LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮುಂಗಾರು ಬೆಳೆ ವಿಮೆ ನೋಂದಣಿ ಆರಂಭ ; ರೈತರು ಶೀಘ್ರ ನೋಂದಾಯಿಸಿಕೊಳ್ಳುವಂತೆ ಮನವಿ.!

ಬಳ್ಳಾರಿ:   ರೈತ ಬಾಂಧವರ ಹಿತದೃಷ್ಟಿಯಿಂದ 2026-27ನೇ ಸಾಲಿನ ‘ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ’ ಯೋಜನೆಯಡಿ ಮುಂಗಾರು ಹಂಗಾಮಿನ ಬೆಳೆ ವಿಮೆ ನೋಂದಣಿ ಪ್ರಕ್ರಿಯೆ ಆರಂಭವಾಗಿದೆ.

ಜಿಲ್ಲೆಯ ಎಲ್ಲಾ ಅರ್ಹ ರೈತರು (ಬೆಳೆ ಸಾಲ ಪಡೆದ ಹಾಗೂ ಪಡೆಯದ ರೈತರು) ನಿಗದಿತ ಅವಧಿಯೊಳಗೆ ತಮ್ಮ ಬೆಳೆಗಳಿಗೆ ವಿಮೆ ಮಾಡಿಸಿ ಯೋಜನೆಯ ಸೌಲಭ್ಯ ಪಡೆದುಕೊಳ್ಳಬೇಕಾಗಿ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.ಬೆಳೆ ಸಾಲ ಪಡೆದ ರೈತರು ಈ ಯೋಜನೆಯಲ್ಲಿ ಭಾಗವಹಿಸಲು ಇಚ್ಛಿಸದಿದ್ದಲ್ಲಿ, ಬೆಳೆ ನೋಂದಣಿಯ ಅಂತಿಮ ದಿನಾಂಕಕ್ಕಿAತ 7 ದಿನಗಳ ಮುಂಚಿತವಾಗಿ ತಮ್ಮ ವ್ಯಾಪ್ತಿಯ ಬ್ಯಾಂಕ್ ವ್ಯವಸ್ಥಾಪಕರಿಗೆ ಲಿಖಿತವಾಗಿ ಮುಚ್ಚಳಿಕೆ ಪತ್ರ ನೀಡಬೇಕು. ಇಲ್ಲದಿದ್ದರೆ ಅಂತಹ ರೈತರನ್ನು ಯೋಜನೆಯಿಂದ ಕೈಬಿಡಲಾಗುವುದು.

*ಬೆಳೆಗಳು ಮತ್ತು ವಿಮೆ ನೋಂದಣಿಗೆ ಕೊನೆಯ ದಿನಾಂಕಗಳು:

ಎಳ್ಳು (ಮಳೆಯಾಶ್ರಿತ): ಜುಲೈ 15.

ಮುಸುಕಿನ ಜೋಳ (ನೀ/ಮ), ಜೋಳ (ನೀ/ಮ), ಸೂರ್ಯಕಾಂತಿ (ನೀ/ಮ), ಹತ್ತಿ (ನೀ/ಮ), ಕೆಂಪು ಮೆಣಸಿನಕಾಯಿ (ನೀ), ಈರುಳ್ಳಿ (ನೀ): ಜುಲೈ 31.

ಭತ್ತ (ನೀರಾವರಿ/ಮಳೆಯಾಶ್ರಿತ), ತೊಗರಿ (ಮಳೆಯಾಶ್ರಿತ), ರಾಗಿ (ಮ), ನವಣೆ (ಮ), ಹುರುಳಿ (ಮ), ಸಜ್ಜೆ (ನೀ/ಮ), ನೆಲಗಡಲೆ (ನೀ/ಮ): ಆಗಸ್ಟ್ 14.

ಕೃಷಿ ಇಲಾಖೆಯ ನಿಯಮಾವಳಿಗಳ ಪ್ರಕಾರ ಭತ್ತ (ನೀರಾವರಿ), ಮುಸುಕಿನ ಜೋಳ (ಮ) ಗ್ರಾಮ ಪಂಚಾಯತಿ ಮಟ್ಟದ ಬೆಳೆಗಳಾಗಿದ್ದು, ಇನ್ನುಳಿದ ಬೆಳೆಗಳನ್ನು ಹೋಬಳಿ ಮಟ್ಟದ ಬೆಳೆಗಳೆಂದು ಪರಿಗಣಿಸಲಾಗಿದೆ.ಅರ್ಹ ರೈತರು ತಮ್ಮ ಹತ್ತಿರದ ಯಾವುದೇ ಸ್ಥಳೀಯ ಬ್ಯಾಂಕುಗಳು, ಸಾರ್ವಜನಿಕ ಸೇವಾ ಕೇಂದ್ರಗಳು, ಗ್ರಾಮ ಪಂಚಾಯತಿ ಮಟ್ಟದಲ್ಲಿ ಹೊಸದಾಗಿ ಕಾರ್ಯನಿರ್ವಹಿಸುತ್ತಿರುವ ‘ಗ್ರಾಮ ಒನ್’ ಸೇವಾ ಕೇಂದ್ರಗಳನ್ನು ಸಂಪರ್ಕಿಸಿ ವಿಮೆ ನೋಂದಾಯಿಸಿಕೊಳ್ಳಬಹುದು.ಹೆಚ್ಚಿನ ಮಾಹಿತಿಗಾಗಿ ರೈತರು ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಅಥವಾ ಜಂಟಿ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬಳ್ಳಾರಿ ಮತ್ತು ಕುರುಗೋಡು ತಾಲ್ಲೂಕಿನ ರೈತರ ಗಮನಕ್ಕೆ: ಮುಂಗಾರು ಹಂಗಾಮಿನ ಬೆಳೆ ವಿಮೆ ನೋಂದಣಿ ಪ್ರಾರಂಭ

ಪ್ರಸ್ತಕ ಸಾಲಿನ ಮುಂಗಾರು ಹಂಗಾಮಿನ ಕೃಷಿ ಬೆಳೆಗಳಿಗೆ ವಿಮೆ ನೋಂದಣಿ ಪ್ರಕ್ರಿಯೆಯು ಪ್ರಾರಂಭವಾಗಿದ್ದು, ಬಳ್ಳಾರಿ ಹಾಗೂ ಕುರುಗೋಡು ತಾಲ್ಲೂಕಿನ ರೈತರು ಪ್ರಸಕ್ತ ಸಾಲಿಗೆ ‘ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ’ಯಡಿ ತಮ್ಮ ವಿವಿಧ ಕೃಷಿ ಬೆಳೆಗಳಿಗೆ ವಿಮೆ ಮಾಡಿಸಿಕೊಳ್ಳಬಹುದು ಎಂದು ಸಹಾಯಕ ಕೃಷಿ ನಿರ್ದೇಶಕ ಗರ್ಜಪ್ಪ ಅವರು ತಿಳಿಸಿದ್ದಾರೆ.ನೈಸರ್ಗಿಕ ವಿಕೋಪಗಳಿಂದಾಗಿ ಬೆಳೆ ಹಾನಿಯಾದರೆ, ಈ ವಿಮಾ ಯೋಜನೆಯು ರೈತರಿಗೆ ಭಾರಿ ಅನುಕೂಲ ಹಾಗೂ ಆರ್ಥಿಕ ಭದ್ರತೆ ನೀಡಲಿದೆ.

*ಬೆಳೆಗಳು ಮತ್ತು ನಿಗದಿಪಡಿಸಲಾದ ಪ್ರೀಮಿಯಂ ವಿವರ (ಪ್ರತಿ ಎಕರೆಗೆ):*

*ಜುಲೈ 31 ರೊಳಗಾಗಿ ನೋಂದಾಯಿಸಬೇಕಾದ ಬೆಳೆಗಳು:*

ಸೂರ್ಯಕಾಂತಿ: ಮಳೆಯಾಶ್ರಿತ – 390 ರೂ., ನೀರಾವರಿ – 469 ರೂ.

ಹತ್ತಿ: ಮಳೆಯಾಶ್ರಿತ – 1208 ರೂ., ನೀರಾವರಿ – 1748 ರೂ.

ಮುಸುಕಿನ ಜೋಳ: ಮಳೆಯಾಶ್ರಿತ – 546 ರೂ. ನೀರಾವರಿ – 617 ರೂ.

ಜೋಳ: ಮಳೆಯಾಶ್ರಿತ – 359 ರೂ., ನೀರಾವರಿ – 426 ರೂ.

*ಆಗಸ್ಟ್ 14 ರೊಳಗಾಗಿ ನೋಂದಾಯಿಸಬೇಕಾದ ಬೆಳೆಗಳು:*

ನೀರಾವರಿ ಭತ್ತ: 879 ರೂ.

ಮಳೆಯಾಶ್ರಿತ ಬೆಳೆಗಳು: ಸಜ್ಜೆ (282 ರೂ.), ನವಣೆ (261 ರೂ.), ತೊಗರಿ (466 ರೂ.), ಹುರುಳಿ (380 ರೂ.) ಮತ್ತು ನೆಲಗಡಲೆ/ಶೇಂಗಾ (529 ರೂ.).

ನೀರಾವರಿ ಬೆಳೆಗಳು: ತೊಗರಿ (488 ರೂ.) ಮತ್ತು ಸಜ್ಜೆ (350 ರೂ.).

ಮೇಲೆ ತಿಳಿಸಲಾದ ಬೆಳೆಗಳ ವಿಮೆ ನೋಂದಣಿಯನ್ನು ಆಯಾ ಹೋಬಳಿ ಹಾಗೂ ಗ್ರಾಮ ಪಂಚಾಯಿತಿಗಳಿಗೆ ನಿಗದಿಪಡಿಸಿದ ನಿಗದಿತ ಘಟಕಗಳಲ್ಲಿ ಮಾಡಲಾಗುತ್ತದೆ. ರೈತರು ತಮ್ಮ ಹತ್ತಿರದ ಸಾಮಾನ್ಯ ಸೇವಾ ಕೇಂದ್ರ, ಗ್ರಾಮ ಒನ್ ಕೇಂದ್ರ ಅಥವಾ ತಾವು ವ್ಯವಹಾರ ನಡೆಸುವ ಬ್ಯಾಂಕುಗಳನ್ನು ಸಂಪರ್ಕಿಸಿ ನೋಂದಣಿ ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ರೈತರು ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿ, ಬಳ್ಳಾರಿ ಇವರನ್ನು ಸಂಪರ್ಕಿಸಲು ಕೋರಲಾಗಿದೆ. ಅರ್ಹ ರೈತರು ಕೊನೆಯ ದಿನಾಂಕದ ಸದುಪಯೋಗ ಪಡೆದುಕೊಂಡು ವಿಮೆಗೆ ನೋಂದಾಯಿಸಿಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶ