LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನಾಳೆ ಕುಮಾರಸ್ವಾಮಿ ಭೈರಮಂಗಲಕ್ಕೆ ಹೋಗ್ತಾರೆ; ಸಿಎಂ ಡಿ.ಕೆ.ಶಿವಕುಮಾರ್ ಕೂಡ ಬಂದು ರೈತರೊಂದಿಗೆ ಚರ್ಚಿಸಲಿ: ನಿಖಿಲ್ ಕುಮಾರಸ್ವಾಮಿ

ಬೆಂಗಳೂರು: ಬಿಡದಿ ಟೌನ್ ಶಿಪ್ ನಿರ್ಮಾಣ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ತೀವ್ರಗೊಂಡಿದೆ. ಕೇಂದ್ರ ಸಚಿವ ಕುಮಾರಸ್ವಾಮಿ ಅವರು ನಾಳೆ ಭೈರಮಂಗಲಕ್ಕೆ ಹೋಗ್ತಾ ಇದ್ದಾರೆ. ಸಿಎಂ ಡಿ.ಕೆ ಶಿವಕುಮಾರ್ ಅವರು ಭೈರಮಂಗಲಕ್ಕೆ ಬರಲಿ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆಹ್ವಾನಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ನಿಖಿಲ್ ಕುಮರಸ್ವಾಮಿ, ಸಿಎಂ ಅವರು ವಿಧಾನಸೌಧದಲ್ಲಿ 4 ಗೋಡೆ ಮಧ್ಯೆ ಚರ್ಚೆ ಮಾಡೋಣ ಅಂತ ಪತ್ರ ಬರೆದಿದ್ದರು. ಕುಮಾರಸ್ವಾಮಿ ಅವರು ರೈತರ ಸಮ್ಮುಖದಲ್ಲಿ ಚರ್ಚೆಗೆ ಕರೆದಿದ್ದಾರೆ. 4 ಗೋಡೆ ಮಧ್ಯೆ ಬೇಡ, ರೈತರ ಮಧ್ಯೆ ಕೂತು ಸಮಸ್ಯೆ ಪರಿಹಾರ ‌ಮಾಡೋಣ ಅಂತ ಕುಮಾರಸ್ವಾಮಿ ಅವರು ಪತ್ರ ಬರೆದಿದ್ದಾರೆ. ಸಿಎಂ ಅವರು ಕುಮಾರಸ್ವಾಮಿ ಅವರ ಪತ್ರಕ್ಕೆ ರಿಪ್ಲೈ ಕೊಟ್ಟಿಲ್ಲ. ಸಿಎಂ ಬ್ಯುಸಿ ಇರ್ತಾರೆ ಎಂದರು.

ಕುಮಾರಸ್ವಾಮಿ ‌ರೈತರ ಪರ ಇರೋ ವ್ಯಕ್ತಿ. ನಾಳೆ ಕುಮಾರಸ್ವಾಮಿ ಅವರು ಭೈರಮಂಗಲ ಸರ್ಕಲ್ ನಲ್ಲಿ ರೈತರ ಜೊತೆ ಕೂರುತ್ತಾರೆ‌. ಸಿಎಂ ‌ಅವರು ಬಂದು ಕೂತು ರೈತರೊಂದಿಗೆ ಮಾತಾಡಲಿ ಎಂದರು.

ಪಹಣಿ ಇರೋರು, ಸಮಸ್ಯೆ ಇರೋ ರೈತರನ್ನ ಕೂರಿಸಿಕೊಳ್ಳಲಿ. ಯಾವುದೇ, ಸಂಘರ್ಷ ಗಲಭೆಗೆ ಅವಕಾಶ ಇಲ್ಲ. ರೈತರ ಸಮಸ್ಯೆ ಸುಸೂತ್ರವಾಗಿ ಪರಿಹಾರ ಆಗಲಿ ಎಂಬುದು ನಮ್ಮೆಲ್ಲರ ಆಶಯ ಎಂದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
GOOD NEWS : 'KSRTC' ಯಿಂದ ದಸರಾ ಸಂಭ್ರಮಕ್ಕೆ ಸ್ಪೆಷಲ್ ಗಿಫ್ಟ್: 3,000ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಸಂಚಾರ!ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿ