LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಂಗಳೂರಿನಲ್ಲಿ ಚಿನ್ನದ ಉದ್ಯಮಿ ದರೋಡೆ ಕೇಸ್ ಗೆ ಬಿಗ್ ಟ್ವಿಸ್ಟ್: ಮೈಮೇಲಿದ್ದ ಒಡವೆ ಗೋಜಿಗೂ ಹೋಗದೇ; ಕಾರಿನಲ್ಲಿದ್ದ ಚಿನ್ನದ ಬಿಸ್ಕೆಟ್ ಗಾಗಿ ತಡಕಾಡಿದ ಖದೀಮರು?

ಮಂಗಳೂರು: ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೇರಳ ಮೂಲದ ಚಿನ್ನದ ವ್ಯಾಪಾರಿ ವಿಕಾಸ್ ಮತ್ತು ಅವರ ಕುಟುಂಬವನ್ನು ಅಡ್ಡಗಟ್ಟಿ 20 ಲಕ್ಷ ಮೌಲ್ಯದ ಚಿನ್ನಾಭರಣ, ಹಣ ದರೋಡೆ ಮಾಡಿ ಕಾರಿನ ಸಮೇತ್ ಎಸ್ಕೇಪ್ ಆದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ.

ಈ ದರೋಡೆ ಪ್ರಕರಣ ಪಕ್ಕಾ ಪ್ಲಾನ್ ಮಾಡಿ ಮಾಡಿದ ಯೋಜನೆಯಾಗಿದೆ. ಪ್ರಕರಣದ ತನಿಖೆ ಚುರುಕುಗೊಳಿಸಿರುವ ಪೊಲೀಸರಿಗೆ ಬಂಟ್ವಾಳದಲ್ಲಿ ದರೋಡೆಕೋರರು ಅಪಹರಿಸಿದ್ದ ಸ್ವಿಫ್ಟ್ ಡಿಸೈರ್ ಕಾರು ಪತ್ತೆಯಾಗಿದ್ದು, ಹಲವು ಸುಳಿವುಗಳು ಸಿಕ್ಕಿವೆ.

ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಪನೆ ಎಂಬ ಸ್ಥಳದ ಬಳಿ ದರೋಡೆಕೋರರು ಕದ್ದೊಯ್ದಿದ್ದ ಸ್ವಿಫ್ಟ್ ಡಿಸೈರ್ ಕಾರು ಪತ್ತೆಯಾಗಿದೆ. ಪೊಲೀಸರು ಕಾರನ್ನು ಪರಿಶೀಲಿಸಿದಾಗ ದರೋಡೆಕೋರರ ಅಸಲಿ ಪ್ಲಾನ್ ಬಯಲಾಗಿದೆ.

ಕಾರಿನ ಸೀಟ್ ಕವರ್‌ಗಳು ಹಾಗೂ ಡಿಕ್ಕಿಯ ಕವರ್‌ಗಳನ್ನು ಹರಿದು ಹಾಕಿ, ಕಾರಿನ ಮೂಲೆ ಮೂಲೆಯನ್ನೂ ಜಾಲಾಡಲಾಗಿದೆ. ಕಾರಿನಲ್ಲಿ ಕೋಟ್ಯಾಂತರ ರೂಪಾಯಿ ಮೌಲ್ಯದ ‘ಗೋಲ್ಡ್ ಬಿಸ್ಕತ್’ ಅಡಗಿಸಿಡಲಾಗಿದೆ ಎಂಬ ಪಕ್ಕಾ ಮಾಹಿತಿ ದರೋಡೆಕೋರರಿಗೆ ಇತ್ತು ಎಂಬ ಅನುಮಾನ ವ್ಯಕ್ತವಾಗಿದೆ.

ದರೋಡೆಕೋರರು ವ್ಯಾಪಾರಿ ವಿಕಾಸ್, ಅವರ ಪತ್ನಿ ಮತ್ತು ಮಗ ಧರಿಸಿದ್ದ ಮೈಮೇಲಿನ ಚಿನ್ನಾಭರಣಗಳನ್ನು ಮುಟ್ಟುವ ಗೋಜಿಗೆ ಹೋಗಿಲ್ಲ. ಕೇವಲ ಕಾರನ್ನೇ ಪ್ರಮುಖ ಟಾರ್ಗೆಟ್ ಮಾಡಿದ್ದರು. ಮುಂಜಾನೆ 4 ಗಂಟೆಗೆ ಬೈಕಂಪಾಡಿ ಬಳಿ ವಿಕಾಸ್ ಅವರನ್ನು ಕಾರಿನಿಂದ ಹೊರಗೆ ಎಳೆದು ಹಾಕಿ, ಕಾರಿನೊಳಗೆ ಚಿನ್ನದ ಬಿಸ್ಕತ್‌ಗಳಿಗಾಗಿ ಹುಡುಕಾಟ ನಡೆಸಿದ್ದಾರೆ. ಆ ಬಳಿಕ ಅಲ್ಲಿಂದ ಎರಡು ಕಿಲೋಮೀಟರ್ ದೂರದವರೆಗೆ ಕಾರನ್ನು ಚಲಾಯಿಸಿಕೊಂಡು ಹೋಗಿ, ಪತ್ನಿ ಮತ್ತು ಮಗನನ್ನು ದಾರಿಯಲ್ಲಿ ಇಳಿಸಿ ಕಾರಿನ ಸಮೇತ ಪರಾರಿಯಾಗಿದ್ದರು.

ಮಹಾರಾಷ್ಟ್ರದಲ್ಲಿ ಮದುವೆ ಮುಗಿಸಿ ಕೇರಳಕ್ಕೆ ಮರಳುತ್ತಿದ್ದ ವಿಕಾಸ್ ಅವರ ಕಾರಿನಲ್ಲಿ ಕೇವಲ 20 ಲಕ್ಷ ಮೌಲ್ಯದ 180 ಗ್ರಾಂ ಚಿನ್ನಾಭರಣವಿತ್ತೇ ಅಥವಾ ಅವರು ಚಿನ್ನದ ಉದ್ಯಮಿಯಾಗಿರುವುದರಿಂದ ಕಾರಿನ ರಹಸ್ಯ ಜಾಗದಲ್ಲಿ ದೊಡ್ಡ ಮಟ್ಟದ ಚಿನ್ನ ಸಾಗಾಟ ಮಾಡುತ್ತಿದ್ದರೇ ಎಂಬ ನಿಟ್ಟಿನಲ್ಲಿ ಪಣಂಬೂರು ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.

ದರೋಡೆಕೋರರು ಎರಡು ಇನ್ನೋವಾ ಮತ್ತು ಒಂದು ಸ್ವಿಫ್ಟ್ ಕಾರಿನಲ್ಲಿ ಬಂದಿದ್ದು, ಉದ್ಯಮಿಯ ಚಲನವಲನದ ಬಗ್ಗೆ ಇಂಚಿಂಚೂ ಮಾಹಿತಿ ಇದ್ದವರೇ ಈ ಕೃತ್ಯವೆಸಗಿರಬಹುದು ಎಂದು ಶಂಕಿಸಲಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಇನ್ಮೇಲೆ ಡೆಡ್ ಬಾಡಿ ಮೇಲೆ ಬಿಲ್ ವಸೂಲಿ ಬಂದ್ : ಮೃತದೇಹ ಹಸ್ತಾಂತರಕ್ಕೆ ಶೀಘ್ರ ಹೊಸ ಪಾಲಿಸಿ!ಬೆಂಗಳೂರಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯ ಬರ್ಬರ ಹತ್ಯೆ!BREAKING : ಖಾಸಗಿ ಆಸ್ಪತ್ರೆಗಳ ಕಳ್ಳಾಟಕ್ಕೆ ಬ್ರೇಕ್ : ಇನ್ಮುಂದೆ ರಶೀದಿಯಲ್ಲಿ ಔಷಧಗಳ ಬೆಲೆ ನಮೂದು ಕಡ್ಡಾಯ!🌺🌼🔱 ನವರಾತ್ರಿ ಮೊದಲನೇ ದಿನ – ಶ್ರೀ ಶೈಲಪುತ್ರಿ ದೇವಿ ಆರಾಧನೆ 🔱🌼🌺BIG NEWS : ಹಬ್ಬದ ಸಂದರ್ಭದಲ್ಲೆ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ : ರಾಜ್ಯದಲ್ಲಿ ಗಗನಕ್ಕೇರಿದ ಅಕ್ಕಿ, ತೊಗರಿಬೇಳೆ ಬೆಲೆ!GOOD NEWS : 'KSRTC' ಯಿಂದ ದಸರಾ ಸಂಭ್ರಮಕ್ಕೆ ಸ್ಪೆಷಲ್ ಗಿಫ್ಟ್: 3,000ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಸಂಚಾರ!ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!