LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹಿಂದೂ ಯುವತಿಗೆ ಅನ್ಯಕೋಮಿನ ಯುವಕರು ಚಾಕು ತೋರಿಸಿ ಕಿರುಕುಳ: ಎರಡು ಪ್ರತ್ಯೇಕ ಪ್ರಕರಣ ದಾಖಲು

ಮಂಗಳೂರು: ಹಿಂದೂ ಯುವತಿಯೊಬ್ಬಳಿಗೆ ಅನ್ಯಕೋಮಿನ ಯುವಕರು ಚಾಕು ತೋರಿಸಿ ಕಿರುಕುಳ ನೀಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಪುರುಷರಕಟ್ಟೆ ಬಳಿನಡೆದಿದೆ.

ಈ ಸಂಬಂಧ ಪುತ್ತೂರು ಪೊಲೀಸರು ಎರಡು ಪ್ರತ್ಯೇಕ ದೂರುಗಳನ್ನು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ವೈರಲ್ ಆಗಿವೆ.

ಪುರುಷರಕಟ್ಟೆ ಬಸ್ಸು ನಿಲ್ದಾಣದ ಬಳಿ ಘಟನೆ ನಡೆದಿದೆ ಎಂದು ಯುವತಿ ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪುರುಷರಕಟ್ಟೆ ಬಳಿ ಸ್ಕೂಟಿ ನಿಲ್ಲಿಸಿ ಬಸ್ ಹತ್ತಲು ತೆರಳುತ್ತಿದ್ದಾಗ ತನಗೆ ಮುಂಚೆಯೇ ಪರಿಚಯವಿದ್ದ ಸುಹೈಲ್ ಹಾಗೂ ಆತನ ಜೊತೆಯಲ್ಲಿದ್ದ ಇನ್ನು ಮೂವರು ಯುವಕರು ತನಗೆ ಅಡ್ಡಗಟ್ಟಿ, ಚಾಕು ತೋರಿಸಿ ಕಿರುಕುಳ ನೀಡಿದ್ದಾರೆ ಎಂದು ಯುವತಿ ಆರೋಪಿಸಿದ್ದಾರೆ.

ಯುವತಿಯ ದೂರಿನನ್ವಯ ಪುತ್ತೂರು ಮಹಿಳಾ ಪೊಲೀಸರು ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 78(1) (ಮಹಿಳೆಯ ಘನತೆಗೆ ಧಕ್ಕೆ/ಕಿರುಕುಳ) ಹಾಗೂ ಸೆಕ್ಷನ್ 3(5) ಅಡಿಯಲ್ಲಿ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಘಟನೆ ತಿಳಿಯುತ್ತಿದ್ದಂತೆ ಹಿಂದೂ ಪರ ಸಂಘಟನೆಗಳ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದು, ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಪುತ್ತೂರು ಪೊಲೀಸರು ತಕ್ಷಣವೇ ಪ್ರಾಥಮಿಕ ತನಿಖೆ ನಡೆಸಿ, ದೂರಿನಲ್ಲಿದ್ದ ಯುವಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಪ್ರಕರಣಕ್ಕೆ ಬೇರೆಯದೇ ಆದ ಆಯಾಮ ಸಿಕ್ಕಿದೆ. ಯುವಕರ ಹೇಳಿಕೆಯ ಪ್ರಕಾರ, ತಾವು ಯಾವುದೇ ಅಪರಾಧಿಕ ಕೃತ್ಯ ಎಸಗಿಲ್ಲ. ತಾವು ಸ್ಥಳೀಯ ಬೇಕರಿಯೊಂದರಲ್ಲಿ ಬ್ರೆಡ್ ಖರೀದಿಸಿ, ಅದಕ್ಕೆ ಚೀಸ್ ಹಾಕಲು ಬೇಕರಿ ಮಾಲೀಕರಿಂದ ಚಾಕು ಪಡೆದುಕೊಂಡಿದ್ದೆವು. ಚೀಸ್​​ ಕಟ್​​ ಮಾಡಿದ ನಂತರ ಆ ಚಾಕುವನ್ನು ವಾಪಸ್ ಬೇಕರಿಗೆ ನೀಡಲು ಹೋಗುತ್ತಿದ್ದಾಗ ಅಲ್ಲಿ ಯುವತಿ ಎದುರಾಗಿದ್ದಾಳೆ. ಆದರೆ, ಸ್ಥಳೀಯ ಹಿಂದೂ ಸಂಘಟನೆಯ ಮುಖಂಡ ಮುರಳಿ ಕೃಷ್ಣ ಹಂಸತಡ್ಕ ಹಾಗೂ ಇತರರು ಹಳೆಯ ದ್ವೇಷದ ಹಿನ್ನೆಲೆಯಲ್ಲಿ, ದುರುದ್ದೇಶಪೂರ್ವಕವಾಗಿ ಯುವತಿಯನ್ನು ಮುಂದೆ ಬಿಟ್ಟು ನಮ್ಮ ಮೇಲೆ ಸುಳ್ಳು ಪ್ರಕರಣ ದಾಖಲಿಸುತ್ತಿದ್ದಾರೆ ಎಂದು ಯುವಕರು ಪ್ರತಿಯಾಗಿ ದೂರು ನೀಡಿದ್ದಾರೆ.

ಯುವಕರು ನೀಡಿದ ದೂರಿನ ಮೇರೆಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲೂ ಮತ್ತೊಂದು ಎಫ್‌ಐಆರ್ ದಾಖಲಾಗಿದೆ. ಸದ್ಯ ಪುರುಷರಕಟ್ಟೆ ಜಂಕ್ಷನ್ ಮತ್ತು ಬೇಕರಿ ಆಸುಪಾಸಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ತನಿಖೆ ಚುರುಕುಗೊಳಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಹಬ್ಬದ ಸಂದರ್ಭದಲ್ಲೆ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ : ರಾಜ್ಯದಲ್ಲಿ ಗಗನಕ್ಕೇರಿದ ಅಕ್ಕಿ, ತೊಗರಿಬೇಳೆ ಬೆಲೆ!GOOD NEWS : 'KSRTC' ಯಿಂದ ದಸರಾ ಸಂಭ್ರಮಕ್ಕೆ ಸ್ಪೆಷಲ್ ಗಿಫ್ಟ್: 3,000ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಸಂಚಾರ!ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!