LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಿಜೆಪಿಯಲ್ಲಿ ಸ್ವಪಕ್ಷದ ನಾಯಕರ ನಡುವೆಯೇ ಗುದ್ದಾಟ: ಯಲಹಂಕ ಕ್ಷೇತ್ರದಲ್ಲಿ ಸ್ಪರ್ಧಿಸುವ ಧೈರ್ಯವಿದ್ದರೆ ಸುಧಾಕರ್ ನನ್ನ ವಿರುದ್ಧವೇ ಕಣಕ್ಕಿಳಿಯಲಿ: ಎಸ್.​​​ಆರ್ ವಿಶ್ವನಾಥ್ ಸವಾಲು

ಚಿಕ್ಕಬಳ್ಳಾಪುರ: ರಾಜ್ಯ ಬಿಜೆಪಿಯಲ್ಲಿ ಆಂತರಿಕ ಕಲಹ, ಭಿನ್ನಮತ ದಿನದಿಂದ ದಿಅಕ್ಕೆ ಹೆಚ್ಚುತ್ತಿದೆ. ಚಿಕ್ಕಬಳ್ಳಾಪುರ ಸಂಸದ ಡಾ.ಕೆ ಸುಧಾಕರ್ ಹಾಗೂ ಯಲಹಂಕ ಶಾಸಕ ಎಸ್.​​ಆರ್. ವಿಶ್ವನಾಥ್ ನಡುವಿನ ಸಂಘರ್ಷ ತಾರಕಕ್ಕೇರಿದೆ.

2024ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಆರಂಭವಾಗಿದ್ದ ಇಬ್ಬರ ನಡುವಿನ ಮುಸುಕಿನ ಗುದ್ದಾಟ ಇದೀಗ ಬಹಿರಂಗ ಕಾದಾಟವಾಗಿ ಮಾರ್ಪಟ್ಟಿದೆ. ಒಂದೆ ಪಕ್ಷದ ಇಬ್ಬರು ನಾಯಕರು ಪರಸ್ಪರ ಸವಾಲುಗಳನ್ನು ಹಾಕಿ ಯುದ್ಧಕ್ಕೆ ಇಳಿದಿದ್ದಾರೆ.

ಶಾಸಕ ಎಸ್.​​ಆರ ವಿಶ್ವನಾಥ್ ಅವರು ಚಿಕ್ಕಬಳ್ಳಾಪುರಕ್ಕೆ ತೆರಳಿ ಸ್ವಪಕ್ಷದ ಸಂಸದ ಸುಧಾಕರ್ ವಿರುದ್ಧ ನೇರ ನೇರವಾಗಿ ಏಕವಚನದಲ್ಲಿ ವಾಗ್ದಾಳಿ ನಡೆಸಿ ಸವಾಲು ಹಾಕಿದ್ದಾರೆ. ಯಲಹಂಕ ಕ್ಷೇತ್ರದಲ್ಲಿ ರಾಜಕೀಯ ಹಸ್ತಕ್ಷೇಪ ಮಾಡಬಾರದು ಎಂದು ಹೇಳಿದರೂ ಪದೇ ಪದೇ ನನ್ನ ಕ್ಷೇತ್ರದಲ್ಲಿ ರಾಜಕೀಯ ಮಾಡಲು ಬಂದರೆ ನಿನ್ನ ಬುಡಕ್ಕೆ ಕೈ ಹಾಕಿತ್ತೇನೆ ಎಂದು ಎಚ್ಚರಿಕೆ ನೀಡಿದ್ದಾರೆ.

ಸುಧಾಕರ್ ಕಾಂಗ್ರೆಸ್ ನಾಯಕರನ್ನು ಆಹ್ವಾನಿಸುವುದು ಹಾಗೂ ನನ್ನ ಬೆಂಬಲಿಗರನ್ನು ನನ್ನ ವಿರುದ್ಧ ಎತ್ತಿಕಟ್ಟುವ ಕೆಲಸ ಮಾಡುತ್ತಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ನಾನು ಪಕ್ಷವಿರೋಧಿ ಕೆಲಸ ಮಾಡಿಲ್ಲ. ಆದ್ರೂ ನಿನಗೆ ಅನುಮಾನ ಇದ್ರೆ ಆರೋಪ ಸತ್ಯವಾಗಿದ್ದರೆ ಧರ್ಮಸ್ಥಳ ಮಂಜುನಾಥ ಸ್ವಾಮಿ ಸನ್ನಿಧಿ ಗೆ ಬನ್ನಿ ಪ್ರಮಾಣ ಮಾಡಲು ಸಿದ್ಧ ಎಂದಿದ್ದಾರೆ.

ನಾನು ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತನಾಗಿದ್ದು, ಪಕ್ಷದ ಅಭ್ಯರ್ಥಿ ಯಾರೇ ಆಗಿದ್ದರೂ ಒಂದು ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸುವ ಸಾಮರ್ಥ್ಯ ಹೊಂದಿದ್ದೇನೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಯಲಹಂಕ ಕ್ಷೇತ್ರದಲ್ಲಿ ಸ್ಪರ್ಧಿಸುವ ಧೈರ್ಯವಿದ್ದರೆ ಸುಧಾಕರ್ ನೇರವಾಗಿ ನನ್ನ ವಿರುದ್ಧವೇ ಕಣಕ್ಕಿಳಿಯಲಿ ಎಂದು ಸವಾಲು ಹಾಕಿದ್ದಾರೆ.

ಸುಧಾಕರ್ ಅವರು ಲೋಕಸಭೆ ಬಿಟ್ಟು ವಿಧಾನಸಭೆ ಚುನಾವಣೆಯತ್ತ ಗಮನ ಹರಿಸುತ್ತಿದ್ದಾರೆ. ಬಿಜೆಪಿಯಿಂದ ನಿನಗೆ ಟಿಕೆಟ್ ಕೊಡಲ್ಲ, ಬೇರೆ ಪಕ್ಷದಿಂದ ಸ್ಪರ್ಧೆ ಮಾಡು. ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಟಿಕೆಟ್ ಸಂದೀಪ್ ರೆಡ್ಡಿಗೆ ನೀಡಬೇಕು ಎಂದು ಹೈಕಮಾಂಡ್‌ಗೆ ಮನವಿ ಮಾಡುತ್ತೇವೆ ಎಂದು ವಿಶ್ವನಾಥ್ ಹೇಳಿದ್ದಾರೆ.

ನಾನು ನೇರಾ ನೇರ ವ್ಯಕ್ತಿ, ಹೇಳಿದ್ದನ್ನು ಮಾಡುತ್ತೇನೆ. ಆದ್ರೆ ಚಿಕ್ಕಬಳ್ಳಾಪುರ ಬಿಜೆಪಿ ಸಂಸದ ಡಾ.ಕೆ.ಸುಧಾಕರ್ ಡಿಫರೆಂಟ್ ವ್ಯಕ್ತಿ. ಅವರು ರಾಜಕೀಯ ಶೈಲಿ ಸಂಪೂರ್ಣ ವಿಭಿನ್ನ. ಸುಧಾಕರ್ ಪ್ರತಿಭೆ ಕಂಡು ಹಿಡಿಯಲು ಸತ್ಯಶೋಧನಾ ಸಮಿತಿ ಮಾಡಬೇಕಾಗುತ್ತೆ ಎಂದು ವ್ಯಂಗ್ಯವಾಡಿದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?