LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಎತ್ತಿನಹೊಳೆ ಯೋಜನೆ ವೆಚ್ಚಕ್ಕೆ ಜಲಜೀವನ್ ಮಿಷನ್ ಅಡಿಯಲ್ಲಿ ಹಣ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ: ಈಶ್ವರ್ ಖಂಡ್ರೆ

ನವದೆಹಲಿ: ಬರ ಪೀಡಿತ ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಸುವ ಎತ್ತಿನಹೊಳೆ ಯೋಜನೆಯ ವೆಚ್ಚದ ಪೈಕಿ 4,708.14 ಕೋಟಿ ರೂ.ಗಳನ್ನು ಜಲ ಜೀವನ್ ಮಿಷನ್ ಅಡಿಯಲ್ಲಿ ಭರಿಸುವಂತೆ ಕೇಂದ್ರ ಸರ್ಕಾರಕ್ಕೆ ಕೋರಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ದೆಹಲಿಯ ಅಧಿಕೃತ ಪ್ರವಾಸದಲ್ಲಿರುವ ಅವರು, ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್ ಹಾಗೂ ರಾಜ್ಯ ಸಚಿವ ವಿ. ಸೋಮಣ್ಣ ಅವರನ್ನಿಂದು ಭೇಟಿ ಮಾಡಿ, ನೀರಿನ ಕೊರತೆಯಿರುವ ಕೋಲಾರ, ಚಿಕ್ಕಬಳ್ಳಾಪುರ, ಹಾಸನ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು ಜಿಲ್ಲೆಗಳ ಸುಮಾರು 6,657 ಹಳ್ಳಿಗಳು ಮತ್ತು 38 ಪಟ್ಟಣಗಳ 75.59 ಲಕ್ಷ ಜನರಿಗೆ ಸುಸ್ಥಿರ ಕುಡಿಯುವ ನೀರು ಪೂರೈಸುವ ಈ ಯೋಜನೆಯನ್ನು ಜೆಜೆಎಂ ಯೋಜನೆಯಡಿ ಪರಿಗಣಿಸುವಂತೆ ಕೋರಲಾಗಿದೆ ಎಂದರು.

ಪ್ರಸ್ತುತ ಕರ್ನಾಟಕ ರಾಜ್ಯದ ಜಲಸಂಪನ್ಮೂಲ ಇಲಾಖೆಯ ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತದಿಂದ ಅನುಷ್ಠಾನಗೊಳಿಸಲಾಗುತ್ತಿರುವ ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯನ್ನು ರಾಜ್ಯ ಸರ್ಕಾರವೇ ಬಹುತೇಕ ಪೂರ್ಣಗೊಳಿಸಿದೆ. ಇನ್ನೂ ಸುಮಾರು 9,416.28 ಕೋಟಿ ರೂ. ಉಳಿಕೆ ಕಾಮಗಾರಿಗಳನ್ನು ಪೂರ್ಣಗೊಳಿಸಲು ಕೇಂದ್ರ ಸರ್ಕಾರದಿಂದ ಶೇಕಡ 50ರಷ್ಟು ತನ್ನ ಪಾಲು ನೀಡುವಂತೆ ಕೋರಿ ಈ ಮನವಿ ಪತ್ರ ಸಲ್ಲಿಸಲಾಗಿದೆ ಎಂದು ಈಶ್ವರ ಖಂಡ್ರೆ ವಿವರಿಸಿದರು.

ಪಶ್ಚಿಮ ಘಟ್ಟಗಳ ಮೇಲ್ಭಾಗದಿಂದ ಬರಪೀಡಿತ ಜಿಲ್ಲೆಗಳಿಗೆ 24.01 ಟಿಎಂಸಿ ನೀರನ್ನು ಎತ್ತುವಳಿ ಮಾಡಲು ಎತ್ತಿನಹೊಳೆ ಯೋಜನೆಯನ್ನು ವಿನ್ಯಾಸಗೊಳಿಸಲಾಗಿದ್ದು, ಇದರಲ್ಲಿ 14.056 ಟಿಎಂಸಿ ಕುಡಿಯುವ ನೀರು ಪೂರೈಕೆಗೆ ಸಂಬಂಧಿಸಿದ್ದಾಗಿದೆ. ಈ ಪೈಕಿ ಗ್ರಾಮೀಣ ಪ್ರದೇಶಕ್ಕೆ 8.393 ಟಿಎಂಸಿ ಮತ್ತು ನಗರಕ್ಕೆ 5.538 ಟಿಎಂಸಿ ನೀರು ಪೂರೈಕೆ ಆಗುತ್ತದೆ. 9.953 ಟಿಎಂಸಿ ನೀರನ್ನು ಅಂತರ್ಜಲ ಮರುಪೂರಣಕ್ಕಾಗಿ 527 ಕೆರೆಗಳನ್ನು ತುಂಬಿಸಲುದ್ದೇಶಿಸಲಾಗಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

7 ಜಿಲ್ಲೆಗಳ ಗ್ರಾಮೀಣ ವಸತಿಗಳಿಗೆ 8.393 ಟಿಎಂಸಿ ನೀರನ್ನು ಮೀಸಲಿಡಲಾಗಿದೆ ಎಂಬ ವಿಷಯವನ್ನು ಕೇಂದ್ರ ಸಚಿವರ ಗಮನಕ್ಕೆ ತರಲಾಗಿದೆ. ರಾಜ್ಯ ಸರ್ಕಾರ ಜೆಜೆಎಂ ಅಂದರೆ ಜಲ ಜೀವನ ಮಿಷನ್ ಅಡಿಯಲ್ಲಿ ಗ್ರಾಮೀಣ ಪ್ರದೇಶದ ಜನರಿಗೆ ಕೊಳವೆ ಮೂಲಕ ಶುದ್ಧ ಕುಡಿಯುವ ನೀರು ಪೂರೈಸಲು ಮತ್ತು ಪ್ರತಿ ಗ್ರಾಮೀಣ ಮನೆಗಳಿಗೆ ಸುರಕ್ಷಿತ ಮತ್ತು ಸುಸ್ಥಿರ ಕುಡಿಯುವ ನೀರು ಸರಬರಾಜು ಮಾಡಲು ಬದ್ಧವಾಗಿದೆ ಎಂದು ಈಶ್ವರ ಖಂಡ್ರೆ ತಿಳಿಸಿದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?