LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೆಕೆಆರ್ ಸೇರ್ಪಡೆಯಾಗಲಿದ್ದಾರಾ ಹಾರ್ದಿಕ್ ಪಾಂಡ್ಯ? ವೈರಲ್ ವಿಡಿಯೋದಿಂದ ಕಾವು ಪಡೆದುಕೊಂಡ ಐಪಿಎಲ್ ಟ್ರೇಡಿಂಗ್

ಐಪಿಎಲ್ ಮುಂದಿನ ಆವೃತ್ತಿಗೂ ಮುನ್ನ ಆಟಗಾರರ ಟ್ರೇಡಿಂಗ್ ಕುರಿತು ಭಾರಿ ಚರ್ಚೆಗಳು ನಡೆಯುತ್ತಿದ್ದು, ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಹೆಸರು ಮುಂಚೂಣಿಯಲ್ಲಿದೆ. ಕಳೆದ ಕೆಲ ಆವೃತ್ತಿಗಳಲ್ಲಿ ಮುಂಬೈ ತಂಡದ ಕಳಪೆ ಪ್ರದರ್ಶನ ಹಾಗೂ ಪಾಂಡ್ಯ ನಾಯಕತ್ವದ ಮೇಲೆ ವ್ಯಕ್ತವಾದ ಅಸಮಾಧಾನದಿಂದಾಗಿ ಅವರು ಬೇರೆ ತಂಡಕ್ಕೆ ಹಾರಲಿದ್ದಾರೆ ಎಂಬ ವದಂತಿಗಳು ಬಲವಾಗಿ ಕೇಳಿಬರುತ್ತಿವೆ.

ಇದೀಗ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ಹಂಚಿಕೊಂಡಿರುವ ವಿಡಿಯೋವೊಂದು ಈ ಅನುಮಾನಗಳಿಗೆ ಇನ್ನಷ್ಟು ರಸ his ನೀಡಿದೆ. ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್‌ನಲ್ಲಿ ಕೆಕೆಆರ್ ಸ್ಪಿನ್ನರ್ ವರುಣ್ ಚಕ್ರವರ್ತಿ ಕಸರತ್ತು ನಡೆಸುತ್ತಿರುವಾಗ, ಹಿಂಬದಿಯಿಂದ ಬಂದ ಹಾರ್ದಿಕ್ ಪಾಂಡ್ಯ ಅವರನ್ನು ತಮಾಷೆ ಮಾಡುತ್ತಾ ಹಾದುಹೋಗುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಹಲ್ ಚಲ್ ಸೃಷ್ಟಿಸಿದೆ. ಕೆಕೆಆರ್ ತನ್ನ ಅಧಿಕೃತ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳುತ್ತಿದ್ದಂತೆ, ಅಭಿಮಾನಿಗಳು ಪಾಂಡ್ಯ ಕೆಕೆಆರ್ ನಾಯಕನಾಗುವುದು ಖಚಿತ ಎಂದು ಕಮೆಂಟ್ ಮಾಡಲು ಪ್ರಾರಂಭಿಸಿದ್ದಾರೆ.

ಅಜಿಂಕ್ಯ ರಹಾನೆ ಅವರ ನಿವೃತ್ತಿಯ ನಂತರ ಕೆಕೆಆರ್ ಪ್ರಸ್ತುತ ಹೊಸ ನಾಯಕನ ಹುಡುಕಾಟದಲ್ಲಿದೆ. ಕ್ರಿಕ್‌ಬಜ್ ವರದಿ ಪ್ರಕಾರ, ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಪಾಂಡ್ಯ ಅವರನ್ನು ಸೆಳೆಯಲು ಹೆಚ್ಚಿನ ಆಸಕ್ತಿ ತೋರಿಸುತ್ತಿವೆ. ಲಕ್ನೋ ಸೂಪರ್ ಜೈಂಟ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ಕೂಡ ಈ ರೇಸ್‌ನಲ್ಲಿವೆ ಎನ್ನಲಾಗಿದೆ.

ಇನ್ನೊಂದೆಡೆ, ಮುಂಬೈ ಇಂಡಿಯನ್ಸ್ ಪಾಂಡ್ಯ ಅವರನ್ನು ಬೇರೆ ತಂಡಕ್ಕೆ ನೀಡಲು ಆಸಕ್ತಿ ಹೊಂದಿಲ್ಲ ಎಂದು ಕೆಲ ಮೂಲಗಳು ತಿಳಿಸಿದ್ದರೂ, ಇತರ ಫ್ರಾಂಚೈಸಿಗಳಿಂದ ಪಾಂಡ್ಯ ಕುರಿತು ವಿಚಾರಣೆಗಳು ನಡೆದಿರುವುದು ಸತ್ಯ. ದೆಹಲಿ ಕ್ಯಾಪಿಟಲ್ಸ್‌ನ ಅಕ್ಷರ್ ಪಟೇಲ್, ಲಕ್ನೋ ತಂಡದ ನಿಕೋಲಸ್ ಪೂರನ್ ಅಥವಾ ರಾಜಸ್ಥಾನ್ ರಾಯಲ್ಸ್‌ನ ಯಶಸ್ವಿ ಜೈಸ್ವಾಲ್ ಬದಲಿಗೆ ಪಾಂಡ್ಯ ಅವರನ್ನು ಟ್ರೇಡ್ ಮಾಡಿಕೊಳ್ಳುವ ಸಾಧ್ಯತೆಗಳ ಬಗ್ಗೆಯೂ ಚರ್ಚೆಗಳು ನಡೆಯುತ್ತಿವೆ.

ಒಂದು ವೇಳೆ ಕೆಕೆಆರ್ ಜೊತೆ ಟ್ರೇಡಿಂಗ್ ನಡೆದರೆ, ಮುಂಬೈ ಇಂಡಿಯನ್ಸ್ ತಂಡವು ಪ್ರತಿಯಾಗಿ ಹರ್ಷಿತ್ ರಾಣಾ ಮತ್ತು ರಿಂಕು ಸಿಂಗ್ ಅವರನ್ನು ಕೇಳಬೇಕು ಎಂದು ಭಾರತದ ಮಾಜಿ ಆಟಗಾರ ರವಿಚಂದ್ರನ್ ಅಶ್ವಿನ್ ಅಭಿಪ್ರಾಯಪಟ್ಟಿದ್ದಾರೆ. ಒಟ್ಟಿನಲ್ಲಿ ಮುಂಬರುವ ಐಪಿಎಲ್ ಆವೃತ್ತಿಗೂ ಮುನ್ನ ಹಾರ್ದಿಕ್ ಪಾಂಡ್ಯ ಭವಿಷ್ಯ ಯಾವ ಹಾದಿ ಹಿಡಿಯಲಿದೆ ಎಂಬುದು ತೀವ್ರ ಕುತೂಹಲ ಕೆರಳಿಸಿದೆ.

Wait for it 😂🏋️‍♀️ pic.twitter.com/z6E6F2thF9

— KolkataKnightRiders (@KKRiders) August 12, 2026

Hardik KKR captain….Lets go ⛹️‍♀️ pic.twitter.com/okE1e0Jr0Z

— Pugna (@Pugna9211) August 12, 2026

Future Kaptaan Purple Pandya 🫶🥹🧿

— Venomous Agent X (@Shubhangi0106) August 12, 2026

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?