ಬೆಂಗಳೂರು: ಚಿಕ್ಕಬಳ್ಳಾಪುರದಲ್ಲಿ ನಡೆದ ನಾಡಪ್ರಭು ಕೆಂಪೇಗೌಡ ಜಯಂತಿ ಮಹೋತ್ಸವದ ಮೆರವಣಿಗೆ ವೇಳೆ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಬೈರತಿ ಸುರೇಶ್ ಪ್ರತಿಕ್ರಿಯಿಸಿದ್ದಾರೆ.
ಬೆಂಗಳೂರೂನಲ್ಲಿ ಮಾತನಾಡಿದ ಸಚಿವ ಬೈರತಿ ಸುರೆಶ್, ಒಬ್ಬ ಜನಪ್ರತಿನಿಧಿಗಳ ಮೇಲೆ ಹಲ್ಲೆ, ಚಪ್ಪಲಿ ಎಸೆತ ಅಪರಾಧ, ಇಂದು ಅವರುಗೆ ನಾಳೆ ಮತ್ತೊಬ್ಬರಿಗೆ. ಇದನ್ನು ಯಾರೂ ಕೂಡ ಸಹಿಸಲು ಸಾಧ್ಯವಿಲ್ಲ ಎಂದು ಕಿಡಿಕಾರಿದರು.
ಈಗಾಗಲೇ ಪ್ರಕರಣ ಸಂಬಂಧ ನಾಲ್ವರನ್ನು ಬಂಧಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಂದು ತಿಳಿಸಿದರು.