LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಳೆ ಕೊರತೆ ; ಮುಂಗಾರು ಹಂಗಾಮಿನ ಬೆಳೆಗೆ ನೀರು ಬಿಡುಗಡೆ ಸಾಧ್ಯವಿಲ್ಲ

ಶಿವಮೊಗ್ಗ : ಮುಂಗಾರು ಹಂಗಾಮಿನ ಬೆಳೆಗಳಿಗೆ ಬಲದಂಡೆ ಮತ್ತು ಎಡದಂಡೆ ನಾಲೆಯಲ್ಲಿ ನೀರು ಹರಿಸಲು ಸಾಧ್ಯವಾಗುವುದಿಲ್ಲವೆಂದು ಮತ್ತು ಜಲಾಶಯದಲ್ಲಿ ಸಂಗ್ರಹವಾಗಿರುವ ನೀರನ್ನು ಕುಡಿಯಲು ಮಾತ್ರ ಬಳಸಲು ಸರ್ಕಾರದ ಆದೇಶವಾಗಿರುವ ಹಿನ್ನಲೆಯಲ್ಲಿ ಅಚ್ಚುಕಟ್ಟು ಭಾಗದ ಎಲ್ಲಾ ರೈತರು ಇಲಾಖೆಯೊಂದಿಗೆ ಸಹಕರಿಸಬೇಕಾಗಿ ಈ ಮೂಲಕ ಕೋರಲಾಗಿದೆ.

ಭದ್ರಾ ಜಲಾಶಯದ ಅಚ್ಚುಕಟ್ಟುದಾರರಿಗೆ ಈ ಮೂಲಕ ತಿಳಿಯಪಡಿಸುವುದೇನೆಂದರೆ, ಭದ್ರಾ ಅಚ್ಚುಕಟ್ಟು ವ್ಯಾಪ್ತಿಯಲ್ಲಿ ಪ್ರಸ್ತುತ ಮಳೆ ಕೊರತೆಯಿಂದಾಗಿ ಭದ್ರಾ ಜಲಾಶಯದಲ್ಲಿ ಸಾಕಷ್ಟು ಪ್ರಮಾಣದಲ್ಲಿ ನೀರು ಸಂಗ್ರಹವಾಗಿರುವುದಿಲ್ಲ. ಆದಕಾರಣ ಮುಂಗಾರು ಹಂಗಾಮಿನ ಬೆಳೆಗಳಿಗೆ ಬಲದಂಡೆ ಮತ್ತು ಎಡದಂಡೆ ನಾಲೆಯಲ್ಲಿ ನೀರು ಹರಿಸಲು ಸಾಧ್ಯವಾಗುವುದಿಲ್ಲವೆಂದು ಮತ್ತು ಜಲಾಶಯದಲ್ಲಿ ಸಂಗ್ರಹವಾಗಿರುವ ನೀರನ್ನು ಕುಡಿಯಲು ಮಾತ್ರ ಬಳಸಲು ಸರ್ಕಾರದ ಆದೇಶವಾಗಿರುವ ಹಿನ್ನಲೆಯಲ್ಲಿ ಅಚ್ಚುಕಟ್ಟು ಭಾಗದ ಎಲ್ಲಾ ರೈತರು ಇಲಾಖೆಯೊಂದಿಗೆ ಸಹಕರಿಸಬೇಕಾಗಿ ಈ ಮೂಲಕ ಕೋರಲಾಗಿದೆ. ಮುಂಬರುವ ದಿನಗಳಲ್ಲಿ ಸಾಕಷ್ಟು ಪ್ರಮಾಣದಲ್ಲಿ ಮಳೆಯಾಗಿ ಜಲಾಶಯ ಭರ್ತಿಯಾದಲ್ಲಿ ನೀರಾವರಿ ಸಲಹಾ ಸಮಿತಿ ಸಭೆ ಆಯೋಜಿಸಿ ಬೆಳೆಗಳಿಗೆ ನೀರು ಹರಿಸುವ ಕುರಿತು ತೀರ್ಮಾನ ಕೈಗೊಳ್ಳಲಾಗುವುದು ಎಂದು ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ

ಜು. 05 ರಂದು ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

ಶಿವಮೊಗ್ಗ : ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ, ಈ ವಿತರಣಾ ಕೇಂದ್ರದಿಂದ ಸರಬರಾಜಾಗುವ ಪ್ರದೇಶಗಳಲ್ಲಿ ಜು. 05 ರಂದು ಬೆಳಗ್ಗೆ 09 ರಿಂದ ಸಂಜೆ 06 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ಹೊರಡಿಸಿದೆ.

ಗಾಂಧಿನಗರ, ರವೀಂದ್ರ ನಗರ, ವೆಂಕಟೇಶ್‌ನಗರ, ಚೆನ್ನಪ್ಪ ಲೇಔಟ್, ಉಷಾ ನರ್ಸಿಂಗ್ ಹೋಮ್, ಜೈಲ್ ರಸ್ತೆ, ರಾಜೇಂದ್ರ ನಗರ, ಎ.ಎನ್.ಕೆ ರಸ್ತೆ, ವಿನೋಬನಗರ, ದಾಮೋದರ್ ಕಾಲೋನಿ, ಚೇತನಾ ಸ್ಕೂಲ್, ಕಲ್ಲಹಳ್ಳಿ, ವಿನೋಬನಗರ 60 ಅಡಿ ರಸ್ತೆ, ಜೈಲ್ ಸರ್ಕಲ್, ಆಟೋಕಾಂಪ್ಲೆಕ್ಸ್, ಪೋಲೀಸ್ ಚೌಕಿ, ಮೇಧಾರ ಕೇರಿ, ನರಸಿಂಹ ಬಡಾವಣೆ, ಶಾರದಮ್ಮ ಲೇಔಟ್, ಮೈತ್ರಿ ಅಪಾರ್ಟ್ಮೆಂಟ್, ಕನಕ ನಗರ, ದೇವರಾಜ್ ಅರಸ್ ಬಡಾವಣೆ, ಪಿ ಅಂಡ್ ಟಿ ಕಾಲೋನಿ, ಸೂರ್ಯ ಲೇಔಟ್, ಅರವಿಂದ ನಗರ, ಇಂಡಸ್ಟಿçಯಲ್ ಎರಿಯಾ, ಎ.ಪಿ.ಎಂ.ಸಿ., ವೀರಣ್ಣ ಲೇಔಟ್, ಕಾಶೀಪುರ, ಜಯದೇವ ಬಡಾವಣೆ, ಸಹ್ಯಾದ್ರಿನಗರ, ಸಹಕಾರಿ ನಗರ, ಆಲ್ಕೋಳ ವೃತ್ತ, ಸಾಗರ ರಸ್ತೆ, ಗುತ್ಯಪ್ಪ ಕಾಲೋನಿ, ನೇತಾಜಿ ವೃತ್ತ, ಸಕ್ಯೂಟ್ ಹೌಸ್, ನೀಲಮೇಘಮ್ ಲೇಔಟ್, ರಾಜಮಹಲ್ ಬಡಾವಣೆ, ಪೊಲೀಸ್ ಲೇಔಟ್, ಅಲ್ ಹರೀಮ್ ಲೇಔಟ್, ವಿಜಯನಗರ, ಪಂಪ ನಗರ, ಗುತ್ಯಪ್ಪ ಕಾಲೋನಿ, ನೇತಾಜಿ ವೃತ್ತ, ಶ್ರೀರಾಮನಗರ, ಟಿಪ್ಪುನಗರ, ಪದ್ಮಾ ಟಾಕೀಸ್ ರಸ್ತೆ, ಸಿದ್ದೇಶ್ವರ ವೃತ್ತ, ಗೋಪಾಳಗೌಡ ಬಡಾವಣೆ ಎ ಯಿಂದ ಎಫ್ ಬ್ಲಾಕ್, ಅಣ್ಣಾನಗರ, ರಂಗನಾಥ ಬಡಾವಣೆ, ಕೆ.ಹೆಚ್.ಬಿ ಗೋಪಾಳ, ಜೆ.ಪಿ.ನಗರ, ಎಸ್.ವಿ.ಬಡಾವಣೆ, ಗಾಡಿಕೊಪ್ಪ, ನಂಜಪ್ಪ ಹೆಲ್ತ್ ಕೇರ್, ಶರಾವತಿ ದಂತ ವೈದ್ಯಾಕೀಯ ಕಾಲೇಜು, ಮಲ್ಲಿಗೇನಹಳ್ಳಿ, ಸೋಮಿನಕೊಪ್ಪ ಪ್ರೆಸ್ ಕಾಲೋನಿ, ಭೈರನಕೊಪ್ಪ, ಎ.ಪಿ.ಎಂ.ಸಿ ಲೇಔಟ್ (ಆಶ್ರಯ ಬಡಾವಣೆ), ಭೋವಿ ಕಾಲೋನಿ, ಆಲದೇವರಹೊಸೂರು, ಶಕ್ತಿಧಾಮ, ಶಿವಸಾಯಿ ಕಾಸ್ಟಿಂಗ್ ಗೆಜ್ಜೆನಹಳ್ಳಿ, ದೇವಕಾತಿಕೊಪ್ಪ, ಶ್ರೀರಾಮ್‌ಪುರ, ವಿರುಪಿನಕೊಪ್ಪ, ಸಿದ್ಲಿಪುರ, ಮುದ್ದಿನಕೊಪ್ಪ, ತ್ಯಾವರೆಕೊಪ್ಪ, ಸಿಂಹಧಾಮ, ಗುಡ್ಡದಾರಿ ಕೊಪ್ಪ, ಗಾಲ್ಫ್ ಸ್ಟೇಡಿಯಂ, ಭೂಮಿಕಾ ಇಂಡಸ್ಟಿç, ಪೆಸೆಟ್ ಕಾಲೇಜ್, ಕೋಟೆ ಗಂಗೂರು, ಗೆಜ್ಜೇನಹಳ್ಳಿ, ಬಸವ ಗಂಗೂರು, ಸೋಮಿನಕೊಪ್ಪ, ಆದರ್ಶನಗರ, ಸಹ್ಯಾದ್ರಿ ನಗರ, ಜೆ.ಹೆಚ್. ಪಟೇಲ್ ಬಡಾವಣೆ, ಕಾಶೀಪುರ, ಕಲ್ಲಹಳ್ಳಿ,ಶಿವಪ್ಪನಾಯಕ ಬಡಾವಣೆ, ಪ್ರಿಯದರ್ಶಿನಿ ಲೇಔಟ್, ಇಂದಿರಾಗಾAಧಿ ಲೇಔಟ್ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
ಕಲ್ಯಾಣ ಕರ್ನಾಟಕ ಜನತೆಗೆ ಗುಡ್ ನ್ಯೂಸ್: KKRTC ಗೆ 400 ಹೊಸ ಬಸ್ ಮಂಜೂರುಮನೆಗಳ್ಳತನ ಪ್ರಕರಣದಲ್ಲಿ ಇಬ್ಬರು ಅಪ್ರಾಪ್ತರು ವಶಕ್ಕೆ: ಲಕ್ಷಾಂತರ ರೂ. ಮೌಲ್ಯದ ಆಭರಣ ವಶಬಾಂಗ್ಲಾದೇಶದ ನೂತನ ಅಧ್ಯಕ್ಷರಾಗಿ BNP ಅಭ್ಯರ್ಥಿ ಮಿರ್ಜಾ ಫಖ್ರುಲ್ ಇಸ್ಲಾಂ ಅಲಂಗೀರ್ ಆಯ್ಕೆBREAKING: ಲಡಾಖ್ ನಲ್ಲಿ ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್ ಪೀಠ ಸ್ಥಾಪನೆಗೆ ಕೇಂದ್ರ ನಿರ್ಧಾರ: ಅಮಿತ್ ಶಾ ಘೋಷಣೆಅನುಮತಿ ಇಲ್ಲದೆ ಸಚಿವ ಕೃಷ್ಣ ಬೈರೇಗೌಡರ ಪೋಸ್ಟರ್ ಅಂಟಿಸಿದ್ದ ವ್ಯಕ್ತಿ ವಿರುದ್ಧ ಕೇಸ್ ದಾಖಲುಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿKPME ಉಲ್ಲಂಘನೆ: ಖಾಸಗಿ ವೈದ್ಯಕೀಯ ಸಂಸ್ಥೆಗಳಿಗೆ ದಂಡ, ಪರವಾನಗಿ ರದ್ದುಮೋದಿ ದೇವರಿಗೆ ಪೂಜೆ: ಭಕ್ತರಿಂದ ‘ಜೈ ಜೈ ಮೋದಿ, ಹರ್ ಹರ್ ಮೋದಿ’ ಘೋಷಣೆ; ದೆಹಲಿ ಪ್ರೆಸ್ ಕ್ಲಬ್‌ನಲ್ಲಿ ‘ಮೋದಿ ಚಾಲೀಸಾ’ ಕಾರ್ಯಕ್ರಮ!ತಪ್ಪಾಯ್ತು ಕ್ಷಮಿಸಿಬಿಡಿ: ರಸ್ತೆ ಮುಚ್ಚಿದ್ದಕ್ಕೆ ಭಾರತೀಯ ಸೇನೆಗೆ ‘ನಾನು GenZ’ ಎಚ್ಚರಿಕೆ ನೀಡಿದ್ದ ಯುವತಿಯಿಂದ ಕ್ಷಮೆಯಾಚನೆಲೋಕಸಭಾ ಕ್ಷೇತ್ರ ಹೆಚ್ಚಳ ಮಾಡಬಾರದು; 1971ರ ಜನಸಂಖ್ಯೆ ಆಧಾರವನ್ನು ಗೌರವಿಸಬೇಕು ಸಿಎಂ ಡಿ.ಕೆ.ಶಿವಕುಮಾರ್ ಮನವಿ