LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮುಖ್ಯಮಂತ್ರಿಯ ಸಿಂಹಾಸನ ನಶ್ವರ, ಜನತೆಯ ಹೃದಯ‌ಸಿಂಹಾಸನ ಶಾಶ್ವತ: ಸಿದ್ಧರಾಮಯ್ಯ

ಬೆಂಗಳೂರು: ರಾಜಕೀಯ ಅಧಿಕಾರ ಎನ್ನುವುದು ಜನರ ಸೇವೆ ಮಾಡಲು ಒದಗಿಬಂದ ಅವಕಾಶದ ಭಾಗ್ಯ ಎಂದು ನಾನು ತಿಳಿದುಕೊಂಡವನು ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ.

ಮುಖ್ಯಮಂತ್ರಿಯ ಪದತ್ಯಾಗ ಮಾಡಿದ ದಿನದಿಂದ ಹೋದಲ್ಲಿ, ಬಂದಲ್ಲಿ ಜನತೆ ವ್ಯಕ್ತಪಡಿಸುತ್ತಿರುವ ಪ್ರೀತಿ, ಅಭಿಮಾನ, ವಿಶ್ವಾಸವನ್ನು ನೋಡಿದರೆ ಅಧಿಕಾರವನ್ನು ಬಳಸಿಕೊಂಡು ಜಗಮೆಚ್ಚುವ ರೀತಿಯಲ್ಲಿ ಜನಸೇವೆ  ಮಾಡಿದ್ದೇನೆ ಎಂಬ ಸಾರ್ಥಕ್ಯದ ಭಾವನೆ ಮೂಡಿದೆ. ಪದತ್ಯಾಗದ ನಂತರ ಇಂದು ಮೊದಲ ಬಾರಿಗೆ ಹುಟ್ಟೂರಿಗೆ ಆಗಮಿಸಿದಾಗ ಇದೇ ಅನುಭವವಾಯಿತು. ಸೇರಿದ್ದ ಜನಸಾಗರ, ಅವರು ತೋರಿದ ಪ್ರೀತಿ-ಅಭಿಮಾನ ಕಂಡು ಮೂಕವಿಸ್ಮಿತನಾಗಿದ್ದೇನೆ ಎಂದು ಹೇಳಿದ್ದಾರೆ.

ಅಧಿಕಾರ, ಸಂಪತ್ತು ಕಾಲ ಬದಲಾದಂತೆ ಕಳೆದು ಹೋಗಬಹುದು, ಜನರ ಪ್ರೀತಿ ನಿರಂತರ. ನನ್ನ ಸಾರ್ವಜನಿಕ ಬದುಕಿನಲ್ಲಿ ನನ್ನನ್ನು ಪ್ರೀತಿಸುವ ದೊಡ್ಡ ಜನಸಮೂಹವನ್ನೇ ಸಂಪಾದಿಸಿದ್ದೇನೆ ಎನ್ನುವ ಹೆಮ್ಮೆ ನನ್ನದು. ಮುಖ್ಯಮಂತ್ರಿಯ ಸಿಂಹಾಸನ ನಶ್ವರ, ಜನತೆಯ ಹೃದಯ‌ಸಿಂಹಾಸನ ಶಾಶ್ವತ. ಅಲ್ಲಿಂದ ನನ್ನನ್ನು ಯಾರೂ ಕೆಳಗಿಳಿಸಲಾರರು. ಅದು ನನ್ನ ಮತ್ತು ನಾನು ನಂಬುವ ಜನತಾ ಜನಾರ್ಧನರ ನಡುವಿನ‌ ಶಾಶ್ವತ ಒಪ್ಪಂದ. ನಾಡಿನ ಉದ್ದಗಲಕ್ಕೂ ಯಾವ ನಿರೀಕ್ಷೆಯೂ ಇಲ್ಲದೆ ಪ್ರೀತಿ – ಅಕ್ಕರೆ ತೋರುತ್ತಿರುವ ಪ್ರೀತಿಯ ಬಂಧುಗಳ ಸೇವೆಗೆ ನಾನು ಸದಾ ಬದ್ಧ. ಮತ್ತೊಮ್ಮೆ ಎಲ್ಲರಿಗೂ ನನ್ನ ತುಂಬು ಹೃದಯದ ಕೃತಜ್ಞತೆಗಳು ಎಂದು ಅವರು ತಿಳಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಇನ್ಮೇಲೆ ಡೆಡ್ ಬಾಡಿ ಮೇಲೆ ಬಿಲ್ ವಸೂಲಿ ಬಂದ್ : ಮೃತದೇಹ ಹಸ್ತಾಂತರಕ್ಕೆ ಶೀಘ್ರ ಹೊಸ ಪಾಲಿಸಿ!ಬೆಂಗಳೂರಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯ ಬರ್ಬರ ಹತ್ಯೆ!BREAKING : ಖಾಸಗಿ ಆಸ್ಪತ್ರೆಗಳ ಕಳ್ಳಾಟಕ್ಕೆ ಬ್ರೇಕ್ : ಇನ್ಮುಂದೆ ರಶೀದಿಯಲ್ಲಿ ಔಷಧಗಳ ಬೆಲೆ ನಮೂದು ಕಡ್ಡಾಯ!🌺🌼🔱 ನವರಾತ್ರಿ ಮೊದಲನೇ ದಿನ – ಶ್ರೀ ಶೈಲಪುತ್ರಿ ದೇವಿ ಆರಾಧನೆ 🔱🌼🌺BIG NEWS : ಹಬ್ಬದ ಸಂದರ್ಭದಲ್ಲೆ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ : ರಾಜ್ಯದಲ್ಲಿ ಗಗನಕ್ಕೇರಿದ ಅಕ್ಕಿ, ತೊಗರಿಬೇಳೆ ಬೆಲೆ!GOOD NEWS : 'KSRTC' ಯಿಂದ ದಸರಾ ಸಂಭ್ರಮಕ್ಕೆ ಸ್ಪೆಷಲ್ ಗಿಫ್ಟ್: 3,000ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಸಂಚಾರ!ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!