LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಿದ್ಯುತ್ ಸರಬರಾಜು ಖಾಸಗೀಕರಣ ಪ್ರಶ್ನೆಯೇ ಇಲ್ಲ: ಸಚಿವ ಕೆ.ಜೆ.ಜಾರ್ಜ್ ಸ್ಪಷ್ಟನೆ

ಬೆಂಗಳೂರು: ರಾಜ್ಯದ ಜನರಿಗೆ ವಿದ್ಯುತ್ ಪೂರೈಸಲು ಇಂಧನ ಇಲಾಖೆ ಬಲಿಷ್ಠವಾಗಿದ್ದು, ಖಾಸಗೀಕರಣಗೊಳಿಸುವ ಪ್ರಶ್ನೆಯೇ ಇಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ಸೋಮವಾರ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ಮತ್ತು ಅಸೋಸಿಯೇಷನ್ ಗಳ ಒಕ್ಕೂಟ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇಂಧನ ಸಚಿವರಿಗೆ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಟಾಟಾ ಪವರ್ ಕಂಪನಿಯು ಕರ್ನಾಟಕದಲ್ಲಿ ವಿದ್ಯುತ್‌ ಸರಬರಾಜು (ವಿತರಣೆ) ಮಾಡಲು ಪರವಾನಗಿ ಕೋರಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (ಕೆಇಆರ್ ಸಿ) ಕ್ಕೆ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಸಚಿವರು, ಇಂಧನ ಇಲಾಖೆ ಬಲಿಷ್ಠವಾಗಿದೆ. ನಮ್ಮ ಸರ್ಕಾರ ನಿಮ್ಮ (ನೌಕರರ) ಪರವಾಗಿದೆ. ಖಾಸಗೀಕರಣ ವಿಚಾರಕ್ಕೆ ಸಂಬಂಧಿಸಿದಂತೆ ಸೂಕ್ತ ನಿರ್ದೇಶನ ನೀಡಲಾಗಿದ್ದು, ಅದರಂತೆ ಎಸ್ಕಾಂಗಳು ಕೆಇಆರ್ ಸಿ ಮುಂದೆ ಆಕ್ಷೇಪಣೆ ಸಲ್ಲಿಸಿವೆ. ನಾವು ಯಾವುದೇ ಖಾಸಗಿ ಕಂಪನಿಗೆ ಕಡಿಮೆ ಇಲ್ಲ. ನೌಕರರು ಮತ್ತು ಅಧಿಕಾರಿಗಳ ಬೇಡಿಕೆಗಳಿಗೆ ಸ್ಪಂದಿಸಲಿದ್ದೇವೆ. ಮುಂದಿನ ದಿನಗಳಲ್ಲಿ ಸಚಿವ ಸಂಪುಟದಲ್ಲಿ ಚರ್ಚಿಸಿ ಸೂಕ್ತ ಕ್ರಮ ಜರುಗಿಸಲಾಗುವುದು. ನಾವು ರಾಜ್ಯದ ಸೇವೆ ಮಾಡಲು ಬಂದವರು. ಇಲ್ಲಿ ಖಾಸಗೀಕರಣ ವಿಚಾರ ಬರುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಇಂಧನ ಇಲಾಖೆ ಈಗಾಗಲೇ ದೂರದೃಷ್ಟಿಯ ಯೋಜನೆಗಳನ್ನು ಸಿದ್ದಪಡಿಸಿದೆ, ಮುಂದಿನ 25 ವರ್ಷಗಳ ಅವಧಿಗೆ ವಿದ್ಯುತ್ ಭ್ರದತೆ ಒದಗಿಸಲು ಯೋಜನೆ ಸಿದ್ದವಾಗಿದೆ. ರೈತರ ಜತೆಗೆ 10,000 ಎಕರೆಯಲ್ಲಿ ಸೌರ ಪಾರ್ಕ್ ಮಾಡಿದ್ದೇವೆ. ರೈತರು ಇನ್ನೂ 10,000 ಎಕರೆ ಕೊಡಲು ಮುಂದೆ ಬಂದಿದ್ದಾರೆ. ವಿದ್ಯುತ್ ಉತ್ಪಾದನೆ ಅತ್ಯುತ್ತಮವಾಗಿದೆ. ಪೀಕ್ ಅವರ್ ವಿದ್ಯುತ್ ಮಾರಾಟವನ್ನು ಹೆಚ್ಚಿಸಿರುವುದರಿಂದ ಇಲಾಖೆಗೆ ಲಾಭವಾಗಿದೆ. ವಿನಿಮಯ ಆಧಾರದ ಮೇಲೆ ವಿದ್ಯುತ್ ಪಡೆಯುವುದು ಮತ್ತು ದೀರ್ಘಾವಧಿ ಒಪ್ಪಂದಗಳ ಮೂಲಕ ವಿದ್ಯುತ್ ಖರೀದಿ ಮೂಲಕ ಇಂಧನ ಭದ್ರತೆಗೆ ಕ್ರಮ ವಹಿಸಲಾಗಿದೆ ಎಂದರು.

ಗೃಹಜ್ಯೋತಿ ಮೂಲಕ 1.67 ಕೋಟಿ ಗ್ರಾಹಕರಿಗೆ ಉಚಿತ ವಿದ್ಯುತ್ ಕೊಟ್ಟಿದ್ದೇವೆ. ಇದಕ್ಕಾಗಿ ಬಜೆಟ್ ನಲ್ಲೇ ಅನುದಾನ ನೀಡಲಾಗಿದೆ. ರೈತರ ಪಂಪ್ ಸೆಟ್ ಗಳಿಗೆ ಉಚಿತ ವಿದ್ಯುತ್ ಪೂರೈಸಲು 21,000 ಕೋಟಿ ರೂ. ಅನುದಾನ ಕೊಡುತ್ತಿದ್ದೇವೆ. ನಮ್ಮ ಅಧಿಕಾರಿಗಳು, ಇಂಜಿನಿಯರ್ ಮತ್ತು ನೌಕರರು ತಂಡವಾಗಿ ಕೆಲಸ ಮಾಡುತ್ತಿದ್ದಾರೆ. ಯಾವುದೇ ಸಮಸ್ಯೆ ಎದುರಾದರೆ ಶೀಘ್ರವೇ ಪರಿಹಾರ ನೀಡಲಿದ್ದಾರೆ ಎಂದು ಹೇಳಿದರು.

ಇಂಧನ ಇಲಾಖೆಯಲ್ಲಿ ಮೂಲ ಸೌಕರ್ಯ ಹೆಚ್ಚಿಸುವ ಕಾರ್ಯ ವೇಗವಾಗಿ ನಡೆಯುತ್ತಿದೆ. 120 ವಿದ್ಯುತ್ ಉಪಕೇಂದ್ರಗಳನ್ನು ಸ್ಥಾಪಿಸಿದ್ದೇವೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಯೋಜನೆಗಳು ಜಾರಿಯಾಗಲಿವೆ. ಆ ಮೂಲಕ ವಿದ್ಯುತ್ ಪೂರೈಕೆಯನ್ನು ಸಮರ್ಪಕಗೊಳಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಹಬ್ಬದ ಸಂದರ್ಭದಲ್ಲೆ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ : ರಾಜ್ಯದಲ್ಲಿ ಗಗನಕ್ಕೇರಿದ ಅಕ್ಕಿ, ತೊಗರಿಬೇಳೆ ಬೆಲೆ!GOOD NEWS : 'KSRTC' ಯಿಂದ ದಸರಾ ಸಂಭ್ರಮಕ್ಕೆ ಸ್ಪೆಷಲ್ ಗಿಫ್ಟ್: 3,000ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಸಂಚಾರ!ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!