ಮಡಿಕೇರಿ: ಕೊಡಗು ಜಿಲ್ಲೆ ಸುಂಟಿಕೊಪ್ಪದಲ್ಲಿ ಶಾಲೆಯಿಂದ ಮನೆಗೆ ತೆರಳುತ್ತಿದ್ದ 12 ವರ್ಷದ ಅಪ್ರಾಪ್ತ ಬಾಲಕಿಗೆ ಮೊಬೈಲ್ ನಲ್ಲಿ ಅಶ್ಲೀ ವಿಡಿಯೋ ತೋರಿಸಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿ ಬಂದಿದೆ.
ಆಟೋ ಚಾಲಕ ಪ್ರವೀಣ್ ಎಂಬಾತನ ವಿರುದ್ಧ ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕೇಸ್ ದಾಖಲಾಗಿದೆ. ಜು. 29ರಂದು ಸಂಜೆ ಶಾಲೆಯಿಂದ ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಗೆ ಮೊಬೈಲ್ ನಲ್ಲಿ ವಿಡಿಯೋ ತೋರಿಸುವ ನೆಪದಲ್ಲಿ ತನ್ನ ಮನೆಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಈ ವಿಷಯವನ್ನು ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ.
ಮೊದಲಿಗೆ ಘಟನೆಯ ಬಗ್ಗೆ ಮನೆಯವರೆಗೆ ಬಾಲಕಿ ವಿಷಯ ತಿಳಿಸಿರಲಿಲ್ಲ. ನಂತರ ತಾಯಿಯ ಬಳಿ ವಿಷಯ ತಿಳಿಸಿದ್ದು, ಆಗಸ್ಟ್ 3ರಂದು ಸುಂಟಿಕೊಪ್ಪ ಠಾಣೆಗೆ ಬಾಲಕಿಯ ತಾಯಿ ದೂರು ನೀಡಿದ್ದಾರೆ.