LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಸ್ತೆಗಿಳಿದ ಕಿಚ್ಚ ಸುದೀಪ್‌ರ ವಿಮಾನದಂತ ಐಷಾರಾಮಿ ಕ್ಯಾರವನ್ ಇದರ ಬೆಲೆ, ವಿಶೇಷತೆ ಕೇಳಿದ್ರೆ ಶಾಕ್ ಆಗ್ತೀರಾ

ಬೆಂಗಳೂರು: ಸ್ಯಾಂಡಲ್‌ವುಡ್ ಬಾದ್‌ಷಾ, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ (Kichcha Sudeep) ಅವರಿಗೆ ವಾಹನಗಳ ಬಗ್ಗೆ ಇರುವ ಕ್ರೇಜ್ ಎಲ್ಲರಿಗೂ ಗೊತ್ತಿರೋದೇ. ಆದರೆ ಈಗ ಅವರ ಗ್ಯಾರೇಜ್ ಸೇರಿರುವ ಹೊಸ ವಾಹನ ಇಡೀ ಚಿತ್ರರಂಗವೇ ಹುಬ್ಬೇರಿಸುವಂತೆ ಮಾಡಿದೆ ನಟ ಸುದೀಪ್ ಅವರಿಗಾಗಿ ಪ್ರತ್ಯೇಕವಾಗಿ ವಿನ್ಯಾಸಗೊಳಿಸಲಾದ ಅತ್ಯಾಧುನಿಕ ಹಾಗೂ ಐಷಾರಾಮಿ ಕ್ಯಾರವನ್ (Caravan) ಒಂದು ಸಿದ್ಧವಾಗಿ ಬಂದಿದ್ದು, ಸದ್ಯ ಸ್ಯಾಂಡಲ್‌ವುಡ್‌ನಲ್ಲೇ ಅತ್ಯಂತ ದುಬಾರಿ ಬೆಲೆಯ ಕ್ಯಾರವನ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ

ಬರೋಬ್ಬರಿ ₹6.5 ಕೋಟಿ ಏನಿದರ ವಿಶೇಷತೆ?

ಮಹಾರಾಷ್ಟ್ರದ ಪುಣೆಯಲ್ಲಿ ರೆಡಿಯಾಗಿರುವ ಈ ಹೈ-ಫೈ ಕ್ಯಾರವನ್‌ನ ಒಟ್ಟು ಬೆಲೆ ಬರೋಬ್ಬರಿ ಸುಮಾರು 6.5 ಕೋಟಿ ರೂಪಾಯಿ ಭಾರತದ ಖ್ಯಾತ ಕಾರ್ ಡಿಸೈನರ್ ದಿಲೀಪ್ ಛಾಬ್ರಿಯಾ ಅವರ ಮಾಲೀಕತ್ವದ ‘DC2’ ಸಂಸ್ಥೆಯು ಸುದೀಪ್ ಅವರ ಇಷ್ಟಕ್ಕೆ ತಕ್ಕಂತೆ ಇದನ್ನು ಕಸ್ಟಮೈಸ್ ಮಾಡಿಕೊಟ್ಟಿದೆ. ಇದು ಬರೀ ಕ್ಯಾರವನ್ ಅಲ್ಲ, ಒಳಗಡೆ ಜಿಮ್ ಸೌಲಭ್ಯವನ್ನೂ ಒಳಗೊಂಡಿರುವ ಜಿಮ್ ಮಾಡ್ಯುಲರ್ ಕ್ಯಾರವನ್ ಆಗಿದೆ.

ಖಡಕ್ ಸಿಂಬಲ್: ಈ ಐಷಾರಾಮಿ ಕ್ಯಾರವನ್‌ನ ಮತ್ತೊಂದು ಹೈಲೈಟ್ ಅಂದರೆ, ಇದರ ಮುಂಭಾಗದಲ್ಲಿ ಕಿಚ್ಚ ಸುದೀಪ್ ಅವರ ಹೆಸರನ್ನು ಸೂಚಿಸುವ ‘K’ (ಕಿಚ್ಚ) ಎಂಬ ವಿಶೇಷ ಸಿಂಬಲ್ ಅನ್ನು ಡಿಸೈನ್ ಮಾಡಲಾಗಿದೆ. ಸುದೀಪ್ ಅವರು ತಮ್ಮ ಕಾರುಗಳ ಮೇಲೂ ಇದೇ ರೀತಿಯ ಲೋಗೋ ಹೊಂದಿದ್ದು, ಈಗ ಕ್ಯಾರವನ್ ಮೇಲೂ ಅದೇ ‘K’ ಬ್ರ್ಯಾಂಡ್ ರಾರಾಜಿಸುತ್ತಿದೆ.

ಬಿಲ್ಲ ರಂಗ ಬಾಷಾ’ ಶೂಟಿಂಗ್ ಅಡ್ಡಾಗೆ ಬಂತು ಕಾಸ್ಟ್ಲಿ ವಾಹನ

ಸುದೀಪ್ ಅಭಿಮಾನಿಗಳು ಬಹುಕಾಲದಿಂದ ಕಾಯುತ್ತಿದ್ದ ಬಹುನಿರೀಕ್ಷಿತ ಬಿಲ್ಲ ರಂಗ ಬಾಷಾ ಸಿನಿಮಾದ ಶೂಟಿಂಗ್ ಜೂನ್ 26ರಿಂದ ಭರ್ಜರಿಯಾಗಿ ಕಿಕ್ ಸ್ಟಾರ್ಟ್ ಆಗಿದೆ. ಸುಮಾರು ಒಂದು ವರ್ಷದ ದೀರ್ಘ ಬಿಡುವಿನ ಬಳಿಕ ಈ ಪ್ಯಾನ್ ಇಂಡಿಯಾ ಚಿತ್ರದ ಎರಡನೇ ಹಂತದ ಚಿತ್ರೀಕರಣ ಆರಂಭಗೊಂಡಿದೆ.

ಬೆಂಗಳೂರು ಜಿಲ್ಲೆಯ ಕನಕಪುರದ ಬಳಿ ಬೃಹತ್ ಆದ ಸೆಟ್ ಒಂದನ್ನು ನಿರ್ಮಿಸಲಾಗಿದ್ದು, ಅಲ್ಲಿ ಈ ಸಿನಿಮಾದ ಪ್ರಮುಖ ಆ್ಯಕ್ಷನ್ ಹಾಗೂ ಪ್ರಮುಖ ದೃಶ್ಯಗಳನ್ನು ಶೂಟ್ ಮಾಡಲಾಗುತ್ತಿದೆ. ಇದೇ ಶೂಟಿಂಗ್ ಅಡ್ಡಾಗೆ ಸುದೀಪ್ ಅವರ ಈ ₹6.5 ಕೋಟಿಯ ಹೊಸ ಕ್ಯಾರವನ್ ಭರ್ಜರಿಯಾಗಿ ಎಂಟ್ರಿ ಕೊಟ್ಟಿದೆ. ಸೆಟ್‌ನಲ್ಲಿ ನಿಂತಿರುವ ಈ ರಾಜಗಾಂಭೀರ್ಯದ ವಾಹನದ ಲುಕ್ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಗಾಂಧಿನಗರದ ಅಂಗಳದಲ್ಲಿ ಭಾರಿ ಸೌಂಡ್ ಮಾಡುತ್ತಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
ಕಲ್ಯಾಣ ಕರ್ನಾಟಕ ಜನತೆಗೆ ಗುಡ್ ನ್ಯೂಸ್: KKRTC ಗೆ 400 ಹೊಸ ಬಸ್ ಮಂಜೂರುಮನೆಗಳ್ಳತನ ಪ್ರಕರಣದಲ್ಲಿ ಇಬ್ಬರು ಅಪ್ರಾಪ್ತರು ವಶಕ್ಕೆ: ಲಕ್ಷಾಂತರ ರೂ. ಮೌಲ್ಯದ ಆಭರಣ ವಶಬಾಂಗ್ಲಾದೇಶದ ನೂತನ ಅಧ್ಯಕ್ಷರಾಗಿ BNP ಅಭ್ಯರ್ಥಿ ಮಿರ್ಜಾ ಫಖ್ರುಲ್ ಇಸ್ಲಾಂ ಅಲಂಗೀರ್ ಆಯ್ಕೆBREAKING: ಲಡಾಖ್ ನಲ್ಲಿ ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್ ಪೀಠ ಸ್ಥಾಪನೆಗೆ ಕೇಂದ್ರ ನಿರ್ಧಾರ: ಅಮಿತ್ ಶಾ ಘೋಷಣೆಅನುಮತಿ ಇಲ್ಲದೆ ಸಚಿವ ಕೃಷ್ಣ ಬೈರೇಗೌಡರ ಪೋಸ್ಟರ್ ಅಂಟಿಸಿದ್ದ ವ್ಯಕ್ತಿ ವಿರುದ್ಧ ಕೇಸ್ ದಾಖಲುಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿKPME ಉಲ್ಲಂಘನೆ: ಖಾಸಗಿ ವೈದ್ಯಕೀಯ ಸಂಸ್ಥೆಗಳಿಗೆ ದಂಡ, ಪರವಾನಗಿ ರದ್ದುಮೋದಿ ದೇವರಿಗೆ ಪೂಜೆ: ಭಕ್ತರಿಂದ ‘ಜೈ ಜೈ ಮೋದಿ, ಹರ್ ಹರ್ ಮೋದಿ’ ಘೋಷಣೆ; ದೆಹಲಿ ಪ್ರೆಸ್ ಕ್ಲಬ್‌ನಲ್ಲಿ ‘ಮೋದಿ ಚಾಲೀಸಾ’ ಕಾರ್ಯಕ್ರಮ!ತಪ್ಪಾಯ್ತು ಕ್ಷಮಿಸಿಬಿಡಿ: ರಸ್ತೆ ಮುಚ್ಚಿದ್ದಕ್ಕೆ ಭಾರತೀಯ ಸೇನೆಗೆ ‘ನಾನು GenZ’ ಎಚ್ಚರಿಕೆ ನೀಡಿದ್ದ ಯುವತಿಯಿಂದ ಕ್ಷಮೆಯಾಚನೆಲೋಕಸಭಾ ಕ್ಷೇತ್ರ ಹೆಚ್ಚಳ ಮಾಡಬಾರದು; 1971ರ ಜನಸಂಖ್ಯೆ ಆಧಾರವನ್ನು ಗೌರವಿಸಬೇಕು ಸಿಎಂ ಡಿ.ಕೆ.ಶಿವಕುಮಾರ್ ಮನವಿ