LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅಂತಾರಾಷ್ಟ್ರೀಯ ಚಿತ್ರ ಕಲಾವಿದ ಕೆ.ಟಿ.ಶಿವಪ್ರಸಾದ್ ಇನ್ನಿಲ್ಲ

ಬೆಂಗಳೂರು: ಕರ್ನಾಟಕದ ಹೆಮ್ಮೆಯ ಅಂತಾರಾಷ್ಟ್ರೀಯ ಚಿತ್ರ ಕಲಾವಿದ ಕೆ.ಟಿ. ಶಿವಪ್ರಸಾದ್ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರಿಗೆ 78 ವರ್ಷ ವಯಸ್ಸಾಗಿತ್ತು.

ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಕೆ.ಟಿ.ಶಿವಪ್ರಸಾದ್ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾರೆ.

ತಳಸಮುದಾಯಗಳ, ರೈತರ ಧ್ವನಿಯಾಗಿ ಕಲೆಯ ಮೂಲಕವೇ ಕ್ರಾಂತಿ ಸೃಷ್ಟಿಸಿದ್ದ ಅಪರೂಪದ ಪ್ರತಿಭೆ ಅಗಲಿರುವುದು ಭಾರತೀಯ ಕಲಾ ರಂಗದ ಸುವರ್ಣ ಅಧ್ಯಾಯವೊಂದು ಕೊನೆಗೊಂಡಂತಾಗಿದೆ.

1947ರಲ್ಲಿ ಕೊಡಗಿನ ಮಡಿಕೇರಿ (ಮರ್ಕಾರ) ತಾಲೂಕಿನ ಬಡ ಕೃಷಿ ಕುಟುಂಬವೊಂದರಲ್ಲಿ ಜನಿಸಿದ ಶಿವಪ್ರಸಾದ್ ಅವರಿಗೆ ಬಾಲ್ಯದಿಂದಲೇ ಚಿತ್ರಕಲೆಯತ್ತ ಅಪಾರ ಆಸಕ್ತಿ. ಆದರೆ ಆ ಕಾಲದಲ್ಲಿ ಚಿತ್ರಕಲೆಗೆ ಅಷ್ಟಾಗಿ ಮನ್ನಣೆ ಇರದ ಕಾರಣ, ಕುಟುಂಬದ ಇಚ್ಛೆಯಂತೆ ಅವರು ಇಂಜಿನಿಯರಿಂಗ್ ಕಾಲೇಜು ಸೇರಬೇಕಾಯಿತು. ಆದರೆ ಕಲೆಯ ಮೇಲಿದ್ದ ಅದಮ್ಯ ಒಲವಿನಿಂದಾಗಿ ಇಂಜಿನಿಯರಿಂಗ್ ಅಧ್ಯಯನವನ್ನು ಅರ್ಧಕ್ಕೆ ಬಿಟ್ಟು, ಮುಂಬೈನ ಪ್ರತಿಷ್ಠಿತ ‘ಸರ್ ಜೆ.ಜೆ. ಸ್ಕೂಲ್ ಆಫ್ ಆರ್ಟ್’ ಸೇರಿದ್ದು, ಅಲ್ಲಿ 1973ರಲ್ಲಿ ಚಿತ್ರಕಲೆಯಲ್ಲಿ ಡಿಪ್ಲೊಮಾ ಪದವಿ ಪಡೆದುಕೊಂಡರು.

ಬಳಿಕ ಕೇವಲ ಕೂತು ಬಣ್ಣ ಹಚ್ಚುವ ಕಲಾವಿದರಾಗದೇ, ಕರ್ನಾಟಕದ ಶೋಷಿತ, ಬಡ ಕೃಷಿ ಕಾರ್ಮಿಕರ ಸಬಲೀಕರಣಕ್ಕಾಗಿ ಸೋಷಿಯಲಿಸ್ಟ್, ದಲಿತ ಮತ್ತು ರೈತ ಸಂಘಟನೆಗಳ ಮೂಲಕ ದೀರ್ಘಕಾಲ ಸಕ್ರಿಯ ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದರು. ಅವರ ಈ ಸಾಮಾಜಿಕ ಕಳಕಳಿ ಅವರ ಕಲಾಕೃತಿಗಳಲ್ಲೂ ಅರಳುತ್ತಿದ್ದವು.

ಬ್ರಿಟನ್‌ನ ಶ್ರೇಷ್ಠ ಮಾಡರ್ನಿಸ್ಟ್ ಲುಸಿಯನ್ ಫ್ರಾಯ್ಡ್ ಅವರಿಗೆ ಹೋಲಿಸಲ್ಪಡುತ್ತಿದ್ದ ಕೆ.ಟಿ. ಶಿವಪ್ರಸಾದ್ ಅವರ ಕಲಾಕೃತಿಗಳು ದೇಶ-ವಿದೇಶಗಳಲ್ಲಿ ಅಪಾರ ಪ್ರಶಂಸೆ ಗಳಿಸಿವೆ. ಇಂಜಿನಿಯರಿಂಗ್‌ನ ಅಲ್ಪಾವಧಿಯ ಅನುಭವದಿಂದಾಗಿ ಅವರು ಅತ್ಯುತ್ತಮ ಛಾಯಾಗ್ರಾಹಕ ಹಾಗೂ ಆರ್ಕಿಟೆಕ್ಚರಲ್ ಕನ್ಸಲ್ಟೆಂಟ್ ಆಗಿಯೂ ಗುರುತಿಸಿಕೊಂಡಿದ್ದರು.

1976 ರಿಂದ ಬೆಂಗಳೂರು, ಮೈಸೂರು, ಮುಂಬೈ ಮತ್ತು ನವದೆಹಲಿಗಳಲ್ಲಿ ಇವರ ಹಲವು ಏಕವ್ಯಕ್ತಿ ಪ್ರದರ್ಶನಗಳು ನಡೆದಿವೆ. ಮುಂಬೈನ ಜಹಾಂಗೀರ್ ಆರ್ಟ್ ಗ್ಯಾಲರಿ, ಚೆನ್ನೈನ ಸಾಕ್ಷಿ ಗ್ಯಾಲರಿ ಹಾಗೂ ನವದೆಹಲಿಯ ಆರ್ಟ್ ಟುಡೇಗಳಲ್ಲಿ ಇವರ ಕಲಾ ಪ್ರದರ್ಶನಗಳು ಕಲಾ ರಸಿಕರ ಮನಗೆದ್ದಿದ್ದವು. ಜೊತೆಗೆ ಭೋಪಾಲ್ ಬಿನ್ನಾಲೆ (1988), ಬಾಂಬೆ ಆರ್ಟ್ ಸೊಸೈಟಿ ಶತಮಾನೋತ್ಸವ ಪ್ರದರ್ಶನ (1989) ಹಾಗೂ ಹಾಂಗ್‌ಕಾಂಗ್ ಗ್ಯಾಲರಿಗಳಲ್ಲೂ (1996) ಇವರ ಕಲಾಕೃತಿಗಳು ಪ್ರದರ್ಶನಗೊಂಡಿದ್ದವು. 1996ರಲ್ಲೇ ಜಹಾಂಗೀರ್ ಆರ್ಟ್ ಗ್ಯಾಲರಿಯಲ್ಲಿ ನಡೆದ ಸಮಕಾಲೀನ ಭಾರತೀಯ ಕಲಾವಿದರ ಪ್ರದರ್ಶನದಲ್ಲೂ ಭಾಗವಹಿಸಿದ್ದರು.

ಇನ್ನು ಕಲಾ ಜಗತ್ತಿಗೆ ಇವರು ನೀಡಿದ ಕೊಡುಗೆಯನ್ನು ಗೌರವಿಸಿ ಕರ್ನಾಟಕ ಸರ್ಕಾರವು 2001ರಲ್ಲಿ ಪ್ರತಿಷ್ಠಿತ ‘ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ’ ನೀಡಿ ಗೌರವಿಸಿತ್ತು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶ