LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಉಲ್ಟಾ ಪಲ್ಟಾ ಸಿನಿಮಾ ಖ್ಯಾತಿಯ ನಿರ್ದೇಶಕ ಎನ್.ಎಸ್.ಶಂಕರ್ ಹೃದಯಾಘಾತಕ್ಕೆ ಬಲಿ

ಬೆಂಗಳೂರು: ಸ್ಯಾಂಡಲ್ ವುಡ್ ನ ಖ್ಯಾತ ನಿರ್ದೇಶಕ ಎನ್.​ಎಸ್. ಶಂಕರ್ ಹೃದಯಾಘಾತದಿಂದ ವಿಧಿವಶರಾಗಿರುವ ಘಟನೆ ನಡೆದಿದೆ.

ಪತ್ರಕರ್ತರೂ ಆಗಿದ್ದ ಶಂಕರ್ ಅವರು ಕನ್ನಡದ ಹೆಸರಾಂತ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದರು. ‘ಉಲ್ಟಾ ಪಲ್ಟಾ’ ಎಂಬ ಸೂಪರ್ ಹಿಟ್ ಸಿನಿಮಾಗಳಿಗೆ ನಿರ್ದೇಶನ ಮಾಡಿದ ಖ್ಯಾತಿ ಅವರದ್ದು. ಎನ್.​ಎಸ್.ಶಂಕರ್ ಅವರ ಅಗಲಿಕೆಗೆ ಇಡೀ ಕನ್ನಡ ಚಿತ್ರರಂಗ ಕಂಬನಿ ಮಿಡಿದಿದೆ.

ಕಳೆದ ಕೆಲವು ದಿನಗಳಿಂದ ಎನ್​.ಎಸ್. ಶಂಕರ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಇಂದು ಮಲಗಿದ್ದಲ್ಲಿಯೇ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಉತ್ತಮ ಬರಹಗಾರರಾಗಿದ್ದ ಅವರು ಅನೇಕ ಪುಸ್ತಕಗಳನ್ನು ಬರೆದಿದ್ದರು. ಆ ಮೂಲಕ ಕನ್ನಡ ಸಾಹಿತ್ಯ ಲೋಕಕ್ಕೂ ಕೊಡುಗೆ ನೀಡಿದ್ದರು.

‘ಪ್ರಜಾವಾಣಿ’, ‘ಮುಂಗಾರು’, ‘ಲಂಕೇಶ್ ಪತ್ರಿಕೆ’ ಸೇರಿದಂತೆ ಹಲವು ಮಾಧ್ಯಮದಲ್ಲಿ ಸೇವೆ ಸಲ್ಲಿಸಿದ್ದ ಎನ್.ಎಸ್. ಶಂಕರ್ ನಿಧನಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ತೀವ್ರ ಸಂತಾಪ ವ್ಯಕ್ತಪಡಿಸಿದೆ. ‘ಶಂಕರ್ ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ’ ಎಂದು ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ಶಿವಮೊಗ್ಗ ಮೂಲದ ಎನ್.​ಎಸ್ ಶಂಕರ್ ಅವರು ಬಾಲ್ಯವನ್ನು ಕಳೆದಿದ್ದು ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ. ಹೈಸ್ಕೂಲ್ ಓದಿದ್ದು ಮೈಸೂರಿನಲ್ಲಿ. ಬೆಂಅಗ್ಳೂರಿನಲ್ಲಿ ಕಾಲೇಜು ಶಿಕ್ಷಣವನ್ನುಪೂರೈಸಿದ್ದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?