LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಿಡದಿ ಟೌನ್ ಶಿಪ್ ಗೆ ಭೂಮಿ ಕಸಿಯುವುದಿಲ್ಲ: ಸಿಎಂ ಡಿಕೆ ಸಂಪುಟ ಸಹೋದ್ಯೋಗಿಗಳಿಂದ ಭಿನ್ನ ಅಭಿಪ್ರಾಯ

ಬೆಂಗಳೂರು: ಬಿಡದಿ ಟೌನ್ ಶಿಪ್ ಯೋಜನೆಯನ್ನು ಮಾಡಿಯೇ ತೀರುತ್ತೇವೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸ್ಪಷ್ಟನೆ ನಡುವೆ ಅವರ ಸಂಪುಟದ ಸಹೋದ್ಯೋಗಿಗಳು ಭಿನ್ನಾ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಭೂಮಿ ಬಿಟ್ಟುಕೊಡಲು ರೈತರು ಒಪ್ಪಿದರೆ ಮಾತ್ರ ಯೋಜನೆ ಜಾರಿಗೆ ಸಿದ್ಧವೆಂದು ಡಿಸಿಎಂ ಡಾ.ಜಿ. ಪರಮೇಶ್ವರ್, ಸಚಿವ ಸತೀಶ್ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಹೇಳಿಕೆ ಬಳಿಕ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಕೂಡ ದನಿಗೂಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಭೂ ಸ್ವಾದಿನ ನಿಯಮಗಳು ಬಹಳ ಸ್ಪಷ್ಟವಾಗಿದ್ದು, ಬಲವಂತವಾಗಿ ಭೂಮಿ ವಶಪಡಿಸಿಕೊಳ್ಳಲು ಸಾಧ್ಯವಿಲ್ಲ. ರೈತರು ಸ್ವ ಇಚ್ಛೆಯಿಂದ ಭೂಮಿಯನ್ನು ಬಿಟ್ಟುಕೊಟ್ಟರೆ ಮಾತ್ರ ಪರಿಗಣಿಸಬೇಕಾಗುತ್ತದೆ ಎಂದು ಹೇಳಿದ್ದಾರೆ.

ದೇವನಹಳ್ಳಿ ಸಮೀಪ ಚನ್ನರಾಯಪಟ್ಟಣ ಗ್ರಾಮಗಳ ರೈತರು ವಿರೋಧ ವ್ಯಕ್ತಪಡಿಸಿದ್ದ ಹಿನ್ನೆಲೆಯಲ್ಲಿ ಏರೋ ಸ್ಪೇಸ್ ಪಾರ್ಕ್ ಗಾಗಿ ಭೂ ಸ್ವಾಧೀನವನ್ನು ಸರ್ಕಾರ ಕೈಬಿಟ್ಟಿತು. ಈ ಪ್ರದೇಶವನ್ನು ಶಾಶ್ವತ ಕೃಷಿ ವಲಯ ಎಂದು ಘೋಷಣೆ ಮಾಡಲಾಗಿದೆ. ಈಗ ಕೆಲವು ರೈತರು ಭೂಮಿ ಬಿಟ್ಟುಕೊಡಲು ಆಸಕ್ತಿ ತೋರಿಸಿದ್ದು, ಇದರ ಬಗ್ಗೆ ಪರಿಶೀಲಿಸಿ ಸರ್ಕಾರ ಸೂಕ್ತ ತೀರ್ಮಾನ ಕೈಗೊಳ್ಳುತ್ತದೆ ಎಂದು ಹೇಳಿದ್ದಾರೆ.

ಬಿಡದಿ ಟೌನ್ ಶಿಪ್ ವಿವಾದದ ಕುರಿತು ಪ್ರತಿಕ್ರಿಯೆ ನೀಡಿರುವ ಸಚಿವ ಸತೀಶ್ ಜಾರಕಿಹೊಳಿ, ಭೂಮಿ ಬಿಟ್ಟುಕೊಡಲು ಒಪ್ಪದೆ ರೈತರು ಪ್ರತಿಭಟನೆ ನಡೆಸಿದ್ದಾರೆ. ಇದನ್ನು ಮಾಧ್ಯಮಗಳಲ್ಲಿ ಗಮನಿಸಿದ್ದೇವೆ. ಹೈಕಮಾಂಡ್ ನಾಯಕರ ಗಮನಕ್ಕೂ ಬಂದಿದೆ. ಸಂಪುಟದಲ್ಲಿ ಟೌನ್ ಶಿಪ್ ಬಗ್ಗೆ ಚರ್ಚೆಯೇ ನಡೆದಿಲ್ಲ ಎಂದು ಹೇಳಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಇನ್ಮೇಲೆ ಡೆಡ್ ಬಾಡಿ ಮೇಲೆ ಬಿಲ್ ವಸೂಲಿ ಬಂದ್ : ಮೃತದೇಹ ಹಸ್ತಾಂತರಕ್ಕೆ ಶೀಘ್ರ ಹೊಸ ಪಾಲಿಸಿ!ಬೆಂಗಳೂರಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯ ಬರ್ಬರ ಹತ್ಯೆ!BREAKING : ಖಾಸಗಿ ಆಸ್ಪತ್ರೆಗಳ ಕಳ್ಳಾಟಕ್ಕೆ ಬ್ರೇಕ್ : ಇನ್ಮುಂದೆ ರಶೀದಿಯಲ್ಲಿ ಔಷಧಗಳ ಬೆಲೆ ನಮೂದು ಕಡ್ಡಾಯ!🌺🌼🔱 ನವರಾತ್ರಿ ಮೊದಲನೇ ದಿನ – ಶ್ರೀ ಶೈಲಪುತ್ರಿ ದೇವಿ ಆರಾಧನೆ 🔱🌼🌺BIG NEWS : ಹಬ್ಬದ ಸಂದರ್ಭದಲ್ಲೆ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ : ರಾಜ್ಯದಲ್ಲಿ ಗಗನಕ್ಕೇರಿದ ಅಕ್ಕಿ, ತೊಗರಿಬೇಳೆ ಬೆಲೆ!GOOD NEWS : 'KSRTC' ಯಿಂದ ದಸರಾ ಸಂಭ್ರಮಕ್ಕೆ ಸ್ಪೆಷಲ್ ಗಿಫ್ಟ್: 3,000ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಸಂಚಾರ!ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!