LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಬಂಡಿಪುರ, ನಾಗರಹೊಳೆ ಸಫಾರಿ ಆರಂಭ: ಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಬಂಡಿಪುರ, ನಾಗರಹೊಳೆ ಸಫಾರಿ ಆರಂಭಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಇಂದು ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿಯ ಸ್ಥಾಯಿ ಸಮಿತಿಯ ಸಭೆ ನಡೆಸಿ, ಅಧಿಕಾರಿಗಳಿಂದ ಮಾಹಿತಿ ಪಡೆದು ಅಗತ್ಯ ಸೂಚನೆಗಳನ್ನು ನೀಡಲಾಯಿತು.

 ಸಭೆಯಲ್ಲಿ ಅಧಿಕಾರಿಗಳು ನೀಡಿದ ಮಾಹಿತಿಯಂತೆ, ಬಂಡಿಪುರ ಮತ್ತು ನಾಗರಹೊಳೆ ಪರಿಸರ ಪ್ರವಾಸೋದ್ಯಮ ಹಾಗೂ ಸಫಾರಿ ಪ್ರದೇಶಗಳಲ್ಲಿ ಹುಲಿಗಳು ಮತ್ತು ಚಿರತೆಗಳ ಸಾಂದ್ರತೆಯು, ಮಾನವ–ವನ್ಯಜೀವಿ ಸಂಘರ್ಷ ಹೆಚ್ಚಿರುವ ಪ್ರದೇಶಗಳಿಗಿಂತ ಅಧಿಕವಾಗಿದೆ. ಈ ಹಿನ್ನೆಲೆಯಲ್ಲಿ ಪ್ರವಾಸಿಗರ ಸುರಕ್ಷತೆಗೆ ಯಾವುದೇ ಧಕ್ಕೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಹಾಗೂ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಸಫಾರಿ ಚಟುವಟಿಕೆಗಳನ್ನು ಆರಂಭಿಸಲು ಸಮ್ಮತಿಸಲಾಗಿದೆ.

 ಹಾಗೆಯೇ ಮೇಕೆದಾಟು ಯೋಜನೆಗೆ ಸಣ್ಣಪುಟ್ಟ ನೆಪಗಳನ್ನು ಮುಂದಿಟ್ಟು ಸುಪ್ರೀಂಕೋರ್ಟ್‌ನಲ್ಲಿ ತಕರಾರು ಮಾಡಲು ತಮಿಳುನಾಡು ಪ್ರಯತ್ನಿಸುತ್ತಿದೆ. ಈ ತಾಂತ್ರಿಕ ಸಮಸ್ಯೆಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿ, ಪರಿಣಾಮಕಾರಿಯಾಗಿ ಬಗೆಹರಿಸಲು ಅಧಿಕಾರಿಗಳಿಗೆ ತಿಳಿಸಲಾಗಿದೆ.

 ಸಾರ್ವಜನಿಕರ ಸುರಕ್ಷತೆಗೆ ಆದ್ಯತೆ ನೀಡಿ ಅಪಾಯಕಾರಿಯಾಗಿರುವ ಮರಗಳು ಮತ್ತು ಕೊಂಬೆಗಳನ್ನು ಗುರುತಿಸಿ, ಅವುಗಳ ತೆರವಿಗೆ ತುರ್ತು ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಇಲಾಖೆಗೆ ಆದೇಶಿಸಲಾಗಿದೆ.

ಈ ಸಂದರ್ಭದಲ್ಲಿ ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆಯ ರಾಯಭಾರಿ ಅನಿಲ್‌ ಕುಂಬ್ಳೆ ಅವರು ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?