LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಾಧಾರಣ ಮಳೆ ಮುನ್ಸೂಚನೆ: ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಎರಡು ದಿನಗಳಿಂದ ಮಳೆಯ ಸುಳಿವಿಲ್ಲ. ಮೋಡಕವಿದ ವಾತಾವರಣ ಆಗಾಗ ಬಿಸಿಲು ಇದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಹುತೇಕ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಕರಾವಳಿ ತೀರದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ಈ ಭಾಗದಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ನಿರಂತರ ಬಲವಾದ ಗಾಳಿ ಬೀಸಲಿದ್ದು, ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಇನ್ನು ಉತ್ತರ ಕನ್ನಡ ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಾಪುರ ಮತ್ತು ಯಾದಗಿರಿಯ ಹಲವು ಪ್ರದೇಶಗಳಲ್ಲಿ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಮಲೆನಾಡು ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು, ಮಂಡ್ಯ, ಕೊಡಗು ಮತ್ತು ಚಾಮರಾಜನಗರ ಜಿಲ್ಲೆಗಳ ಅನೇಕ ಕಡೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಹಗುರವಾದ ಮಳೆಯಾಗುವ ಸಾಧ್ಯತೆ ಇದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?