LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು

ಕೊಪ್ಪಳ: ಕೇಂದ್ರ ಸರ್ಕಾರವು ಈಗಾಗಲೇ ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶದ ನಡುವಿನ ‘ಕೆನ್-ಬೆತ್ವಾ’ ಯೋಜನೆ ಹಾಗೂ ರಾಜಸ್ಥಾನ ಮತ್ತು ಮಧ್ಯಪ್ರದೇಶದ ನಡುವಿನ ‘ಪಾರ್ವತಿ-ಕಾಳಿಸಿಂಧು-ಚಂಬಲ್’ ನದಿ ಜೋಡಣೆ ಯೋಜನೆಗಳನ್ನು ಯಶಸ್ವಿಯಾಗಿ ಕೈಗೆತ್ತಿಕೊಂಡಿದೆ. ಇದೇ ಮಾದರಿಯಲ್ಲಿ, ದಕ್ಷಿಣ ಭಾರತದ ಪ್ರಮುಖ ನದಿಗಳಾದ ಗೋದಾವರಿ ಮತ್ತು ಕಾವೇರಿ ನದಿಗಳ ಜೋಡಣೆ ಯೋಜನೆಯನ್ನು ಕೇಂದ್ರ ಸರ್ಕಾರವು ‘ರಾಷ್ಟ್ರೀಯ ಯೋಜನೆ’ ಯಾಗಿ ಪರಿಗಣಿಸಿ ಅನುಷ್ಠಾನಕ್ಕೆ ತರಬೇಕು ಎಂದು ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದರು.

ಗುರುವಾರದಂದು ಕರ್ನಾಟಕ ಸರ್ಕಾರದ ಜಲಸಂಪನ್ಮೂಲ ಇಲಾಖೆ ಹಾಗೂ ತುಂಗಭದ್ರಾ ಮಂಡಳಿಯ ಸಹಯೋಗದಲ್ಲಿ ಕೊಪ್ಪಳ ಜಿಲ್ಲೆಯ ಮುನಿರಾಬಾದ್‌ನ ಸರ್ಕಾರಿ ಹೈಸ್ಕೂಲ್ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ತುಂಗಭದ್ರಾ ಜಲಾಶಯಕ್ಕೆ ನೂತನವಾಗಿ ಅಳವಡಿಸಲಾದ 33 ಸ್ಪಿಲ್‌ವೇ ಗೇಟುಗಳ ಲೋಕಾರ್ಪಣೆ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ದೇಶದ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ನದಿಗಳ ಜೋಡಣೆ ಅತ್ಯಂತ ತುರ್ತಾಗಿ ಆಗಬೇಕಿದೆ. ನದಿ ಜೋಡಣೆ ಪ್ರಕ್ರಿಯೆಯಲ್ಲಿ ಯಾವುದೇ ರಾಜ್ಯಕ್ಕೆ ಅನ್ಯಾಯವಾಗಬಾರದು ಎಂದು ಸ್ಪಷ್ಟಪಡಿಸಿದ ನಾಯ್ಡು ಅವರು, ಈ ಯೋಜನೆಯನ್ನು ಜಾರಿಗೊಳಿಸುವಾಗ ಕರ್ನಾಟಕ, ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳ ಹಕ್ಕುಗಳನ್ನು ಸಂಪೂರ್ಣವಾಗಿ ರಕ್ಷಿಸಬೇಕು ಎಂದು ಒತ್ತಿ ಹೇಳಿದರು. ಈ ಮೂರೂ ರಾಜ್ಯಗಳ ಹಕ್ಕುಗಳಿಗೆ ಧಕ್ಕೆ ಬಾರದಂತೆ ಸೂಕ್ತ ಕ್ರಿಯಾ ಯೋಜನೆಯನ್ನು ರೂಪಿಸುವುದರ ಜೊತೆಗೆ, ಅಗತ್ಯ ಬಿದ್ದರೆ ತಮಿಳುನಾಡಿಗೂ ನೀರನ್ನು ಕೊಂಡೊಯ್ಯುವ ವ್ಯವಸ್ಥೆ ಮಾಡಬೇಕು ಎಂದರು.

ಈ ಹಿಂದೆ 1983 ರಲ್ಲಿ ಎನ್.ಟಿ. ರಾಮರಾವ್ ಅವರ ನಾಯಕತ್ವದಲ್ಲಿ ಅವಿಭಜಿತ ಆಂಧ್ರಪ್ರದೇಶ, ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳು ಒಟ್ಟಾಗಿ ಸೇರಿ ಚೆನೈನ ಕುಡಿಯುವ ನೀರಿಗಾಗಿ 15 ಟಿಎಂಸಿ ನೀರನ್ನು ಒದಗಿಸಿದ್ದ ಐತಿಹಾಸಿಕ ಒಕ್ಕೂಟ ವ್ಯವಸ್ಥೆಯ ಉದಾಹರಣೆಯನ್ನು ಅವರು ಈ ಸಂದರ್ಭದಲ್ಲಿ ಸ್ಮರಿಸಿದರು.

“ಪ್ರಸ್ತುತ ದೇಶದಲ್ಲಿ ಒಂದು ಕಡೆ ಭೀಕರ ಪ್ರವಾಹ ಬಂದರೆ, ಮತ್ತೊಂದು ಕಡೆ ತೀವ್ರ ಬರಗಾಲವಿರುತ್ತದೆ. ಈ ವರ್ಷ ‘ಎಲ್ ನಿನೋ’ ಪ್ರಭಾವದಿಂದಾಗಿ ತುಂಗಭದ್ರಾ ಹಾಗೂ ಆಲಮಟ್ಟಿ ಜಲಾಶಯಗಳಿಗೂ ನಿರೀಕ್ಷಿತ ಪ್ರಮಾಣದಲ್ಲಿ ನೀರಿನ ಒಳಹರಿವು ಬಂದಿಲ್ಲ. ಇಂತಹ ಪರಿಸ್ಥಿತಿಯಲ್ಲಿ ದೇಶದ ಎಲ್ಲಾ ನದಿಗಳನ್ನು ಜೋಡಿಸುವುದೊಂದೇ ಇರುವ ಏಕೈಕ ಮಾರ್ಗವಾಗಿದೆ. ಹೆಚ್ಚುವರಿ ನೀರಿರುವ ನದಿಗಳಿಂದ ಕೊರತೆಯಿರುವ ನದಿಗಳಿಗೆ ನೀರನ್ನು ಹರಿಸುವ ಮೂಲಕ ಬರಗಾಲವನ್ನು ಸಮರ್ಥವಾಗಿ ಎದುರಿಸಬಹುದು. ಇದರಿಂದ ರಾಜ್ಯಗಳ ನಡುವಿನ, ಜಿಲ್ಲೆಗಳ ನಡುವಿನ ಹಾಗೂ ರೈತರ ನಡುವಿನ ನೀರಿನ ಸಂಘರ್ಷಗಳನ್ನು ಸಂಪೂರ್ಣವಾಗಿ ತಡೆಯಬಹುದು” ಎಂದು ಚಂದ್ರಬಾಬು ನಾಯ್ಡು ಅಭಿಪ್ರಾಯಪಟ್ಟರು.

ನೂತನ ಗೇಟ್‌ ಗಳ ಅಳವಡಿಕೆಯಿಂದ ತಲೆಮಾರುಗಳ ಸಮಸ್ಯೆಗೆ ಮುಕ್ತಿ: ತೆಲಂಗಾಣ ಸಿಎಂ ಎ.ರೇವಂತ್ ರೆಡ್ಡಿ

ಬಳ್ಳಾರಿ, ಅನಂತಪುರ, ಕರ್ನೂಲ್ ಹಾಗೂ ಪಾಲಮೂರು ಜಿಲ್ಲೆಗಳ ವಲಸೆ ಸಮಸ್ಯೆಗಳು ಮತ್ತು ರೈತರ ಸಂಕಷ್ಟಗಳು ಸರ್ಕಾರಗಳಿಗೆ ಸಂಪೂರ್ಣ ಅರಿವಿದೆ. ಜಲಾನಯನ ಪ್ರದೇಶದ ಮೂರು ತಲೆಮಾರುಗಳ ಸಮಸ್ಯೆಗೆ ಈ 33 ಗೇಟುಗಳ ನೂತನ ಅಳವಡಿಕೆ ಮತ್ತು ಆಧುನೀಕರಣವು ಮುಕ್ತಿ ನೀಡಲಿದೆ. ಲಕ್ಷಾಂತರ ರೈತರ ಕಣ್ಣೀರು ಒರೆಸುವ ನಿಟ್ಟಿನಲ್ಲಿ ಇದೊಂದು ದೊಡ್ಡ ಪರಿಹಾರವಾಗಲಿದೆ ಎಂದು ತೆಲಂಗಾಣ ಮುಖ್ಯಮಂತ್ರಿ ಎ.ರೇವಂತ್ ರೆಡ್ಡಿ ಹೇಳಿದರು.

ನಮ್ಮ ಭಾಗದಲ್ಲಿ ಕುಡಿಯುವ ಹಾಗೂ ಸಾಗುವಳಿ ನೀರಿಗಾಗಿ ಜನರು ಜಿಲ್ಲೆ, ರಾಜ್ಯ ದಾಟಿ ವಲಸೆ ಹೋಗುವ ಪರಿಸ್ಥಿತಿ ಇದೆ. ಆದರೆ, ನಮಗೆ ಸಿಗಬೇಕಾದ ನೀರು ಸಮುದ್ರ ಪಾಲಾಗುತ್ತಿದೆ. ಡಿ.ಕೆ. ಶಿವಕುಮಾರ್ ಅವರ ಆಹ್ವಾನದ ಮೇರೆಗೆ ಕೇಂದ್ರ ಸಚಿವ ಸಿ.ಆರ್. ಪಾಟೀಲ್, ಆಂಧ್ರಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು ಮತ್ತು ನಾನು ಸೇರಿದಂತೆ ಮೂರು ರಾಜ್ಯಗಳ ಪ್ರತಿನಿಧಿಗಳು ಇಲ್ಲಿ ಒಟ್ಟಾಗಿದ್ದೇವೆ. ರಾಜಕೀಯವನ್ನು ಬದಿಗಿಟ್ಟು, ಈ ಭಾಗದ ರೈತಾಪಿ ವರ್ಗದ ಹಿತದೃಷ್ಟಿಯಿಂದ ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡಲು ನಿರ್ಧರಿಸಿದ್ದೇವೆ. ಈ ದಿನ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆಯುವಂತಹದ್ದು” ಎಂದು ಹೇಳಿದರು.

ಗದ್ವಾಲ್, ಆಲಂಪುರ ಮತ್ತು ಪಾಲಮೂರು ಜಿಲ್ಲೆಗಳ ವ್ಯಾಪ್ತಿಯ ರಾಜೋಲಿಬಂಡಾ ಡೈವರ್ಷನ್ ಸ್ಕೀಮ್ (ಖಆS) ಅಡಿಯಲ್ಲಿ ನಿಗದಿಯಾಗಿರುವ 15.9 ಟಿಎಂಸಿ ನೀರಿನಲ್ಲಿ ಪ್ರಸ್ತುತ ರೈತರು ಕೇವಲ 5 ರಿಂದ 6 ಟಿಎಂಸಿ ನೀರನ್ನು ಮಾತ್ರ ಬಳಸುತ್ತಿದ್ದಾರೆ. ತುಂಗಭದ್ರಾದಲ್ಲಿ ಹೂಳು ತುಂಬಿರುವುದು ಮತ್ತು ನೀರಿನ ಸುಗಮ ಹರಿವಿಗೆ ಇರುವ ಅಡ್ಡಿ ಆತಂಕಗಳಿಂದಾಗಿ ಇನ್ನುಳಿದ 10 ಟಿಎಂಸಿ ನೀರು ಲಭ್ಯವಾಗುತ್ತಿಲ್ಲ. ಈ ಸಮಸ್ಯೆಯನ್ನು ಬಗೆಹರಿಸಿ ಲಕ್ಷಾಂತರ ರೈತರಿಗೆ ನ್ಯಾಯ ಒದಗಿಸಬೇಕೆಂದು ಕೇಂದ್ರ ಸಚಿವ ಸಿ.ಆರ್. ಪಾಟೀಲ್ ಮತ್ತು ಚಂದ್ರಬಾಬು ನಾಯ್ಡು ಅವರ ಗಮನಕ್ಕೆ ತಂದಿರುವುದಾಗಿ ರೇವಂತ್ ರೆಡ್ಡಿ ತಿಳಿಸಿದರು.

ನಮಗೆ ಕೇವಲ ರಾಜಕೀಯದ ಪಂಚಾಯಿತಿ ಬೇಡ, ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಬೇಕು. ರೈತರ ಆಕಾಂಕ್ಷೆಗಳನ್ನು ಈಡೇರಿಸಲು ತೆಲಂಗಾಣ ಸರ್ಕಾರ ಬದ್ಧವಾಗಿದೆ. ಕೃಷ್ಣಾ, ಗೋದಾವರಿ ಹಾಗೂ ತುಂಗಭದ್ರಾ ನದಿ ನೀರು ಹಂಚಿಕೆಗೆ ಸಂಬಂಧಿಸಿದ ಅಂತರರಾಜ್ಯ ಜಲ ವಿವಾದಗಳಿಗೆ ಶಾಶ್ವತ ಪರಿಹಾರವನ್ನು ಒದಗಿಸಲಿದೆ ಎಂದು ಮುಖ್ಯಮಂತ್ರಿ ಎ.ರೇವಂತ್ ರೆಡ್ಡಿ ಹೇಳಿದರು.

ಹಿಂದಿನ ಕಾಲದಲ್ಲಿ ರಾಜರು ತಮ್ಮ ರಾಜ್ಯ ವಿಸ್ತರಣೆಗಾಗಿ ಕತ್ತಿ ಹಿಡಿದು ಹೋರಾಡುತ್ತಿದ್ದ ಸಂದರ್ಭದಲ್ಲೂ, ಈ ಭಾಗದ ರೈತರ ಕಲ್ಯಾಣಕ್ಕಾಗಿ ಮೈಸೂರು ಮಹಾರಾಜರು ಹಾಗೂ ಹೈದರಾಬಾದ್ ನಿಜಾಮರು ಜೊತೆಯಾಗಿ ತುಂಗಭದ್ರಾ ಅಣೆಕಟ್ಟನ್ನು ನಿರ್ಮಿಸಿದ್ದರು. ಅಂದು ರಾಜರೇ ರೈತರಿಗಾಗಿ ಮುಂದೆ ಬಂದಿರುವಾಗ, ಇಂದು ಪ್ರಜಾಪ್ರತಿನಿಧಿಗಳಾದ ನಾವು ರೈತರ ಹಿತರಕ್ಷಣೆಗಾಗಿ ಒಂದು ಹೆಜ್ಜೆ ಮುಂದೆ ಇಡುವುದು ನಮ್ಮ ಕರ್ತವ್ಯ ಮತ್ತು ಜವಾಬ್ದಾರಿಯಾಗಿದೆ ಎಂದು ಪ್ರತಿಪಾದಿಸಿದರು.

ಕೇಂದ್ರ ಸಚಿವ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್ ಅವರನ್ನು ಉದ್ದೇಶಿಸಿ ಮಾತನಾಡಿದ ಅವರು, ಇದು ಕೇವಲ 8 ವರ್ಷಗಳದ್ದಲ್ಲ, ಬದಲಿಗೆ 100 ವರ್ಷಗಳ ಹಳೆಯ ಸಮಸ್ಯೆಯಾಗಿದೆ. ಕೃಷ್ಣಾ, ಗೋದಾವರಿ ಮತ್ತು ತುಂಗಭದ್ರಾ ನದಿ ನೀರಿನ ಹಂಚಿಕೆಗಾಗಿ ದಶಕಗಳಿಂದ ಹೋರಾಟ ನಡೆಯುತ್ತಿದೆ. ಆರ್.ಡಿ.ಎಸ್ ಯೋಜನೆಯಲ್ಲಿ ತೆಲಂಗಾಣ ಮತ್ತು ಪಾಲಮೂರು ಭಾಗದ ನೀರಿನ ಸಮಸ್ಯೆಗಳನ್ನು ಬಗೆಹರಿಸಲು ಕರ್ನಾಟಕ ಮತ್ತು ಆಂಧ್ರಪ್ರದೇಶ ಮುಖ್ಯಮಂತ್ರಿಗಳೊಂದಿಗೆ ತಾವು ಚರ್ಚಿಸಲು ಸಿದ್ಧರಿರುವುದಾಗಿ ತಿಳಿಸಿದರು.

ಕೇಂದ್ರ ಸಚಿವರು ಈ ವಿಷಯದಲ್ಲಿ ಮಧ್ಯಸ್ಥಿಕೆ ವಹಿಸಿ, ನ್ಯಾಯಾಧೀಶರಂತೆ ಕಾರ್ಯನಿರ್ವಹಿಸುವ ಮೂಲಕ ಈ ಜಲ ವಿವಾದಕ್ಕೆ ಸೂಕ್ತ ಪರಿಹಾರ ಕಲ್ಪಿಸಬೇಕು ಎಂದು ಮನವಿ ಮಾಡಿದರು. ಈ ಐತಿಹಾಸಿಕ ಹೆಜ್ಜೆಯು ದೆಹಲಿಯವರೆಗೂ ಧ್ವನಿಸಲಿದೆ ಹಾಗೂ ದೇಶದಾದ್ಯಂತ ಇರುವ ವಿವಿಧ ರಾಜ್ಯಗಳ ನಡುವಿನ ನೀರಿನ ವಿವಾದಗಳಿಗೆ ಮಾದರಿ ಪರಿಹಾರವಾಗಿ ಹೊರಹೊಮ್ಮಲಿದೆ ಎಂದು ಮುಖ್ಯಮಂತ್ರಿ ಎ.ರೇವಂತ್ ರೆಡ್ಡಿ ಆಶಯ ವ್ಯಕ್ತಪಡಿಸಿದರು.

ಈ ಸಂದರ್ಭ ಕಾರ್ಯಕ್ರಮದಲ್ಲಿ ಕೇಂದ್ರ ಜಲಶಕ್ತಿ ಸಚಿವರಾದ ಸಿ.ಆರ್. ಪಾಟೀಲ್, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವರಿದ್ದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?