LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯ ಸರ್ಕಾರದಿಂದ ಹಲವು ಐಎಎಸ್ ಅಧಿಕಾರಿಗಳ ವರ್ಗಾವಣೆ: ಯಾರಿಗೆ ಯಾವ ಹುದ್ದೆ? ಸಂಪೂರ್ಣ ಪಟ್ಟಿ ಇಲ್ಲಿದೆ

ಬೆಂಗಳೂರು: ರಾಜ್ಯದಲ್ಲಿ ಐಎಎಸ್‌ (IAS) ಅಧಿಕಾರಿಗಳ ವರ್ಗಾವಣೆ ಪರ್ವ ಮುಂದುವರೆದಿದೆ ಜೂನ್‌ 30ರಂದು ರಾಜ್ಯ ಸರ್ಕಾರವು ಮಹತ್ವದ ನಿರ್ಧಾರ ಕೈಗೊಂಡಿದ್ದು, ಸ್ಥಳ ನಿಯೋಜನೆ ನಿರೀಕ್ಷೆಯಲ್ಲಿದ್ದ ನಾಲ್ವರು ಹಿರಿಯ ಐಎಎಸ್‌ ಅಧಿಕಾರಿಗಳನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಹೊಸ ಹುದ್ದೆಗಳಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ (DPAR) ಅಧೀನ ಕಾರ್ಯದರ್ಶಿ ಟಿ. ಮಹಾಂತೇಶ್ ಅವರು ರಾಜ್ಯಪಾಲರ ಹೆಸರಿನಲ್ಲಿ ಈ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದ್ದಾರೆ.

ಯಾರಿಗೆ ಯಾವ ಹುದ್ದೆ? ಲಿಸ್ಟ್ ಇಲ್ಲಿದೆ:

1.ಅಭಿರಾಮ್ ಜಿ. ಶಂಕರ್ (2011ರ ಬ್ಯಾಚ್):

ಹೊಸ ಹುದ್ದೆ: ಕರ್ನಾಟಕ ಮೈನಿಂಗ್ ಎನ್ವಿರಾನ್‌ಮೆಂಟ್ ರೆಸ್ಟೋರೇಶನ್ ಕಾರ್ಪೊರೇಷನ್ (KMERC) ವ್ಯವಸ್ಥಾಪಕ ನಿರ್ದೇಶಕರು (MD).

ವಿವರ: ಜೂನ್ 30ರಂದು ವಯೋನಿವೃತ್ತಿ ಹೊಂದುತ್ತಿರುವ ಐಎಫ್‌ಎಸ್ ಅಧಿಕಾರಿ ಡಾ. ಸಂಜಯ್ ಎಸ್. ಬಿಜ್ಜೂರ್ ಅವರಿಂದ ತೆರವಾಗುತ್ತಿರುವ ಸ್ಥಾನಕ್ಕೆ ಇವರನ್ನು ನಿಯೋಜಿಸಲಾಗಿದೆ.

2.ಡಾ. ಅವಿನಾಶ್ ಮೆನನ್ ರಾಜೇಂದ್ರನ್ (2013ರ ಬ್ಯಾಚ್):

ಹೊಸ ಹುದ್ದೆ: ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ (IT-BT) ಇಲಾಖೆಯ ನಿರ್ದೇಶಕರು.

ಹೆಚ್ಚುವರಿ ಜವಾಬ್ದಾರಿ: ಕರ್ನಾಟಕ ರಾಜ್ಯ ಎಲೆಕ್ಟ್ರಾನಿಕ್ಸ್ ಅಭಿವೃದ್ಧಿ ನಿಗಮ (KEONICS) ವ್ಯವಸ್ಥಾಪಕ ನಿರ್ದೇಶಕ (MD) ಹುದ್ದೆಯ ಹೆಚ್ಚುವರಿ ಪ್ರಭಾರವನ್ನೂ ಇವರಿಗೆ ವಹಿಸಲಾಗಿದೆ.

3.ಯೋಗೀಶ್ ಎ.ಎಂ. (2013ರ ಬ್ಯಾಚ್):

ಹೊಸ ಹುದ್ದೆ: ಕೃಷಿ ಮಾರುಕಟ್ಟೆ ಇಲಾಖೆಯ ನಿರ್ದೇಶಕರು.

ವಿವರ: ಈ ನೇಮಕಾತಿಯ ಮೂಲಕ ಈವರೆಗೆ ಹೆಚ್ಚುವರಿ ಹೊಣೆಗಾರಿಕೆ ಹೊಂದಿದ್ದ ಐಎಎಸ್ ಅಧಿಕಾರಿ ಪ್ರಸನ್ನ ಹೆಚ್. ಅವರನ್ನು ಆ ಜವಾಬ್ದಾರಿಯಿಂದ ಬಿಡುಗಡೆಗೊಳಿಸಲಾಗಿದೆ.

4.ದಿವ್ಯಾ ಪ್ರಭು ಜಿ.ಆರ್.ಜೆ. (2014ರ ಬ್ಯಾಚ್):

ಹೊಸ ಹುದ್ದೆ: ಗ್ರಾಮೀಣಾಭಿವೃದ್ಧಿ ಆಯುಕ್ತರು (Commissioner for Rural Development).

ವಿವರ: ಈವರೆಗೆ ಈ ಹುದ್ದೆಯ ಹೆಚ್ಚುವರಿ ಪ್ರಭಾರದಲ್ಲಿದ್ದ ಡಾ. ಅರುಂಧತಿ ಚಂದ್ರಶೇಖರ್ ಅವರನ್ನು ಈ ಜವಾಬ್ದಾರಿಯಿಂದ ಮುಕ್ತಗೊಳಿಸಲಾಗಿದೆ.

ನಿಯಮ 12ರ ಅಡಿ ಹೊಸ ಘೋಷಣೆ:

ವರ್ಗಾವಣೆಯ ಜೊತೆಗೆ, ಪುರಸಭೆ ಆಡಳಿತ ನಿರ್ದೇಶಕರ ಕ್ಯಾಡರ್ ಹುದ್ದೆಗೆ ಸಮಾನವಾದ ಸ್ಥಾನಮಾನ ಮತ್ತು ಜವಾಬ್ದಾರಿಗಳನ್ನು ಹೊಂದಿರುವ ಕೆಲವು ಪ್ರಮುಖ ಹುದ್ದೆಗಳನ್ನು ಐಎಎಸ್ (ವೇತನ) ನಿಯಮಗಳು–2016ರ ನಿಯಮ 12ರ ಅಡಿಯಲ್ಲಿ ‘ಸಮಾನ ಹುದ್ದೆಗಳು’ ಎಂದು ರಾಜ್ಯ ಸರ್ಕಾರ ಅಧಿಕೃತವಾಗಿ ಘೋಷಿಸಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಇನ್ಮೇಲೆ ಡೆಡ್ ಬಾಡಿ ಮೇಲೆ ಬಿಲ್ ವಸೂಲಿ ಬಂದ್ : ಮೃತದೇಹ ಹಸ್ತಾಂತರಕ್ಕೆ ಶೀಘ್ರ ಹೊಸ ಪಾಲಿಸಿ!ಬೆಂಗಳೂರಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯ ಬರ್ಬರ ಹತ್ಯೆ!BREAKING : ಖಾಸಗಿ ಆಸ್ಪತ್ರೆಗಳ ಕಳ್ಳಾಟಕ್ಕೆ ಬ್ರೇಕ್ : ಇನ್ಮುಂದೆ ರಶೀದಿಯಲ್ಲಿ ಔಷಧಗಳ ಬೆಲೆ ನಮೂದು ಕಡ್ಡಾಯ!🌺🌼🔱 ನವರಾತ್ರಿ ಮೊದಲನೇ ದಿನ – ಶ್ರೀ ಶೈಲಪುತ್ರಿ ದೇವಿ ಆರಾಧನೆ 🔱🌼🌺BIG NEWS : ಹಬ್ಬದ ಸಂದರ್ಭದಲ್ಲೆ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ : ರಾಜ್ಯದಲ್ಲಿ ಗಗನಕ್ಕೇರಿದ ಅಕ್ಕಿ, ತೊಗರಿಬೇಳೆ ಬೆಲೆ!GOOD NEWS : 'KSRTC' ಯಿಂದ ದಸರಾ ಸಂಭ್ರಮಕ್ಕೆ ಸ್ಪೆಷಲ್ ಗಿಫ್ಟ್: 3,000ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಸಂಚಾರ!ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!