LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯದ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ‘ಇಂದಿರಾ ಕಿಟ್’ ವಿತರಣೆ ಶೀಘ್ರ

ನವದೆಹಲಿ: ರಾಜ್ಯದ ಜನತೆಗೆ ಶೀಘ್ರವೇ ಇಂದಿರಾ ಕಿಟ್ ಗಳನ್ನು ವಿತರಿಸಲಾಗುವುದು ಎಂದು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಹೇಳಿದ್ದಾರೆ.

ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯದ ಜನರಿಗೆ ಇಂದಿರಾ ಕಿಟ್ ವಿತರಿಸುವ ಯೋಜನೆ ಟೆಂಡರ್ ಪ್ರಕ್ರಿಯೆ ಅಂತಿಮ ಹಂತಕ್ಕೆ ಬಂದಿದ್ದು, ಆದಷ್ಟು ಶೀಘ್ರವೇ ಈ ಯೋಜನೆ ರಾಜ್ಯದಲ್ಲಿ ಜಾರಿಗೆ ಬರಲಿದೆ ಎಂದು ಹೇಳಿದ್ದಾರೆ,

ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದು, ರಾಜ್ಯಕ್ಕೆ ಬರಬೇಕಾದ 1902 ಕೋಟಿ ರೂ. ಬಿಡುಗಡೆ ಮಾಡುವ ಭರವಸೆ ನೀಡಿದ್ದಾರೆ. ರಾಜ್ಯದಿಂದ ಆಡಿಟ್ ವರದಿ ನೀಡಲಾಗಿದ್ದು, ಬಾಕಿ ಹಣವನ್ನು ಕೇಂದ್ರ ಸರ್ಕಾರ ಬೇಗನೆ ನೀಡಿದಲ್ಲಿ ರೈತರಿಗೆ ತಲುಪಿಸಲು ಅನುಕೂಲವಾಗುತ್ತದೆ ಎಂದಿದ್ದಾರೆ. ಮೊದಲ ಹಂತದಲ್ಲಿ 190 ಕೋಟಿ ರೂ.ಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ್ದು, ಉಳಿದಂತೆ ಎಂ.ಎಸ್.ಪಿ. ಅಡಿ ನೀಡುವ ಅನುದಾನ ಬಿಡುಗಡೆಯಾಗಬೇಕಿದೆ ಎಂದು ಹೇಳಿದ್ದಾರೆ.

ಇಂದಿರಾ ಕಿಟ್

ರಾಜ್ಯ ಸರ್ಕಾರವು ಅನ್ನಭಾಗ್ಯ ಯೋಜನೆಯಡಿ ಬಡತನ ರೇಖೆಗಿಂತ ಕೆಳಗಿರುವ(BPL) ಪಡಿತರ ಚೀಟಿದಾರರಿಗೆ ಹೆಚ್ಚುವರಿಯಾಗಿ ನೀಡುತ್ತಿದ್ದ 5 ಕೆ.ಜಿ ಅಕ್ಕಿಯ ಬದಲಾಗಿ ಇಂದಿರಾ ಕಿಟ್(Indira Kit) ಅನ್ನು ವಿತರಿಸಲು ತೀರ್ಮಾನಿಸಿದೆ. ಈ ಕಿಟ್‌ನಲ್ಲಿ ತೊಗರಿಬೇಳೆ, ಅಡುಗೆ ಎಣ್ಣೆ, ಸಕ್ಕರೆ, ಉಪ್ಪು ಸೇರಿದಂತೆ ಇತರೆ ಪೌಷ್ಟಿಕಾಂಶದ ಆಹಾರ ಪದಾರ್ಥಗಳು ಇರಲಿವೆ.

ಸರ್ಕಾರ ಇಂದಿರಾ ಕಿಟ್ ಯೋಜನೆಯ ಟೆಂಡರ್ ಪ್ರಕ್ರಿಯೆಗಳನ್ನು ಅಂತಿಮ ಹಂತಕ್ಕೆ ತಂದಿದ್ದು, ಅನುಷ್ಠಾನ ಸಂಬಂಧ ಆಹಾರ ಇಲಾಖೆಯ ಸಿದ್ಧತೆಗಳು ನಡೆಯುತ್ತಿವೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಇನ್ಮೇಲೆ ಡೆಡ್ ಬಾಡಿ ಮೇಲೆ ಬಿಲ್ ವಸೂಲಿ ಬಂದ್ : ಮೃತದೇಹ ಹಸ್ತಾಂತರಕ್ಕೆ ಶೀಘ್ರ ಹೊಸ ಪಾಲಿಸಿ!ಬೆಂಗಳೂರಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯ ಬರ್ಬರ ಹತ್ಯೆ!BREAKING : ಖಾಸಗಿ ಆಸ್ಪತ್ರೆಗಳ ಕಳ್ಳಾಟಕ್ಕೆ ಬ್ರೇಕ್ : ಇನ್ಮುಂದೆ ರಶೀದಿಯಲ್ಲಿ ಔಷಧಗಳ ಬೆಲೆ ನಮೂದು ಕಡ್ಡಾಯ!🌺🌼🔱 ನವರಾತ್ರಿ ಮೊದಲನೇ ದಿನ – ಶ್ರೀ ಶೈಲಪುತ್ರಿ ದೇವಿ ಆರಾಧನೆ 🔱🌼🌺BIG NEWS : ಹಬ್ಬದ ಸಂದರ್ಭದಲ್ಲೆ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ : ರಾಜ್ಯದಲ್ಲಿ ಗಗನಕ್ಕೇರಿದ ಅಕ್ಕಿ, ತೊಗರಿಬೇಳೆ ಬೆಲೆ!GOOD NEWS : 'KSRTC' ಯಿಂದ ದಸರಾ ಸಂಭ್ರಮಕ್ಕೆ ಸ್ಪೆಷಲ್ ಗಿಫ್ಟ್: 3,000ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಸಂಚಾರ!ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!