LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್‌ಮೆಂಟ್ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು: ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್ ಮೆಂಟ್, ಸಹಕಾರ ತರಬೇತಿ ಸಂಸ್ಥೆಯು ಜುಲೈ  1 ರಿಂದ 6 ತಿಂಗಳ ಅವಧಿಯ ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್‌ಮೆಂಟ್ ತರಬೇತಿಯ ಅರ್ಜಿ ಸಲ್ಲಿಕೆಯ ಅವಧಿಯನ್ನು 10 ಜುಲೈ 2026 ರವರೆಗೆ ವಿಸ್ತರಿಸಲಾಗಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಮತ್ತು ಬೆಂಗಳೂರು ದಕ್ಷಿಣ ಜಿಲ್ಲೆಗಳ ಖಾಸಗಿ ಅಭ್ಯರ್ಥಿಗಳಿಂದ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನಿರುದ್ಯೋಗಿ ಅಭ್ಯರ್ಥಿಗಳಿಂದ ಮತ್ತು ಎಲ್ಲಾ ವಿವಿಧ ಸಹಕಾರ ಸಂಘ/ಬ್ಯಾಂಕ್‌ಗಳ ಉದ್ಯೋಗಿಗಳು ಅರ್ಜಿ ಸಲ್ಲಿಸಬಹುದು.

ತರಬೇತಿ ಪಡೆಯಲು ಕನಿಷ್ಠ ವಿದ್ಯಾರ್ಹತೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಖಾಸಗಿ ಅಭ್ಯರ್ಥಿಗಳಿಗೂ ಸಹ ಪ್ರವೇಶ ಪಡೆಯಲು ಅವಕಾಶವಿರುತ್ತದೆ. ವಯೋಮಿತಿ 16 ವರ್ಷ ದಾಟಿದವರಾಗಿರಬೇಕು. ಅರ್ಜಿಯನ್ನು ಜುಲೈ 10 ರ ಒಳಗಾಗಿ ಸಲ್ಲಿಸಬೇಕು. ತರಬೇತಿ ಪಡೆಯುವ ಎಲ್ಲಾ ಅಭ್ಯರ್ಥಿಗಳಿಗೆ ಮಾಸಿಕ ರೂ. 500 ಶಿಷ್ಯ ವೇತನ ನೀಡಲಾಗುವುದು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನಿರುದ್ಯೋಗಿ ಅಭ್ಯರ್ಥಿಗಳಿಗೆ ಮಾಸಿಕ ರೂ. 600 ಶಿಷ್ಯ ವೇತನ ನೀಡಲಾಗುವುದು, ಹೆಚ್ಚಿನ‌ ವಿವರಗಳಿಗೆ ದೂ.080-35541407 ಅಥವಾ ಮೊ.90362 59781 ಸಂಪರ್ಕಿಸಬಹುದು ಅಥವಾ ಸಂಸ್ಥೆಯ ಕಚೇರಿ ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ ಆಪರೇಟಿವ್ ಮ್ಯಾನೇಜ್‌ಮೆಂಟ್, ಸಹಕಾರ ಭವನ,#1/3, 2 ನೇ ಮಹಡಿ, 3 ನೇ ಮುಖ್ಯ ರಸ್ತೆ, ಕನ್ನಡ ಸಾಹಿತ್ಯ ಪರಿಷತ್‌ ಹಿಂಭಾಗ, ಚಾಮರಾಜಪೇಟೆ ,ಬೆಂಗಳೂರು-18 ಇಲ್ಲಿಗೆ ಖುದ್ದಾಗಿ ಭೇಟಿ ನೀಡಬಹುದು ಎಂದು ಪ್ರಾಚಾರ್ಯರಾದ ಶೈಲಾ ಬಿ.ವಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
GOOD NEWS : 'KSRTC' ಯಿಂದ ದಸರಾ ಸಂಭ್ರಮಕ್ಕೆ ಸ್ಪೆಷಲ್ ಗಿಫ್ಟ್: 3,000ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಸಂಚಾರ!ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿ