ಚಿಕ್ಕಬಳ್ಳಾಪುರ: ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜೆಡಿಎಸ್ ನಿಂದ ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ದೂರು ನೀಡಲಾಗಿದೆ.
ಜೆಡಿಎಸ್ ಪಕ್ಷದ ಕಾನೂನು ಘಟಕ, ಸಾಮಾಜಿಕ ಜಾಲತಾಣ ವಿಭಾಗದಿಂದ ದೂರು ನೀಡಲಾಗಿದೆ. ಕೆಂಪೇಗೌಡರ ಜಯಂತಿ ಆಚರಣೆಯ ವೇಳೆ ಶಾಸಕ ಪ್ರದೀಪ್ ಈಶ್ವರ್ ಪ್ರಚೋದನಾಕಾರಿಯಾಗಿ ವರ್ತಿಸಿದ್ದಾರೆ. ಮೀಸೆ ತಿರುಗಿಸಿ ತೊಡೆ ತಟ್ಟಿ ಜನರನ್ನು ಕೆರಳಿಸಿದ್ದಾರೆ. ಜಾತಿಯ ಹೆಸರಲ್ಲಿ ವೈಷಮ್ಯ ಮೂಡಿಸುವಂತಹ ಹೇಳಿಕೆ ನೀಡಿದ್ದಾರೆ. ಸಮಾಜದ ಶಾಂತಿ ಕದಡುವ ರೀತಿಯಲ್ಲಿ ವರ್ತಿಸಿದ್ದಾರೆ ಎಂದು ಆರೋಪಿಸಿದ್ದು, ಪ್ರದೀಪ್ ಈಶ್ವರ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ದೂರು ನೀಡಲಾಗಿದೆ.