LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅಶ್ಲೀಲ ಮೆಸೇಜ್ ಕಳುಹಿಸಿದ್ದ ಯುವಕನಿಗೆ ಸಾರ್ವಜನಿಕರ ಎದುರೇ ಚಪ್ಪಲಿಯಲ್ಲಿ ಹೊಡೆದ ಮಹಿಳೆ: ವಿಡಿಯೋ ವೈರಲ್

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮೊಬೈಲ್ ಹಿಡಿದು ಮಹಿಳೆಯರಿಗೆ ಅಶ್ಲೀಲ ಮೆಸೇಜ್ ಹಾಗೂ ವಿಡಿಯೋ ಕಾಲ್ ಮೂಲಕ ಲೈಂಗಿಕ ಕಿರುಕುಳ ನೀಡುತ್ತಿದ್ದ ವಿಕೃತ ಕಾಮಿಯೊಬ್ಬನಿಗೆ ಮಹಿಳೆಯೊಬ್ಬರು ಸಾರ್ವಜನಿಕವಾಗಿ ಚಪ್ಪಲಿಯಿಂದ ತಳಿಸಿದ ಹೈ-ಡ್ರಾಮಾ ಬೆಳಕಿಗೆ ಬಂದಿದೆ ಸೋಷಿಯಲ್ ಮೀಡಿಯಾದಲ್ಲಿ ಈ ಧರ್ಮದೇಟಿನ ವಿಡಿಯೋ ಈಗ ಭಾರಿ ವೈರಲ್ ಆಗುತ್ತಿದೆ.ಪದೇ ಪದೇ ಮೆಸೇಜ್ ಹಾಕಿ ಮಂಚಕ್ಕೆ ಕರೆಯುತ್ತಿದ್ದ ರೋಮಿಯೋನಿಗೆ, ಆಕೆಯ ರುದ್ರಾವತಾರ ಕಂಡು ಜೀವವೇ ಬಾಯಿಗೆ ಬಂದಂತಾಗಿದೆ.

ಏನಿದು ಘಟನೆ? ಮಂಚಕ್ಕೆ ಕರೆದವನಿಗೆ ಮಕಾಡೆ ಮಲಗಿಸಿದ್ದು ಹೀಗೆ:

ಅಶ್ಲೀಲ ಮೆಸೇಜ್ ಕಿರುಕುಳ: ಬೆಂಗಳೂರಿನ ಈ ಅಸಾಮಿ ಹಲವು ಮಹಿಳೆಯರಿಗೆ ಸತತವಾಗಿ ಅಶ್ಲೀಲ ಸಂದೇಶಗಳನ್ನು ಕಳುಹಿಸುತ್ತಾ, ಹಾಸಿಗೆ ಹಂಚಿಕೊಳ್ಳುವಂತೆ (ಲೈಂಗಿಕ ಕಿರುಕುಳ) ಪೀಡಿಸುತ್ತಿದ್ದ ಎನ್ನಲಾಗಿದೆ.

ಆತನ ವಿಕೃತ ಮೆಸೇಜ್‌ಗಳಿಂದ ಬೇಸತ್ತ ಮಹಿಳೆಯೊಬ್ಬರು ಸುಮ್ಮನೆ ಕೂರದೆ, ಆತನಿಗೆ ತಕ್ಕ ಪಾಠ ಕಲಿಸಲು ಪ್ಲಾನ್ ಮಾಡಿದ್ದಾರೆ. ತಮ್ಮ ಸಂಗಡಿಗರೊಂದಿಗೆ ತೆರಳಿ ಆತನನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.

ಸಿಕ್ಕಿಬಿದ್ದ ಕಾಮಿಗೆ ರಸ್ತೆಯಲ್ಲೇ ಚಪ್ಪಲಿ ತಗೆದುಕೊಂಡು ಸರಿಯಾಗಿ ಪೂಜೆ ಮಾಡಿದ್ದಾರೆ. “ನಿನ್ ಜೊತೆ ಮಲ್ಕೋಬೇಕಾ ನಾನು? ಎಷ್ಟಿಟ್ಟಿದ್ದೀಯಾ ದುಡ್ಡು? ಪದೇ ಪದೇ ನಂಗೆ ಮೆಸೇಜ್ ಮಾಡ್ತಾವ್ನೆ ಇವನ ವ್ಯಾಟ್ಸಪ್ ಚೆಕ್ ಮಾಡಿ, ಎಷ್ಟು ಹುಡುಗಿಯರಿಗೆ ಹೀಗೆ ಮಾಡಿದ್ದಾನೆ ನೋಡಿ” ಎಂದು ಸಾರ್ವಜನಿಕರ ಎದುರೇ ಬೆವರಿಳಿಸಿದ್ದಾರೆ

ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್

ಮೊಬೈಲ್ ಸಿಕ್ಕ ತಕ್ಷಣ ಮಹಿಳೆಯರಿಗೆ ಕಿರುಕುಳ ನೀಡುವ ಇಂತಹ ವಿಕೃತ ಮನಸ್ಸುಗಳಿಗೆ ಈ ಮಹಿಳೆಯ ಧೈರ್ಯ ಮತ್ತು ಸಮಯಪ್ರಜ್ಞೆ ಒಂದು ಸೂಕ್ತ ಪಾಠವಾಗಿದೆ. ಸದ್ಯ ಈ ವಿಡಿಯೋ ಇಂಟರ್ನೆಟ್‌ನಲ್ಲಿ ಧೂಳೆಬ್ಬಿಸುತ್ತಿದ್ದು, ಸಾರ್ವಜನಿಕರು ಮಹಿಳೆಯ ಧೈರ್ಯಕ್ಕೆ ಭೇಷ್ ಎನ್ನುತ್ತಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?