LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪಿಂಚಣಿದಾರರಿಗೆ ಮುಖ್ಯಮಾಹಿತಿ: ಸ್ಥಗಿತಗೊಂಡ ಪೆನ್ಷನ್ ಪುನಾರಂಭಕ್ಕೆ ಈ ದಾಖಲೆ ಸಲ್ಲಿಸಿ

ಸಾಮಾಜಿಕ ಭದ್ರತಾ ಯೋಜನೆಯಡಿ ವಿವಿಧ ಮಾಸಿಕ ಪಿಂಚಣಿ ಪಡೆಯುತ್ತಿರುವ ಮಡಿಕೇರಿ ತಾಲ್ಲೂಕಿನ ಫಲಾನುಭವಿಗಳ ಪೈಕಿ 2,778 ಪ್ರಕರಣಗಳಲ್ಲಿ ಸಂಶಯಾಸ್ಪದ ಪ್ರಕರಣಗಳು ಎಂದು ತಂತ್ರಾಂಶದ ಮುಖೇನ ಗುರುತಿಸಿ ಪಿಂಚಣಿ ಸ್ಥಗಿತಗೊಳಿಸಲಾಗಿದೆ.

ಸ್ಥಗಿತಗೊಂಡಿರುವ ಪಿಂಚಣಿಗಳ ಫಲಾನುಭವಿಗಳ ದಾಖಲೆಗಳನ್ನು ಪರಿಶೀಲಿಸಿ, ನಿಯಮಾನುಸಾರ ಕ್ರಮ ಕೈಗೊಂಡು ಅರ್ಹ ಫಲಾನುಭವಿಗಳಿಗೆ ಪಿಂಚಣಿಯನ್ನು ಪುನರ್‍ಪ್ರಾರಂಭಿಸಲು ಕ್ರಮವಹಿಸಲಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಪಿಂಚಣಿ ಪುನರ್‍ಪ್ರಾರಂಭಕ್ಕೆ ಅರ್ಹರಾಗಿರುವ ಫಲಾನುಭವಿಗಳು ಆದಾಯ ದೃಢೀಕರಣ ಪತ್ರ, ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿ, ಪಡಿತರ ಚೀಟಿ ಜೆರಾಕ್ಸ್ ಪ್ರತಿ, ವಯಸ್ಸಿನ ದೃಢೀಕರಣಕ್ಕಾಗಿ ಶಾಲಾ ದಾಖಲೆ ಜೆರಾಕ್ಸ್ ಪ್ರತಿ ಅಥವಾ ಅವರ ಮಕ್ಕಳ ಶಾಲಾ ದಾಖಲೆ ಜೆರಾಕ್ಸ್ ಪ್ರತಿ, ವಯಸ್ಸಿನ ಕುರಿತು ವೈದ್ಯರ ದೃಢೀಕರಣ ಪತ್ರ. ಅಗತ್ಯ ದಾಖಲೆಗಳನ್ನು ಇದೇ ಆಗಸ್ಟ್ 31 ರೊಳಗೆ, ಕಚೇರಿ ಅವಧಿಯಲ್ಲಿ ಮಡಿಕೇರಿ ತಾಲ್ಲೂಕು ಕಚೇರಿಯ ಅಟಲ್ ಜೀ ಜನಸ್ನೇಹಿ ಕೇಂದ್ರಕ್ಕೆ ಸಲ್ಲಿಸುವಂತೆ ಮಡಿಕೇರಿ ತಾಲ್ಲೂಕು ತಹಶೀಲ್ದಾರ್ ಶ್ರೀಧರ ಅವರು ಕೋರಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?