LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನೇಹಾ ಹಿರೇಮಠ ಕೊಲೆ ಪ್ರಕರಣ: ಆರೋಪಿ ಫಯಾಜ್ ಜಾಮೀನು ವಜಾಗೊಳಿಸಿದ ಹೈಕೋರ್ಟ್ ಪೀಠ

ಧಾರವಾಡ: ಹುಬ್ಬಳ್ಳಿಯ ನೇಹಾ ಹಿರೇಮಠ ಹತ್ಯೆ ಪ್ರಕರಣದ ಆರೋಪಿ ಫಯಾಜ್‌ಗೆ ಮತ್ತೊಮ್ಮೆ ಮುಖಭಂಗವಾಗಿದೆ. ಆರೋಪಿ ಫಯಾಜ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್‌ನ ಧಾರವಾಡ ಪೀಠವು ವಜಾಗೊಳಿಸಿದೆ.

ಈ ಹಿಂದೆ ಹುಬ್ಬಳ್ಳಿಯ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಆರೋಪಿ ಫಯಾಜ್‌ನ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಜಿಲ್ಲಾ ನ್ಯಾಯಾಲಯದ ಆದೇಶ ಪ್ರಶ್ನಿಸಿ ಹಾಗೂ ತನಗೆ ಜಾಮೀನು ಮಂಜೂರು ಮಾಡಬೇಕು ಎಂದು ಕೋರಿ ಆರೋಪಿ ಹೈಕೋರ್ಟ್ ಧಾರವಾಡ ಪೀಠದ ಮೆಟ್ಟಿಲೇರಿದ್ದನು. ಹೈಕೋರ್ಟ್‌ನಲ್ಲಿ ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಪೀಠವು, ಪ್ರಕರಣದ ಗಾಂಭೀರ್ಯತೆಯನ್ನು ಪರಿಗಣಿಸಿ ಆರೋಪಿಗೆ ಯಾವುದೇ ಕಾರಣಕ್ಕೂ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದು, ಅರ್ಜಿಯನ್ನು ವಜಾಗೊಳಿಸಿದೆ.

ಕೊಲೆಯಾದ ವಿದ್ಯಾರ್ಥಿನಿ ನೇಹಾ ಹಿರೇಮಠ ಪರವಾಗಿ ಹಿರಿಯ ನ್ಯಾಯವಾದಿ ರಾಘವೇಂದ್ರ ಮುತ್ತಗಿ ಅವರು ವಾದ ಮಂಡಿಸಿದರು. ಆರೋಪಿ ಮಾಡಿರುವ ಕೃತ್ಯ ಅತ್ಯಂತ ಕ್ರೂರವಾಗಿದ್ದು, ಆತನಿಗೆ ಜಾಮೀನು ನೀಡಿದರೆ ಸಮಾಜಕ್ಕೆ ತಪ್ಪು ಸಂದೇಶ ರವಾನೆಯಾಗುತ್ತದೆ ಮತ್ತು ಸಾಕ್ಷ್ಯ ನಾಶಪಡಿಸುವ ಸಾಧ್ಯತೆಯಿದೆ ಎಂದು ನ್ಯಾಯಾಲಯದ ಗಮನಕ್ಕೆ ತಂದರು. ಈ ವಾದವನ್ನು ಪುರಸ್ಕರಿಸಿದ ನ್ಯಾಯಾಲಯ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.

ಮತ್ತೊಂದೆಡೆ ಕಾಲೇಜು ಆವರಣದಲ್ಲೇ ಸಾರ್ವಜನಿಕವಾಗಿ ನಡೆದಿದ್ದ ಈ ಭೀಕರ ಕೊಲೆ ಪ್ರಕರಣದ ತನಿಖೆಯನ್ನು ಸಿಐಡಿ ಚುರುಕುಗೊಳಿಸಿದೆ.


2024ರ ಏಪ್ರಿಲ್ 18 ರಂದು ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ 24 ವರ್ಷದ ಎಂಸಿಎ ವಿದ್ಯಾರ್ಥಿನಿ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ ನೇಹಾ ಹಿರೇಮಠ ಅವರನ್ನು ಆರೋಪಿ ಫಯಾಜ್ ಅಡ್ಡಗಟ್ಟಿ, ಪ್ರೀತಿಯನ್ನು ನಿರಾಕರಿಸಿದಳು ಎಂಬ ಕಾರಣಕ್ಕೆ ನೇಹಾಗೆ ಚಾಕುವಿನಿಂದ ಮನಬಂದಂತೆ ಇರಿದು ಹತ್ಯೆಗೈದಿದ್ದ. 10 ಕ್ಕೂ ಹೆಚ್ಚು ಬಾರಿ ಇರಿತಕ್ಕೊಳಗಾದ ನೇಹಾ ಕಾಲೇಜು ಆವರಣದಲ್ಲಿಯೇ ಸಾವನ್ನಪ್ಪಿದ್ದಳು. ಘಟನೆ ಬಳಿಕ ಸ್ಥಳದಿಂದ ಪರಾರಿಯಾಗಿದ್ದ ಫಯಾಜ್ ನನ್ನು ಕೆಲವೇ ಗಂಟೆಗಳಲ್ಲಿ ಕಾರ್ಯಾಚರಣೆ ನಡೆಸಿ ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?