LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಇನ್‌ಸ್ಟಾಗ್ರಾಮ್‌ನಲ್ಲಿ ಧಗಧಗಿಸಿದ ವಿವಾದ: ಮತಾಂತರದ ಆರೋಪ ಮಾಡಿದ ಮಹಿಳಾ ಪತ್ರಕರ್ತೆ ವಿರುದ್ಧ ತಿರುಗಿಬಿದ್ದ ಉರ್ಫಿ ಜಾವೇದ್

ಸಾಮಾಜಿಕ ಜಾಲತಾಣಗಳಲ್ಲಿ ಸದಾ ತಮ್ಮ ವಿಭಿನ್ನ ಉಡುಪುಗಳ ಮೂಲಕವೇ ಸದ್ದು ಮಾಡುವ ನಟಿ ಉರ್ಫಿ ಜಾವೇದ್, ತಮ್ಮ ಧರ್ಮ ಬದಲಾವಣೆ ಹಾಗೂ ಉಡುಪಿನ ಶೈಲಿ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಪತ್ರಕರ್ತೆಯೊಬ್ಬರಿಗೆ ಸಾಮಾಜಿಕ ಜಾಲತಾಣದಲ್ಲೇ ತಕ್ಕ ಶಾಸ್ತಿ ಮಾಡಿದ್ದಾರೆ. ಉರ್ಫಿ ಜಾವೇದ್ ಇಸ್ಲಾಂ ಧರ್ಮದಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡಿದ್ದಾರೆ ಮತ್ತು ಅವರು ಸಮಾಜದಲ್ಲಿ ಅರೆನಗ್ನವಾಗಿ ಓಡಾಡುತ್ತಾರೆ ಎಂದು ಪತ್ರಕರ್ತೆಯೊಬ್ಬರು ಗಂಭೀರ ಆರೋಪ ಮಾಡಿದ್ದರು. ಇದಕ್ಕೆ ಉರ್ಫಿ ತಮ್ಮದೇ ಶೈಲಿಯಲ್ಲಿ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ಪತ್ರಕರ್ತೆ ಮೀತಾ ಚೌಧರಿ ಅವರ ಆರೋಪಗಳಿಗೆ ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಉರ್ಫಿ, ಇಂತಹ ಮೂರ್ಖರೆಲ್ಲಾ ತಮ್ಮನ್ನು ಪತ್ರಕರ್ತರು ಎಂದು ಕರೆದುಕೊಳ್ಳುತ್ತಾರೆ. ಮೊದಲು ಸ್ವಲ್ಪ ಮಾಹಿತಿ ತಿಳಿದುಕೊಂಡು ಮಾತನಾಡಿ, ನಾನು ನನ್ನ ಹೆಸರನ್ನಾಗಲಿ ಅಥವಾ ಧರ್ಮವನ್ನಾಗಲಿ ಎಂದಿಗೂ ಬದಲಾಯಿಸಿಲ್ಲ. ಅಷ್ಟೇ ಅಲ್ಲದೆ ನಾನು ಯಾವುದೇ ಧರ್ಮವನ್ನು ನಂಬುವುದಿಲ್ಲ. ಒಮ್ಮೆ ಗೂಗಲ್ ಮಾಡಿ ನೋಡಿ, ನಾನು ಎಷ್ಟು ಶೋಗಳಲ್ಲಿ ಭಾಗವಹಿಸಿದ್ದೇನೆ ಎಂಬುದು ತಿಳಿಯುತ್ತದೆ ಎಂದು ಕಿಡಿಕಾರಿದ್ದಾರೆ. ಸುಳ್ಳು ಸುದ್ದಿಗಳನ್ನು ಹರಡುವುದನ್ನು ನಿಲ್ಲಿಸಿ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಇದಕ್ಕೆ ಪ್ರತಿಯಾಗಿ ಆ ಪತ್ರಕರ್ತೆಯು ಉರ್ಫಿ ಅವರನ್ನು ಮತ್ತಷ್ಟು ನಿಂದಿಸಿ ಸಂದೇಶ ಕಳುಹಿಸಿದ್ದು, ಸಮಾಜದಲ್ಲಿ ನಿಮ್ಮ ನಡವಳಿಕೆಯನ್ನು ನೋಡಿ, ಬೊಟಾಕ್ಸ್ ಮತ್ತು ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಂಡರೆ ಯಾರು ಬೇಕಾದರೂ ಸುಂದರವಾಗಿ ಕಾಣಬಹುದು ಎಂದು ತಿರುಗೇಟು ನೀಡಿದ್ದರು. ಈ ಚಾಟ್‌ನ ಸ್ಕ್ರೀನ್‌ಶಾಟ್ ಹಂಚಿಕೊಂಡಿರುವ ಉರ್ಫಿ, ಆಕೆಗೆ ಸತ್ಯ ಏನೆಂದೇ ಗೊತ್ತಿಲ್ಲ. ನಾನು ಯಾವುದೇ ಸರ್ಜರಿ ಮಾಡಿಸಿಕೊಂಡಿಲ್ಲ ಎಂದು ಬರೆಯುವ ಮೂಲಕ ಪತ್ರಕರ್ತೆಯ ಧೋರಣೆಯನ್ನು ಸಾರ್ವಜನಿಕವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಸದ್ಯ ಉರ್ಫಿ ಜಾವೇದ್ ಅವರ ಈ ಆಕ್ರೋಶದ ಪೋಸ್ಟ್‌ಗಳು ಇಂಟರ್ನೆಟ್‌ನಲ್ಲಿ ಭಾರಿ ಸದ್ದು ಮಾಡುತ್ತಿವೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಇನ್ಮೇಲೆ ಡೆಡ್ ಬಾಡಿ ಮೇಲೆ ಬಿಲ್ ವಸೂಲಿ ಬಂದ್ : ಮೃತದೇಹ ಹಸ್ತಾಂತರಕ್ಕೆ ಶೀಘ್ರ ಹೊಸ ಪಾಲಿಸಿ!ಬೆಂಗಳೂರಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯ ಬರ್ಬರ ಹತ್ಯೆ!BREAKING : ಖಾಸಗಿ ಆಸ್ಪತ್ರೆಗಳ ಕಳ್ಳಾಟಕ್ಕೆ ಬ್ರೇಕ್ : ಇನ್ಮುಂದೆ ರಶೀದಿಯಲ್ಲಿ ಔಷಧಗಳ ಬೆಲೆ ನಮೂದು ಕಡ್ಡಾಯ!🌺🌼🔱 ನವರಾತ್ರಿ ಮೊದಲನೇ ದಿನ – ಶ್ರೀ ಶೈಲಪುತ್ರಿ ದೇವಿ ಆರಾಧನೆ 🔱🌼🌺BIG NEWS : ಹಬ್ಬದ ಸಂದರ್ಭದಲ್ಲೆ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ : ರಾಜ್ಯದಲ್ಲಿ ಗಗನಕ್ಕೇರಿದ ಅಕ್ಕಿ, ತೊಗರಿಬೇಳೆ ಬೆಲೆ!GOOD NEWS : 'KSRTC' ಯಿಂದ ದಸರಾ ಸಂಭ್ರಮಕ್ಕೆ ಸ್ಪೆಷಲ್ ಗಿಫ್ಟ್: 3,000ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಸಂಚಾರ!ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!