ಚರ್ಚೆ ಮಾಡುವುದಕ್ಕೆ ನಾನು ಈಗಲೂ ಸಿದ್ಧ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ