LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅಡ್ಡಮತದಾನ ಮಾಡಿದವರ ವಿರುದ್ಧ ಬಿ.ವೈ.ವಿಜಯೇಂದ್ರ ಕಿಡಿ: ತನ್ನ ವಿರುದ್ಧ ಆರೋಪ, ಅಪಪ್ರಾಚಾರಕ್ಕೂ ಧರ್ಮಸ್ಥಳದಲ್ಲಿ ಸ್ಪಷ್ಟನೆ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ

ಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ತೆರಳಿದ್ದು, ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು, ಬಳಿಕ ಧರ್ಮಾಧಿಕಾರಿ ಡಾ.ವಿರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು.

ಧರ್ಮಸ್ಥಳದಲ್ಲಿ ಸುದ್ದಿಗೋಷ್ಠಿ ನಡೆಸಿದ ವಿಜಯೇಂದ್ರ, ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಕೆಲ ಶಾಸಕರಿಂದ ಅಡ್ಡಮತದಾನವಾಗಿದೆ. ಇದು ನನಗೆ ಹಾಗೂ ಲಕ್ಷಾಂತರ ಕಾರ್ಯಕರ್ತರಿಗೆ ನೋವುಂಟು ಮಾಡಿದೆ. ಅಡ್ಡಮತದಾನವಾಗಿದೆ ಎಂಬುದು ಗೊತಾದ ಮರುದಿನ ನನ್ನ ಮನಸ್ಸಿಗೆ ಆಘಾತವಾಗಿತ್ತು ಎಂದು ತಿಳಿಸಿದ್ದಾರೆ.

ಧರ್ಮಸ್ಥಳದಲ್ಲಿ ಸತ್ಯಾಅಸತ್ಯತೆ ತಿಳಿಯಲಿ ಎಂದು ಆಣೆ ವಿಚಾರ ಹೇಳಿದ್ದೆ. ನಾನು ಭಾವನಾತ್ಮಕ ವ್ಯಕ್ತಿ. ಮನಸ್ಸಿನಲ್ಲಿ ಇದ್ದುದನ್ನು ಹೇಳಿದ್ದೆ. ಆದರೆ ಪಕ್ಷದ ಹಲವರು ಇದು ಬೇಡ, ನಮ್ಮಲ್ಲೇ ಬಗೆಹರಿಸಿಕೊಳ್ಳೋಣ ಎಂದರು. ನಾನು ನಂಬುವ ಧರ್ಮಸ್ಥಳಕ್ಕೆ ಬಂದು ಇಂದು ದರ್ಶನ್ ಅಪಡೆದಿದ್ದೇನೆ ಎಂದರು.

ಇದೇ ವೇಳೆ ನನ್ನ ವಿರುದ್ಧ ಅಪಪ್ರಾಚರಗಳನ್ನು ಮಾಡಲಾಗುತ್ತಿದೆ. ಅಡ್ಡ ಮತದಾನಕ್ಕೆ ನಾನೇ ನಾನೇ ಅವಕಾಶ ಮಾಡಿಕೊಟ್ಟೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗಳಾಗುತ್ತಿವೆ. ನಾನು ಪಕ್ಷದ ಅಧ್ಯಕ್ಷನಾಗಿ ಅಂತಹ ಕೀಳು ಮಟ್ಟದ ಕೆಲಸ ಮಾಡಲ್ಲ ಎಂದು ಹೇಳಿದರು.

ಡಿ.ಕೆ.ಶಿವಕುಮಾರ್ ಜೊತೆ ನನಗೆ ರಾಜಕೀಯ ಹಾಗೂ ವ್ಯಾವಹಾರಿಕ ಸಂಬಂಧವಿದೆ ಎಂದು ನಮ್ಮ ಪಕ್ಷದವರೇ ಹಲವು ಬಾರಿ ಆರೋಪಿಸಿದ್ದಾರೆ. ಆದ್ದರಿಂದ ಧರ್ಮಸ್ಥಳದಲ್ಲಿ ನಿಂತು ನಾನು ಹೇಳುತ್ತಿದ್ದೇನೆ. ನನಗೂ ಡಿ.ಕೆ.ಶಿವಕುಮಾರ್ ಅವರಿಗೂ ಯಾವುದೇ ರಾಜಕೀಯ ವ್ಯಾವಹಾರಿಕ ಸಂಬಂಧವಿಲ್ಲ. ಆತ್ಮೀಯತೆಯೂ ಇಲ್ಲ. ಕೆಪಿಸಿಸಿ ಅಧ್ಯಕ್ಷ, ಮುಖ್ಯಮಂತ್ರಿ ಅವರಿಗೆ ಎಷ್ಟು ಗೌರವ ಕೊಡಬೇಕೋ ಅಷ್ಟು ಕೊಡುತ್ತಿದ್ದೇನೆ ಎಂದು ತಿಳಿಸಿದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಹಬ್ಬದ ಸಂದರ್ಭದಲ್ಲೆ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ : ರಾಜ್ಯದಲ್ಲಿ ಗಗನಕ್ಕೇರಿದ ಅಕ್ಕಿ, ತೊಗರಿಬೇಳೆ ಬೆಲೆ!GOOD NEWS : 'KSRTC' ಯಿಂದ ದಸರಾ ಸಂಭ್ರಮಕ್ಕೆ ಸ್ಪೆಷಲ್ ಗಿಫ್ಟ್: 3,000ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಸಂಚಾರ!ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!