LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹೂತಿಟ್ಟಿದ್ದ ತಾಯಿ ಶವ ರಾತ್ರೋರಾತ್ರಿ ಹೊರತೆಗೆದು ಮರು ಮರಣೋತ್ತರ ಪರೀಕ್ಷೆಗೆ ಬೈಕ್ ನಲ್ಲಿ ಕೊಂಡೊಯ್ದ ಮಕ್ಕಳು…!

ದಾವಣಗೆರೆ: ತಾಯಿಯ ಅಸಹಜ ಸಾವಿನ ತನಿಖೆಯ ಕುರಿತಾಗಿ ಅನುಮಾನಗೊಂಡ ಪುತ್ರರಿಬ್ಬರು ಮರು ಮರಣೋತ್ತರ ಪರೀಕ್ಷೆಗೆ ಶವವನ್ನು ರಾತ್ರೋರಾತ್ರಿ ಬೈಕ್ ನಲ್ಲಿ ಸಾಗಿಸುವಾಗ ಸಿಕ್ಕಿಬಿದ್ದಿದ್ದಾರೆ.

ದಾವಣಗೆರೆ ಜಿಲ್ಲೆ ಹರಿಹರ ತಾಲೂಕು ಆದಾಪುರ ಗ್ರಾಮದಲ್ಲಿ ಏಪ್ರಿಲ್ 29ರಂದು ಈರಮ್ಮ(58) ಅನುಮಾನಾಸ್ಪದವಾಗಿ ಮೃತಪಟ್ಟಿದ್ದರು. ತಮ್ಮ ತಾಯಿಯಧು ಸಹಜ ಸಾವಲ್ಲ, ನೆರೆಹೊರೆಯವರು ಸೇರಿಕೊಂಡು ಆಕೆಯನ್ನು ಕೊಲೆ ಮಾಡಿದ್ದಾರೆ ಎಂದು ಮೃತರ ಮಕ್ಕಳಾದ ಮಂಜುನಾಥ್ ಮತ್ತು ವೆಂಕಟೇಶ್ ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ನೆರೆಹೊರೆಯ 11 ಮಂದಿ ವಿರುದ್ಧ ಮಲೆಬೆನ್ನೂರು ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಪೊಲೀಸರು ತನಿಖೆ ನಡೆಸಿ ಯಾವುದೇ ಕೊಲೆ ಮೊಕದ್ದಮೆ ದಾಖಲಿಸದೆ ಮರಣೋತ್ತರ ಪರೀಕ್ಷೆ ಬಳಿಕ ಮೃತರ ಅಂತ್ಯಕ್ರಿಯೆ ನಡೆಸಲು ಕುಟುಂಬದವರಿಗೆ ಅವಕಾಶ ಮಾಡಿಕೊಟ್ಟಿದ್ದರು. ಆದರೆ, ಪೊಲೀಸರ ತನಿಖೆಯಿಂದ ತೃಪ್ತರಾಗದ ಮಂಜುನಾಥ್ ಮತ್ತು ವೆಂಕಟೇಶ್ ಶನಿವಾರ ರಾತ್ರಿ ತಮ್ಮ ಊರಿನ ಸ್ಮಶಾನದಲ್ಲಿ ಹೂತು ಹಾಕಿದ್ದ ತಮ್ಮ ತಾಯಿಯ ಶವದ ಅವಶೇಷಗಳನ್ನು ಹೊರತೆಗೆದು ರಾತ್ರೋರಾತ್ರಿ ಬೆಡ್ ಶೀಟ್ ನಲ್ಲಿ ಸುತ್ತಿಕೊಂಡು ಮರುಮರಣೋತ್ತರ ಪರೀಕ್ಷೆ ನಡೆಸಲು ದಾವಣಗೆರೆ ಜಿಲ್ಲಾಸ್ಪತ್ರೆಗೆ ಬೈಕ್ ನಲ್ಲಿ ತೆಗೆದುಕೊಂಡು ಹೋಗಿದ್ದಾರೆ.

ಆದರೆ, ಮಾರ್ಗಮಧ್ಯದಲ್ಲೇ ಅವರು ತೆರಳುತ್ತಿದ್ದ ಬೈಕ್ ಅಪಘಾತಕ್ಕೀಡಾಗಿದ್ದು, ಇಬ್ಬರೂ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ತಾಯಿಯ ಮರು ಮರಣೋತ್ತರ ಪರೀಕ್ಷೆಗೆ ಮಕ್ಕಳು ಒತ್ತಾಯಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಹಬ್ಬದ ಸಂದರ್ಭದಲ್ಲೆ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ : ರಾಜ್ಯದಲ್ಲಿ ಗಗನಕ್ಕೇರಿದ ಅಕ್ಕಿ, ತೊಗರಿಬೇಳೆ ಬೆಲೆ!GOOD NEWS : 'KSRTC' ಯಿಂದ ದಸರಾ ಸಂಭ್ರಮಕ್ಕೆ ಸ್ಪೆಷಲ್ ಗಿಫ್ಟ್: 3,000ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಸಂಚಾರ!ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!