LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಾಜಿ ಸಿಎಂ ಸಿದ್ದರಾಮಯ್ಯ ಬಳಿ ಕಣ್ಣೀರಿಟ್ಟ ಶಾಸಕ ಪ್ರದೀಪ್ ಈಶ್ವರ್

ಬೆಂಗಳೂರು: ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಕಾರಿನ ಮೇಲೆ ಚಪ್ಪಲಿ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಪ್ರದೀಪ್ ಈಶ್ವರ್ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ನೋವು ತೋಡಿಕೊಂಡಿದ್ದಾರೆ.

ಇಂದು ಬೆಳಿಗ್ಗೆ ಮುಖ್ಯಮಂತ್ರಿ ಡಿ.ಕಿ.ಶಿವಕುಮಾರ್ ಅವರನ್ನು ಭೇಟಿಯಾಗಿ, ಘಟನೆಗಳ ಬಗ್ಗೆ ವಿವರಿಸಿದ ಪ್ರದೀಪ್ ಈಶ್ವರ್ ಗೆ ಸಿಎಂ ಡಿ.ಕೆ.ಶಿವಕುಮಾರ್ ಧೈರ್ಯ ತುಂಬಿದರು. ಬಳಿಕ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಪ್ರದೀಪ್ ಈಶ್ವರ್ ಭೇಟಿಯಾಗಿದ್ದಾರೆ.

ಸಿದ್ದರಾಮಯ್ಯ ಅವರನ್ನು ಭೇಟುಯಾದ ಪ್ರದೀಪ್ ಈಶ್ವರ್, ಚಿಕ್ಕಬಳ್ಳಾಪುರದಲ್ಲಿ ನಡೆದ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ತನ್ನ ಕಾರಿನ ಮೇಲೆ ಬಿಜೆಪಿ, ಜೆಡೊಎಸ್ ಕಾರ್ಯಕರ್ತರು ಚಪ್ಪಲಿ ಎಸಿದ್ದಾರೆ. ಅಷ್ಟೇ ಅಲ್ಲನನ್ನ ಕುಟುಂಬವನ್ನು ನಿಂದಿಸಿ ಮಾತನಾಡಿದ್ದಾರೆ ಎಂದು ಕಣ್ಣೀರಿಟ್ಟಿದ್ದಾರೆ.

ಈ ವೇಳೆ ಸಿದ್ದರಾಮಯ್ಯ, ಪ್ರದೀಪ್ ಈಶ್ವರ್ ಅವರನ್ನು ಸಮಾಧಾನಪಡಿಸಿ, ಧೈರ್ಯ ತುಂಬಿದರು. ರಾಜಕಾರಣದಲ್ಲಿ ಇಂಥಹ ಘಟನೆಗಳು ಸಾಮಾನ್ಯ. ಇವುಗಳನ್ನೆಲ್ಲ ಎದುರಿಸಬೇಕು. ಇದರಿಂದ ಧೃತಿಗೆಡಬೇಡಿ, ನಿಮ್ಮೊಂದಿಗೆ ನಾವಿದ್ದೇವೆ ಎಂದು ತಿಳಿಸಿದ್ದಾರೆ.

ಬಳಿಕ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಕರೆ ಮಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಘಟನೆ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ತಿಳಿಸಿದರು. ಪೊಲೀಸರ ಸಮ್ಮುಖದಲ್ಲಿ ಅದರಲ್ಲಿಯೂ ಆಡಳಿತ ಪಕ್ಷದ ಶಾಸಕರಿಗೆ ಈ ರೀತಿ ಆಗಿರುವುದರ ಬಗ್ಗೆ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದರು. ಸಂಬಂಧಪಟ್ಟ ಅಧಿಕಾರಿ ವಿರುದ್ಧ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದಾರೆ.

ಇದೇ ವೇಳೆ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಗೂ ಕರೆ ಮಾಡಿದ ಸಿದ್ದರಾಮಯ್ಯ, ಶಾಸಕರ ಮೇಲೆ ಚಪ್ಪಲಿ ಎಸೆಯುತ್ತುದ್ದರು ಅಧಿಕಾರಿಗಳು ಏನು ಮಾಡುತ್ತಿದ್ದಿ? ಪೊಲೀಸ್ ವರಿಷ್ಠಾಧಿಕಾರಿ ಯಾರು? ಇಂತಹ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿಲ್ಲ ಯಾಕೆ? ಎಂದು ಪ್ರಶ್ನಿಸಿದ್ದಾರೆ. ಪ್ರಕರಣದ ತನಿಖೆಗೆ ಸಮಿತಿ ರಚಿಸುವಂತೆಯೂ ಸೂಚಿಸಿದ್ದಾರೆ.

ಈ ವೇಳೆ ಡಿಸಿಎಂ ಪರಮೇಶ್ವರ್, ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ, ಮಧು ಬಂಗಾರಪ್ಪ ಉಪಸ್ಥಿತರಿದ್ದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?