ಕೋಲಾರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ವಿಸ್ತರಣೆಯಾಗಿದ್ದು, ಹಲವು ಶಾಸಕರಿಗೆ ಸಚಿವ ಸ್ಥಾನ ಕೈತಪ್ಪಿದ್ದು, ಅಸಮಾಧಾನ ಭುಗಿಲೆದ್ದಿದೆ. ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಬೆಂಬಲಿಗರು ಆಕ್ರೋಶಗೊಂಡಿದ್ದಾರೆ.
ಶಾಸಕರ ಮನವೊಲಿಸುವ ಕಾರ್ಯ ಕೂಡ ತೆರೆಮರೆಯಲ್ಲಿ ನಡೆಯುತ್ತಿದೆ. ಇದರ ಬೆನ್ನಲ್ಲೆ ಇಂದು ಬಂಗಾರಪೇಟೆ ಬಂದ್‌ಗೆ ಕಾಂಗ್ರೆಸ್ ಮುಖಂಡರು ಹಾಗೂ ಬೆಂಬಲಿಗರು ಕರೆ ನೀಡಿದ್ದು, ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ.
ಬಂಗಾರಪೇಟೆಯಾದ್ಯಂತ ಅಂಗಡಿ ಮುಂಗಟ್ಟುಗಳು ಸಂಪೂರ್ಣವಾಗಿ ಮುಚ್ಚಿದ್ದು, ನಾರಾಯಣಸ್ವಾಮಿ ಬೆಂಬಲಿಗರು ನಗರದಲ್ಲಿ ಬೈಕ್ ರ್ಯಾಲಿ ನಡೆಸಿದ್ದರಎ. ಬೈಕ್ ರ್ಯಾಲಿಗೆ ವಿವಿಧ ಸಂಘಟನೆಗಳು ಬೆಂಬಲ ನೀಡಿವೆ.
ಬಂಗಾರಪೇಟೆಯ ಮುಖ್ಯ ರಸ್ತೆ ಬಂದ್ ಮಾಡಿ ಟೈರ್ ಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.