LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅಡುಗೆ ಸ್ವಚ್ಛತೆ ಪ್ರತಿಯೊಬ್ಬರಿಗೂ ಇರಬೇಕಾದ ಕನಿಷ್ಠ ಜವಾಬ್ದಾರಿ ಲಿಂಗ ತಾರತಮ್ಯದ ವಿರುದ್ಧ ಧ್ವನಿ ಎತ್ತಿದ ಪ್ರಿಯಾಂಕಾ ಚೋಪ್ರಾ

ಮನೆಯ ಕೆಲಸಗಳು, ಅಡುಗೆ ಮತ್ತು ಸ್ವಚ್ಛತೆಯನ್ನು ಕೇವಲ ಮಹಿಳೆಯರ ಕರ್ತವ್ಯ ಎಂದು ಬಿಂಬಿಸುವ ಲಿಂಗ ತಾರತಮ್ಯದ ಆಲೋಚನೆಗಳ ವಿರುದ್ಧ ಜಾಗತಿಕ ನಟಿ ಪ್ರಿಯಾಂಕಾ ಚೋಪ್ರಾ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ನಡೆದ ಕಾನ್ ಲಯನ್ಸ್ ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ಗೃಹಕೃತ್ಯದ ಜವಾಬ್ದಾರಿಗಳು ಯಾವುದೇ ಒಂದು ಲಿಂಗಕ್ಕೆ ಸೀಮಿತವಾಗಿರಬಾರದು. ಪ್ರತಿಯೊಬ್ಬ ವಯಸ್ಕ ವ್ಯಕ್ತಿಯೂ ಕರಗತ ಮಾಡಿಕೊಳ್ಳಬೇಕಾದ ಪ್ರಮುಖ ಜೀವನ ಕೌಶಲಗಳು ಇವು ಎಂದು ಸ್ಪಷ್ಟಪಡಿಸಿದ್ದಾರೆ.

ಸಾಮಾನ್ಯವಾಗಿ ಪುರುಷರು ಮನೆಯ ಕೆಲಸಗಳಿಂದ ದೂರ ಉಳಿದು, ಮಹಿಳೆಯರೇ ಎಲ್ಲವನ್ನೂ ನಿಭಾಯಿಸಬೇಕು ಎಂಬ ಸಾಂಪ್ರದಾಯಿಕ ಮನಸ್ಥಿತಿಯನ್ನು ಪ್ರಶ್ನಿಸಿದ ಪ್ರಿಯಾಂಕಾ ಚೋಪ್ರಾ, ಸ್ವಚ್ಛತೆ ಮತ್ತು ಅಡುಗೆ ಮಾಡುವುದು ಕೇವಲ ಮಹಿಳೆಯರ ಕೆಲಸವಲ್ಲ. ಅದು ಪ್ರತಿಯೊಬ್ಬ ವ್ಯಕ್ತಿಗೂ ತಿಳಿದಿರಬೇಕಾದ ಕನಿಷ್ಠ ಜವಾಬ್ದಾರಿ. ಲಿಂಗ ಬೇಧದ ಹೆಸರಿನಲ್ಲಿ ತಮ್ಮ ಸೋಮಾರಿತನವನ್ನು ಮುಚ್ಚಿಕೊಳ್ಳಲು ಯತ್ನಿಸಬೇಡಿ ಎಂದು ನೇರವಾಗಿಯೇ ನುಡಿದಿದ್ದಾರೆ.

ಇದೇ ಸಂದರ್ಭದಲ್ಲಿ ಬದಲಾಗುತ್ತಿರುವ ಮನರಂಜನಾ ರಂಗದ ತಂತ್ರಜ್ಞಾನದ ಬಗ್ಗೆಯೂ ಮಾತನಾಡಿದ ಅವರು, ಪ್ರಸ್ತುತ ದಿನಗಳಲ್ಲಿ ಡಿಜಿಟಲ್ ಮಾಧ್ಯಮಗಳು ಸಿನಿಮಾ ರಂಗದ ಚಿತ್ರಣವನ್ನೇ ಬದಲಾಯಿಸಿವೆ ಎಂದರು. ಈ ಹಿಂದೆ ಸಿನಿಮಾ ರಂಗಕ್ಕೆ ಪ್ರವೇಶಿಸುವುದು ಮತ್ತು ಸೂಕ್ತ ವಿಭಾಗವನ್ನು ಆರಿಸಿಕೊಂಡು ಗುರುತಿಸಿಕೊಳ್ಳುವುದು ಅತ್ಯಂತ ಕಠಿಣವಾಗಿತ್ತು. ಆದರೆ ಇಂದು ಯೂಟ್ಯೂಬ್ ನಂತಹ ಡಿಜಿಟಲ್ ವೇದಿಕೆಗಳು ಹೊಸ ಆಲೋಚನೆಗಳಿರುವ ಯುವ ಕ್ರಿಯೇಟರ್ಸ್ ಗೆ ದೊಡ್ಡ ಅವಕಾಶಗಳನ್ನು ಸೃಷ್ಟಿಸಿವೆ. ಕಥೆಯೊಂದನ್ನು ಸಿದ್ಧಪಡಿಸಿ ಶೂಟ್ ಮಾಡಿ ನೇರವಾಗಿ ಪ್ರೇಕ್ಷಕರಿಗೆ ತಲುಪಿಸುವ ಸ್ವಾತಂತ್ರ್ಯ ಈಗ ಸಿಕ್ಕಿದೆ ಎಂದು ಅವರು ಅಭಿಪ್ರಾಯಪಟ್ಟರು.

ತಮ್ಮ ಮುಂದಿನ ಚಿತ್ರಗಳ ಬಗ್ಗೆ ಮಾಹಿತಿ ಹಂಚಿಕೊಂಡ ಪ್ರಿಯಾಂಕಾ ಚೋಪ್ರಾ, ಹಾಲಿವುಡ್ ಸ್ಟಾರ್ ಎಂಜಲಿನಾ ಜೋಲಿ ಅವರೊಂದಿಗೆ ಹೊಸ ಪ್ರಾಜೆಕ್ಟ್ ಒಂದರಲ್ಲಿ ಕೆಲಸ ಮಾಡುತ್ತಿರುವುದನ್ನು ಖಚಿತಪಡಿಸಿದ್ದಾರೆ. ಇದು ಕೇವಲ ಸಿನಿಮಾ ಮಾತ್ರವೇ ಅಥವಾ ವಾಣಿಜ್ಯ ಜಾಹೀರಾತು ಇಲ್ಲವೇ ಸಾಮಾಜಿಕ ಕಾರ್ಯಕ್ರಮವೇ ಎಂಬುದನ್ನು ಅವರು ಬಹಿರಂಗಪಡಿಸಿಲ್ಲ. ಇದರೊಂದಿಗೆ ನಟ ಒರ್ಲ್ಯಾಂಡೊ ಬ್ಲೂಮ್ ಅವರೊಂದಿಗೂ ಹೊಸ ವೆಂಚರ್ ಆರಂಭಿಸುತ್ತಿರುವ ಪ್ರಿಯಾಂಕಾ, ಸದ್ಯದಲ್ಲೇ ಬಿಡುಗಡೆಯಾಗಲಿರುವ ಎಸ್ ಎಸ್ ರಾಜಮೌಳಿ ನಿರ್ದೇಶನದ ವಾರಣಾಸಿ ಚಿತ್ರದಲ್ಲಿ ಮಹೇಶ್ ಬಾಬು ಮತ್ತು ಪೃಥ್ವಿರಾಜ್ ಸುಕುಮಾರನ್ ಅವರೊಂದಿಗೆ ತೆರೆ ಹಂಚಿಕೊಳ್ಳಲಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
GOOD NEWS : 'KSRTC' ಯಿಂದ ದಸರಾ ಸಂಭ್ರಮಕ್ಕೆ ಸ್ಪೆಷಲ್ ಗಿಫ್ಟ್: 3,000ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಸಂಚಾರ!ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿ